Connect with us

LATEST NEWS

Maharstra: ಎನ್‌ಸಿಸಿ ವಿದ್ಯಾರ್ಥಿಗಳ ಮೇಲೆ ಅಮಾನುಷ ಹಲ್ಲೆ..!

Published

on

ಎನ್‌ಸಿಸಿ- ನ್ಯಾಷನಲ್ ಕೆಡೆಟ್ ಕಾರ್ಪ್ಸ್ ಇದರ ಹಿರಿಯ ವಿದ್ಯಾರ್ಥಿಯೊಬ್ಬ 8 ಮಂದಿ ಕಿರಿಯ ಎನ್‌ಸಿಸಿ ಕೆಡೆಟ್‌ಗಳಿಗೆ ಅಮಾನುಷವಾಗಿ ಥಳಿಸುತ್ತಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಹಾಗೂ ಹಲ್ಲೆ ನಡೆಸಿದವನ ವಿರುದ್ಧ ಕ್ರಮಕ್ಕೆ ಜನರು ಒತ್ತಾಯಿಸಿದ್ದಾರೆ.

ಥಾಣೆ: ಎನ್‌ಸಿಸಿ- ನ್ಯಾಷನಲ್ ಕೆಡೆಟ್ ಕಾರ್ಪ್ಸ್ ಇದರ ಹಿರಿಯ ವಿದ್ಯಾರ್ಥಿಯೊಬ್ಬ 8 ಮಂದಿ ಕಿರಿಯ ಎನ್‌ಸಿಸಿ ಕೆಡೆಟ್‌ಗಳಿಗೆ ಅಮಾನುಷವಾಗಿ ಥಳಿಸುತ್ತಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಹಾಗೂ ಹಲ್ಲೆ ನಡೆಸಿದವನ ವಿರುದ್ಧ ಕ್ರಮಕ್ಕೆ ಜನರು ಒತ್ತಾಯಿಸಿದ್ದಾರೆ.

ಇದು ಮಹಾರಾಷ್ಟ್ರದ ಥಾಣೆಯ ಜೋಶಿ ಬೇಡೇಕರ್ ಕಾಲೇಜಿನ ಎನ್‌ಸಿಸಿ ಘಟಕಕ್ಕೆ ಸಂಬಂಧಿಸಿದ ವೀಡಿಯೋ ಎಂದು ತಿಳಿದು ಬಂದಿದೆ.

ಎಂಟು ಮಂದಿ ಯುವಕರು ಕೆಸರಿನಲ್ಲಿ ತಲೆ ನೆಲಕ್ಕೆ ಹಾಕಿ ಕೈಗಳನ್ನು ಹಿಂದಕ್ಕೆ ಕಟ್ಟಿ ಕುಳಿತಿರುವುದು ಹಾಗೂ ಈ ಯುವಕರನ್ನು ಒಬ್ಬ ವ್ಯಕ್ತಿ ಕೋಲಿನಿಂದ ಬಲವಾಗಿ ಹೊಡೆಯುತ್ತಿರುವ ದೃಶ್ಯ ವಿಡಿಯೊದಲ್ಲಿದೆ.

ಅಪರಿಚಿತ ವಿದ್ಯಾರ್ಥಿಯೊಬ್ಬ ಈ ಆಘಾತಕಾರಿ ಕೃತ್ಯದ ವಿಡಿಯೊ ರೆಕಾರ್ಡ್ ಮಾಡಿದ್ದಾರೆ.

‘ಇದು ಅತ್ಯಂತ ಖಂಡನೀಯ ಘಟನೆ.

ಈ ಸಂಬಂಧ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ.

ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ.

ಈ ಕುರಿತಂತೆ ನಾವು ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ’ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಚಿತ್ರಾ ನಾಯ್ಕ್ ತಿಳಿಸಿದ್ದಾರೆ.

ಹಲ್ಲೆ ನಡೆಸುತ್ತಿರುವ ವ್ಯಕ್ತಿ ಎನ್‌ಸಿಸಿ ಕೆಡೆಟ್ ಆಗಿದ್ದಾರೆ.

ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸಮಿತಿಯನ್ನು ಕೂಡಾ ರಚಿಸಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

ಈ ಕಾಲೇಜಿನಲ್ಲಿ ಸುಮಾರು 40 ವರ್ಷಗಳಿಂದ ಎನ್‌ಸಿಸಿ ತರಬೇತಿ ನಡೆಯುತ್ತಿದೆ.

ಅದರೆ ವಿಡಿಯೊದಲ್ಲಿ ಕಂಡು ಬರುತ್ತಿರುವ ಘಟನೆ ಉಪನ್ಯಾಸಕರ ಅನುಪಸ್ಥಿತಿಯಲ್ಲಿ ನಡೆದಿದೆ ಎಂದಿದ್ದಾರೆ.

ಎನ್‌ಸಿಪಿ ಶಾಸಕ ಡಾ. ಜಿತೇಂದ್ರ ಅವ್ಹಾದ್ ಅವರು ಈ ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಈ ಅಮಾನುಷ ಘಟನೆಯ ವಿರುದ್ಧ ಸರಕಾರ ತತ್‌ಕ್ಷಣ ಕಠಿಣ ಕ್ರಮ ತೆಗೆದುಕೊಳ್ಳ ಬೇಕೆಂದು ಆಗ್ರಹಿಸಿದ್ದಾರೆ.

DAKSHINA KANNADA

ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!

Published

on

ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.

ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.

ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

bangalore

‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ರಿಲೀಸ್ ಡೇಟ್ ಚೇಂಜ್…!

Published

on

ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನೆಮಾದ ಸೈಡ್ ಬಿ ಅಕ್ಟೋಬರ್​ 20ರ ಬದಲಿಗೆ ಅಕ್ಟೋಬರ್​ 27ರಂದು ರಿಲೀಸ್​ ಆಗಲಿದೆ.

 

ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು.

ಆದ್ರೆ ಅಕ್ಟೋಬರ್ 20ಕ್ಕೆ ಸಪ್ತ ಸಾಗರದಾಚೆ ಸಿನೆಮಾ ರಿಲೀಸ್ ಆಗುತ್ತಿಲ್ಲ.

ಸೈಡ್ ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಭಾರೀ ಬಜೆಟ್ ಚಿತ್ರಗಳು, ಸ್ಟಾರ್ ನಟರ ಚಿತ್ರಗಳು, ಪರಭಾಷೆಯ ಚಿತ್ರಗಳ ಹಾವಳಿಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಬದಲಾಗಿದೆ.

ಹೀಗಾಗಿ ಚಿತ್ರತಂಡ ಅಕ್ಟೋಬರ್ 27ಕ್ಕೆ ಪಾರ್ಟ್ ಬಿ ರಿಲೀಸ್ ಮಾಡುವ ಘೋಷಣೆಯನ್ನು ಮಾಡಿದೆ.

ಹೌದು ..ಅಕ್ಟೋಬರ್​ 20ರ ಬದಲಿಗೆ ಅಕ್ಟೋಬರ್​ 27ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ರಿಲೀಸ್​ ಆಗಲಿದೆ.

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ.

ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.

ಫೈನಲಿ ಜನ ಕಾತುರದಿಂದ ಕಾಯುತ್ತಿರುವ ಸಪ್ತ ಸಾಗರದಾಚೆ ಸಿನೆಮಾದ ಪಾರ್ಟ್ ಬಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ಬಿಡುಗಡೆಗೆ ಸಿದ್ದವಾಗಿದೆ.

 

Continue Reading

DAKSHINA KANNADA

ಮನೆಯ ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ- 6 ಜನ ಬಂಧನ..!

Published

on

ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.

ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.

ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.

ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.

Continue Reading

LATEST NEWS

Trending