Connect with us

DAKSHINA KANNADA

ರಾಜಕೀಯದವ್ರಿಗೆ ಸಿಕ್ಕ ಸಿಕ್ಕಲ್ಲಿ ಮೆಟ್ಟಲ್ಲಿ ಹೊಡಿಬೇಕು: ಮಹೇಶ್‌ ತಿಮರೋಡಿ

Published

on

ಪುತ್ತೂರು: ರಾಜಕೀಯದವರು ಎಲ್ಲೆಲ್ಲಿ ಸಿಕ್ತಾರೆ ಅಲ್ಲಲ್ಲಿ ಅವ್ರಿಗೆ ಮೆಟ್ಟಲ್ಲಿ ಹೊಡಿಬೇಕು. ಒಬ್ಬ ಹಿಂದೂ ಅಂತ ಹೇಳಿಕೊಂಡು ಹೋಗುವುದು ಮತ್ತೋರ್ವ ಮುಸಲ್ಮಾನ ಅಂತ ಹೇಳಿಕೊಂಡು ಹೋಗುವುದು. ಮನೆಯ ಹೊಸಲು ತೊಳಿಯಲು ಬಿಡಬಾರದು ಎಂದು ಹಿಂದೂ ನಾಯಕ ಮಹೇಶ್‌ ತಿಮರೋಡಿ ರಾಜಕೀಯ ನಾಯಕರನ್ನು ಹಿಗ್ಗಾಮುಗ್ಗಾ ಝಾಡಿಸಿದ್ದಾರೆ.

ಬೆಳ್ಳಾರೆ ಪ್ರವೀಣ್‌ ಹತ್ಯೆಗೆ ಸಂಬಂಧಿಸಿದಂತೆ ಅವರ ಕುಟುಂಬಸ್ಥರನ್ನು ಭೆಟಿ ಮಾಡಿ ಸಾಂತ್ವಾನ ತಿಳಿಸಿದ ನಂತರ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಹತ್ತಿರ ಬರುವಾಗ ಇದೆಲ್ಲಾ ಮಾಮೂಲಿ. ಹಿಜಾಬ್‌ ವಿವಾದ ಶುರುವಾದಾಗ ಕೊಲೆಯಾಗುತ್ತದೆ ಎಂದು ಹೇಳಿದ್ದೆ,

ಆಗ ಹರ್ಷನ ಕೊಲೆಯಾಯಿತು. ಪ್ರಮೋದ್‌ ಮುತಾಲಿಕ್‌ ಇಲ್ಲಿ ಬರಬೇಕಿದ್ರೆ ಜಿಲ್ಲಾ ಗಡಿಭಾಗದಲ್ಲೇ ಅವರನ್ನು ಅರೆಸ್ಟ್‌ ಮಾಡಿದರು. ಅವರು ಬಂಧಿಸುವಂತಹ ದ್ರೋಹ ಏನು ಮಾಡಿದರು. ಅವರು ಅಪಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಬೇಕಾ ಎಂದು ಪ್ರಶ್ನಿಸಿದರು.

ಇವರು ಬರೇ ದುಡ್ಡು, ಕಮೀಷನ್‌ ದಂಧೆಗೆ ಸಾಯ್ತಾ ಇದ್ದಾರೆ. ಇವರಿಗೆ ಧರ್ಮ ರಕ್ಷಣೆಗೆ ಓಟು ಕೊಟ್ಟದ್ದು, ಅಲ್ಲೊಬ್ಬ ತೇಜಸ್ವಿ ಸೂರ್ಯ ಅಂತ ಸಂಸದ ಜನರಿಗೆ ರಕ್ಷಣೆ ಕೊಡಲು ಆಗಲ್ಲ ಅಂತಾನೆ ಅವಿವೇಕಿ. ಅವನಿಗೆ ತಲೆ ಸರಿ ಉಂಟಾ? ಜನಗಳಿಗೆ ರಕ್ಷಣೆ ಕೊಡಲಾಗಿದ್ದರೆ ಮನೆಗೆ ಹೋಗಿ.

ತೀಟೆ ಇದೆ ಎಂದು ಟೀವಿ ಇದೆ ಮಾತನಾಡುವುದಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಪಕ್ಷ ಹಿಂದುಗಳನ್ನು ಕಡೆಗಣಿಸುತ್ತಿದೆ. ಹಿಂದುತ್ವಕ್ಕಾಗಿ ಹೋರಾಡಿದವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending