Connect with us

    DAKSHINA KANNADA

    ‘ತೃತೀಯ ಲಿಂಗಿಯನ್ನು ಮಂಚಕ್ಕೆ ಕರೆದ’: ಮಂಗಳೂರು ಹಿರಿಯ ಪೊಲೀಸ್‌ ಅಧಿಕಾರಿ ಮೇಲೆ ಗಂಭೀರ ಆರೋಪ..!

    Published

    on

    ಮಂಗಳೂರು: ” ನಮಗೆ ರಕ್ಷಣೆ ನೀಡಬೇಕಾದ ನಗರದ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ರಾತ್ರಿ ತನ್ನನ್ನು ಸೆಕ್ಸ್‌ಗೆ ಆಹ್ವಾನಿಸುತ್ತಿದ್ದಾರೆ. ಹಿರಿಯ ಪೊಲೀಸ್‌ ಅಧಿಕಾರಿಯೇ ಹೀಗೆ ಮಾಡಿದರೆ ನಾವು ಯಾರಿಗೆ ದೂರು ನೀಡುವುದು?” ಎಂದು ತೃತೀಯ ಲಿಂಗಿಯೊಬ್ಬರು ಮಂಗಳೂರು ಪೊಲೀಸ್‌ ಅಧಿಕಾರಿಯೊಬ್ಬರ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.

    ಮಂಗಳವಾರ ನಗರದ ಜಿ.ಪಂ. ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ, ಅರಿವು ಕಾರ್ಯಾಗಾರ ನಡೆದಿತ್ತು. ಈ ವೇಳೆ ಮಾತನಾಡಿದ ಅಲ್ಪಸಂಖ್ಯಾತರೊಬ್ಬರು ನಮಗೆ ಯಾವುದೇ ಕಚೇರಿ ಸೇರಿದಂತೆ ಎಲ್ಲಿಯಾದರೂ ಕಸ ಗುಡಿಸೋ ಕೆಲವಾದರೂ ಕೊಡಿಸಿ.

    ನಮಗೂ ಈ ಹಾಳು ದಂಧೆ ನಡೆಸೋಕೆ ಮನಸ್ಸಿಲ್ಲ. ಒಳ್ಳೆಯ ಜೀವನ ನಡೆಸುತ್ತೇವೆ ಎಂದರು. ಇದೇ ವೇಳೆ ಮತ್ತೋರ್ವರು ಮಾತನಾಡಿ, ನಗರದ ಉನ್ನತ ಪೊಲೀಸ್‌ ಅಧಿಕಾರಿಯೊಬ್ಬರು ರಾತ್ರಿ ತನ್ನನ್ನು ಸೆಕ್ಸ್‌ಗೆ ಆಹ್ವಾನಿಸುತ್ತಿದ್ದಾರೆ. ಹಿರಿಯ ಪೊಲೀಸ್‌ ಅಧಿಕಾರಿಯೇ ಹೀಗೆ ಮಾಡಿದರೆ ನಾವು ಯಾರಿಗೆ ದೂರು ನೀಡುವುದು?’ ಎಂದು ತಮ್ಮ ಅಳಲು ತೋಡಿಕೊಂಡರು.

    ಇದಕ್ಕೆ ಹಿರಿಯ ಸಿವಿಲ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದ.ಕ ಜಿಲ್ಲೆಯ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜೆ. ಇದಕ್ಕೆ ಪ್ರತಿಕ್ರಿಯೆ ನೀಡಿ, ಶೋಷಣೆಗೆ ಒಳಗಾಗುವ ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ದೂರು ಕೊಡಬೇಕು.

    ಉಚಿತವಾಗಿ ನ್ಯಾಯ ಪಡೆಯಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೂ ದೂರು ನೀಡಬಹುದು. ಪ್ರಾಧಿಕಾರದ ಸೇವೆಯು ಉಚಿತವಾಗಿರುತ್ತದೆ.

    ದೂರುಗಳು ಬಂದಾಗ ನಾವು ಸಂಬಂಧಪಟ್ಟ ಇಲಾಖೆಗಳಿಗೆ ಸೂಕ್ತ ನಿರ್ದೇಶನಗಳನ್ನು ಕೂಡ ಪಡೆಯಲು ಅವಕಾಶವಿರುತ್ತದೆ ಎಂದು ನ್ಯಾಯಾಧೀಶೆ ಧೈರ್ಯ ತುಂಬಿದರು.
    ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪ್ರಥ್ವಿರಾಜ ರೈ ಅಧ್ಯಕ್ಷತೆ ವಹಿಸಿದ್ದರು.

    DAKSHINA KANNADA

    ಪಿಲಿಕುಳ ಕಂಬಳಕ್ಕೆ ಪ್ರಾಣಿಪ್ರಿಯರ ವಿರೋಧ !

    Published

    on

    ಮಂಗಳೂರು: ಕಂಬಳ ಕರಾವಳಿ ಕರ್ನಾಟಕದ ಜನಪದ ಕ್ರೀಡೆ. ಈ ಹಿಂದೆ ನಿಷೇಧಕ್ಕೆ ಒಳಪಟ್ಟರೂ ನಂತರ ಕಂಬಳ ನಡೆಸುವುದಕ್ಕೆ ಅನುಮತಿ ಸಿಕ್ಕಿತ್ತು. ಆದರೆ ಈಗ ಸರ್ಕಾರಿ ಪ್ರಾಯೋಜಿತ ಮೊದಲ ಕಂಬಳಕ್ಕೆ ಪ್ರಾಣಿ ಪ್ರಿಯರ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಕಳೆದ ಹತ್ತು ವರ್ಷಗಳಿಂದ ನಿಂತು ಹೋಗಿದ್ದ ಪಿಲಿಕುಳದ ಸರ್ಕಾರಿ ಕಂಬಳ ಈ ಬಾರಿ ಮತ್ತೆ ಆಯೋಜಿಸಲು ಜಿಲ್ಲಾಡಳಿತ ಮುಂದಾಗಿದೆ. ಹೀಗಾಗಿ ಪಿಲಿಕುಳದ ಗುತ್ತಿನ ಮನೆಯ ಮುಂದೆ ಕಂಬಳ ಕರೆ ನಿರ್ಮಾಣ ಮಾಡಿ ಕಂಬಳದ ದಿನಾಂಕ ಕೂಡಾ ಘೋಷಣೆ ಮಾಡಿತ್ತು. ನವೆಂಬರ್ 9 ರಂದು ನಿಗದಿಯಾಗಿದ್ದ ಈ ಕಂಬಳ, ಪಂಚಾಯತ್ ಉಪಚುನಾವಣೆಯ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು.

    ಇದನ್ನೂ ಓದಿ: 30 ವರ್ಷಕ್ಕೆ ಮದುವೆಯಾಗುವ ಯೋಚನೆ ಮಾಡಿದ್ರೆ ಇದನ್ನು ಓದಲೇ ಬೇಕು !!
    ಈ ನಡುವೆ ಪೆಟಾದವರು ಬೆಂಗಳೂರು ಕಂಬಳ ಹಾಗೂ ಪಿಲಿಕುಳ ಕಂಬಳದ ಆಯೋಜನೆಯ ಬಗ್ಗೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಬೆಂಗಳೂರು ಕಂಬಳ ಇನ್ನೂ ದಿನ ನಿಗದಿಯಾಗದೇ ಇದ್ದರೂ ಕಂಬಳ ನಡೆಸಲು ಅನುಮತಿ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಪೆಟಾ ಸಲ್ಲಿಸಿದ ಈ ಅರ್ಜಿಗೆ ಬೆಂಗಳೂರು ಕಂಬಳ ಆಯೋಜಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಕೀಲರ ಮೂಲಕ ವಾದ ಮಂಡಿಸಿದ್ದಾರೆ. ಆದ್ರೇ ಪಿಲಿಕುಳದ ಸರ್ಕಾರಿ ಕಂಬಳದ ವಿಚಾರವಾಗಿ ಯಾವುದೇ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.
    ಹೀಗಾಗಿ ಪಿಲಿಕುಳ ಕಂಬಳ ನಡೆಯುತ್ತದೆಯೋ ಇಲ್ಲವೋ ಎಂಬ ಅನುಮಾನ ಕಾಡಿದೆ. ಮಂಗಳೂರು ನಗರದಲ್ಲಿ ಕಂಬಳ ನಡೆಯದೇ ಇದ್ದ ಸಂದರ್ಭದಲ್ಲಿ ಪಿಲಿಕುಳದಲ್ಲಿ ಸರ್ಕಾರದ ವತಿಯಿಂದ ಕಂಬಳ ಆರಂಭಿಸಲಾಗಿತ್ತು. ಕಾರಣಾಂತರಗಳಿಂದ ನಿಂತು ಹೋಗಿದ್ದ ಕಂಬಳ ಮತ್ತೆ ಆರಂಭವಾದ ಕಾರಣ ಕಂಬಳ ಪ್ರೇಮಿಗಳು ಸಂತಸಗೊಂಡಿದ್ದರು. ಆದ್ರೆ ಇದೀಗ ಪೆಟಾ ಪಿಲಿಕುಳ ಕಂಬಳಕ್ಕೆ ಅಪಸ್ವರ ಎತ್ತಿದ್ದು, ಇಲ್ಲಿ ನಡೆಯುವ ಗದ್ದಲದಿಂದ ಪಿಲಿಕುಳದ ಪ್ರಾಣಿ ಸಂಗ್ರಹಾಲಯದಲ್ಲಿ ಇರುವ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂಬ ವಾದವನ್ನು ನ್ಯಾಯಾಲಯದ ಮುಂದೆ ಇಟ್ಟಿದೆ.

     

    Continue Reading

    BIG BOSS

    ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ

    Published

    on

    ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್‌ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.

    ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

    ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಂಚು ರೂಪಿಸುತ್ತಿದ್ದಾಗಲೇ ಅರೆಸ್ಟ್‌

    Published

    on

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.

    ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.

    ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

    ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .

    Continue Reading

    LATEST NEWS

    Trending