Friday, August 19, 2022

ಭೀಕರ ಅಗ್ನಿ ದುರಂತ: ಏಳು ಮಂದಿ ಸಜೀವ ದಹನ-60 ಗುಡಿಸಲು ಭಸ್ಮ

ಹೊಸದಿಲ್ಲಿ: ಭೀಕರ ಅಗ್ನಿ ದುರಂತದಲ್ಲಿ ಏಳು ಮಂದಿ ಸಜೀವ ದಹನವಾಗಿದ್ದು ಮಾತ್ರವಲ್ಲದೇ 60 ಗುಡಿಸಲುಗಳು ಸುಟ್ಟು ಕರಕಲಾದ ಘಟನೆ ಹೊಸದಿಲ್ಲಿಯ ಗೋಕಲ್‌ಪುರಿ ಭಾಗದ ಕೊಳಗೇರಿ ಪ್ರದೇಶದಲ್ಲಿ ನಡೆದಿದೆ.


ಶುಕ್ರವಾರ ರಾತ್ರಿ ಸುಮಾರು 1 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದ್ದು, ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.

ಒಟ್ಟು ಹದಿಮೂರು ಅಗ್ನಿಶಾಮಕ ವಾಹನ ಸ್ಥಳದಲ್ಲಿದ್ದು, ನಿರಂತರ ಕಾರ್ಯಾಚರಣೆ ನಡೆಸಿದ ಬಳಿಕ ಕೊನೆಗೂ ಸಿಬ್ಬಂದಿ ಅಗ್ನಿ ನಂದಿಸಲು ಯಶಸ್ವಿಯಾಗಿದ್ದಾರೆ.

ಬೆಂಕಿ ನಂದಿಸಿದ ಬಳಿಕ ಅಲ್ಲಿದ್ದ ಮೃತದೇಹಗಳನ್ನು ಸಿಬ್ಬಂದಿ ಹೊರ ತೆಗೆದಿದ್ದಾರೆ ಎಂದು ದಿಲ್ಲಿ ಅಗ್ನಿ ಶಾಮಕ ದಳ ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ದಿಲ್ಲಿ ಈಶಾನ್ಯ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ದೇವೇಶ್ ಕುಮಾರ್ ಮಹ್ಲಾ, ರಾತ್ರಿ ಒಂದು ಗಂಟೆಯ ಸುಮಾರಿಗೆ ಅಗ್ನಿ ದುರಂತ ಸಂಭವಿಸಿದ ಬಗ್ಗೆ ಮಾಹಿತಿ ಸಿಕ್ಕಿತ್ತು.

ಕೂಡಲೇ ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ಧಾವಿಸುವಂತೆ ತಿಳಿಸಿದೆವು ಎಂದರು.

LEAVE A REPLY

Please enter your comment!
Please enter your name here

Hot Topics

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...

ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿಯ ಬಂಧನ

ಕುಶಾಲನಗರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಕುರಿತು ವಶಕ್ಕೆ ತೆಗೆದುಕೊಳ್ಳಲಾದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು...