Friday, May 27, 2022

ಪುಣೆಯ ಫ್ಯಾಷನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ದುರಂತ : 500ಕ್ಕೂ ಹೆಚ್ಚು ಅಂಗಡಿಗಳು ಸುಟ್ಟುಭಸ್ಮ

ಪುಣೆ : ಪುಣೆಯ ಕ್ಯಾಂಪ್ ಪ್ರದೇಶದ ಪ್ರಸಿದ್ಧ ಫ್ಯಾಷನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 500ಕ್ಕೂ ಹೆಚ್ಚು ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲವಾದರೂ ಪುಣೆ ಕಂಟೋನ್ಮೆಂಟ್ ಬೋರ್ಡ್ ನ (ಪಿಸಿಬಿ) ಅಗ್ನಿಶಾಮಕ ದಳದ ಮುಖ್ಯಸ್ಥರು ಬೆಂಕಿ ಯನ್ನು ನಂದಿಸಿದ ನಂತರ ಮನೆಗೆ ಹಿಂದಿರುಗುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಪಿಸಿಬಿ ಸಿಇಒ ಅಮಿತ್ ಕುಮಾರ್ ಅವರು ಮಾತನಾಡಿ, ‘ಅವರು ನನಗೆ ಕರೆ ಮಾಡಿ ಬೆಂಕಿ ಯನ್ನು ನಿಯಂತ್ರಣದಲ್ಲಿರಿಸಲಾಗಿದೆ ಎಂದು ನನಗೆ ಮಾಹಿತಿ ನೀಡಿದರು.

ನಂತರ ವಿಮಾನ ನಿಲ್ದಣಕ್ಕೆ ಹೋಗುವಾಗ ಶನಿವಾರ ಬೆಳಗ್ಗೆ 6.30ರ ಸುಮಾರಿಗೆ ಬಸ್ ಚಕ್ರಕ್ಕೆ ಸಿಲುಕಿ ಪ್ರಕಾಶ್ ಹಸಬೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಪಣಂಬೂರಿನಲ್ಲಿ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್‌ಶಿಪ್‌ಗೆ ಚಾಲನೆ

ಮಂಗಳೂರು: ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ಮಂಗಳೂರು ತಾಲೂಕಿನ ಪಣಂಬೂರು ಕಡಲ ತಡಿಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್‌ಶಿಪ್‌ಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು.ಇಂದಿನಿಂದ ಮೇ...

ಪುತ್ತೂರು: ಮರ ಕಡಿಯುತ್ತಿದ್ದಾಗ ವಿದ್ಯುತ್ ಶಾಕ್-ಕಾರ್ಮಿಕ ಸಾವು

ಪುತ್ತೂರು: ಮರ ಕಡಿಯುತ್ತಿದ್ದ ಸಂದರ್ಭ ಪಕ್ಕದಲ್ಲೇ ಹಾದು ಹೋಗಿದ್ದ ವಿದ್ಯುತ್ ವಯರ್ ತಾಗಿ ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನ ನರಿಮೊಗರು ಎಂಬಲ್ಲಿ ಗುರುವಾರ ನಡೆದಿದೆ.ಮಾಡನ್ನೂರು ನಿವಾಸಿ ಮಲ್ಲ ಎಂಬವರ ಪುತ್ರ ವಸಂತ(35)...