Connect with us

LATEST NEWS

ಭಾರಿ ಮಳೆ: ಮಂಗಳೂರು-ಮಡಿಕೇರಿ ಹೆದ್ದಾರಿಯಲ್ಲಿ ಭೂಕುಸಿತ

Published

on

ಕೊಡಗು: ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ.

ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಮಡಿಕೇರಿಯಲ್ಲಿ ವರುಣಾರ್ಭಟಕಳೆದ ಮೂರು ವರ್ಷಗಳಿಂದ ಮಳೆಯ ಅಬ್ಬರದಿಂದ ಕಂಗಾಲಾಗಿದ್ದ ಜಿಲ್ಲೆಯ ಜನರು ಮತ್ತೆ ಭೀತಿಯಲ್ಲಿದ್ದಾರೆ. ಗುಡ್ಡ ಕುಸಿತದಿಂದ ಮನೆಗಳಿಗೆ ಯಾವುದೇ ತೊಂದರೆಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರಕ್ಕೆ ಅಲ್ಲಿನ ನಿವಾಸಿಗಳನ್ನು ಕಳುಹಿಸಲಾಗಿದೆ ಎಂದು ತಹಶೀಲ್ದಾರ್ ಮಹೇಶ್​​ ಹೇಳಿದರು. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಆರಂಭವಾಗಿದೆ. ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ನದಿ‌ಪಾತ್ರದ ಜನರು ಮತ್ತು ಬೆಟ್ಟಗುಡ್ಡದಲ್ಲಿ ನೆಲೆಸಿರುವವವರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಟವರ್ ಕೆಳಭಾಗದಲ್ಲಿ ಮಣ್ಣು ಕುಸಿತ ಮಡಿಕೇರಿಯ ಆಕಾಶವಾಣಿ ಟವರ್ ಕೆಳಭಾಗದಲ್ಲಿ ಮಣ್ಣು ಕುಸಿತವಾಗಿದೆ.

ಟವರ್ ಕೆಳ ಭಾಗದಲ್ಲಿ ಹಲವಾರು ಮನೆಗಳಿದ್ದು ನಿವಾಸಿಗಳು ಆತಂಕದಲ್ಲಿದ್ದಾರೆ. ಮಡಿಕೇರಿಯ ಎತ್ತರದ ಪ್ರದೇಶದಲ್ಲಿ ಟವರ್ ನಿರ್ಮಾಣ ಮಾಡಲಾಗಿದೆ. ಹೆಚ್ಚು ಮಳೆ ಬೀಳುತ್ತಿದ್ದು ಮಣ್ಣು ಜಾರಿದರೆ ಟವರ್ ಕುಸಿತವಾಗಿ ಮನೆಗಳ ಮೇಲೆ ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಭಯದಲ್ಲಿದ್ದಾರೆ. ಹಿಂದೆಯೂ ಟವರ್​ ಕೆಳಗೆ ಮಣ್ಣು ಕುಸಿದಿದ್ದು, ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ನಗರಸಭೆ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸಿದ್ದರು. ಆದರೆ ಈಗ ಮತ್ತೆ ಮಣ್ಣು ಕುಸಿತವಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

LATEST NEWS

ಕೋಟಿಯ ಒಡೆಯನಾದ 8ನೇ ತರಗತಿ ಪೋರ..!!

Published

on

ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ.

ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್  ನಡೆಸಿಕೊಡುವಂತಹ ಹಿಂದಿಯ ಕೌನ್ ಬನೇಗಾ ಕರೋಡ್ ಪತಿ ಎಂಬ ಶೋ ನಲ್ಲಿ ಹರಿಯಾಣದ ಮಹೇಂದ್ರಗಢ್ ಮೂಲದ 8ನೇ ತರಗತಿ ವಿದ್ಯಾರ್ಥಿ ಮಯಾಂಕ್ ಭಾಗವಹಿಸಿ 15 ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿ ಗೆದ್ದು ದಾಖಲೆ ಬರೆದಿದ್ದಾನೆ. ಕೌನ್ ಬನೇಗಾ ಕರೋಡ್ ಪತಿಯಲ್ಲಿ ನಡೆಯುವ ಜನಪ್ರಿಯ ಪ್ರಶ್ನೆಗಳಿಗೆ ಉತ್ತರಿಸಿದ 14 ವರ್ಷದ ಕಿರಿಯ ಪೋರ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಜನಪ್ರಿಯ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್‌ಪತಿಯಲ್ಲಿ 1 ಕೋಟಿ ರೂ.ಗೆದ್ದ ಹೆಗ್ಗಳಿಕೆಗೆ ಹರಿಯಾಣದ ಮಹೇಂದ್ರಗಢ್‌ನ 8 ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಪಾತ್ರನಾಗಿದ್ದಾನೆ. 14 ವರ್ಷದ ಈ ಬಾಲಕ 1 ಕೋಟಿ ರೂ.ಗೆದ್ದ ಅತ್ಯಂತ ಕಿರಿಯ ಸ್ಪರ್ಧಿಯಾಗಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾನೆ. 15 ಪ್ರಶ್ನೆಗಳಿಗೆ ಉತ್ತರ ಕೊಟ್ಟು, 1 ಕೋಟಿ ರೂ ಗೆದ್ದು, 16ನೇ ಪ್ರಶ್ನೆಗೂ ಸರಿಯಾದ ಉತ್ತರ ನೀಡಿದ್ದಾನೆ. ಈತನ ಗುರಿ ಕೇವಲ ಒಂದು ಕೋಟಿ ಆಗಿರಲಿಲ್ಲ. ಏಳು ಕೋಟಿಯನ್ನು ಗುರಿಯಾಗಿಸಿಟ್ಟುಕೊಂಡಿದ್ದ. ಏಳು ಕೋಟಿಯ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾಗಿದ್ದಾನೆ. ಈತನ ಸಾಧನೆಗೆ ಹರಿಯಾಣ ಸಿಎಂ ಮನೊಹರ್ ಲಾಲ್ ಖಟ್ಟರ್ ಅಭಿನಂದಿಸಿದ್ದಾರೆ. ಇದು ಮೊದಲ ಬಾರಿ 14 ವರ್ಷದ ಪೋರ ಕೋಟಿಗೆದ್ದ ಇತಿಹಾಸವಾಗಿದೆ.

Continue Reading

LATEST NEWS

Trending