Sunday, September 27, 2020

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ಬಜಪೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಸ್ಟಿಕ್ಕರ್ ಅಭಿಯಾನ….!!!

ಮಂಗಳೂರು: ಲೆಡಿಹಿಲ್ ಸರ್ಕಲ್ ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂಬ ಆಗ್ರಹ ಈಗ ಹೆಚ್ಚಾಗತೊಡಗಿದ್ದು, ವಿವಿಧ ಸಂಘಟನೆಗಳು ಇದಕ್ಕೆ ಪೂರಕವೆಂಬಂತೆ ಹಲವೆಡೆ ಅಭಿಯಾನಗಳು ನಡೆಸುತ್ತಿವೆ. ಇಂದು ಮಂಗಳೂರಿನ ಬಜಪೆಯಲ್ಲಿ ಬಿರುವೆರ್ ಕುಡ್ಲ ಬಜಪೆ...

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!   

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!    ಮಂಗಳೂರು : ಅಶ್ವತ್ಥ ಎಲೆಯನ್ನು ಕಲಾತ್ಮಕವಾಗಿ ಕತ್ತರಿಸಿ ಚಿತ್ರ ರಚಿಸುವ ಕಲೆ ಇತ್ತೀಚೆನ ದಿನಗಳಲ್ಲಿ...

ಟೀಂ ಗರುಡ ಎಂಬ ಪಡ್ಡೆ ಹುಡುಗರ ಗ್ಯಾಂಗ್ ನ ಮಟ್ಟ ಹಾಕಿದ ಉಡುಪಿ ಪೊಲೀಸರು

ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22),...

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು...

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..! ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ. ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ...

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಲ್ಲಿ ಸುಮಾರು 70 ರಿಂದ 80 ಜನರು ವಾಸವಿದ್ದರು. ಮಣ್ಣಿನಡಿ ಎಷ್ಟು ಮಂದಿ ಸಿಲುಕಿದ್ದಾರೆ ಅನ್ನೋದು ಸದ್ಯಕ್ಕೆ ಸ್ಪಷ್ಟವಾಗಿ ಗೊತ್ತಾಗಿಲ್ಲ ಎಂದು ತಿಳಿಸಿದ್ದಾರೆ.

ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಧರೆಗುರುಳಿ ಹಲವರು ಸಿಕ್ಕಿಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದುವರೆಗೆ 13 ಮಂದಿಯ ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ.
ಇದುವರೆಗೆ ಏಳು ಮಂದಿಯನ್ನು ಮಣ್ಣಿನಡಿಯಿಂದ ರಕ್ಷಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿಹಾಕಿಕೊಂಡವರಲ್ಲಿ ಬಹುತೇಕರು ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ.

 

ಇಂದು ನಸುಕಿನ ಜಾವ ಈ ದುರಂತ ಸಂಭವಿಸಿದ್ದರಿಂದ ನಿದ್ದೆಯಲ್ಲಿದ್ದ ಜನರಿಗೆ ಬೆಟ್ಟ ಕುಸಿದು ಬೀಳುವಾಗ ಎದ್ದು ಓಡಿಹೋಗಿ ತಪ್ಪಿಸಿಕೊಳ್ಳಲು ಸಮಯ ಇರಲಿಲ್ಲ. ಇದರಿಂದ ಸಾವು ನೋವು ಹೆಚ್ಚಾಗಿದೆ. ಭಾರೀ ಮಳೆಗೆ ಪ್ರವಾಹ ಉಂಟಾಗಿ ಪೆರಿಯವರ ಸೇತುವೆ ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ರಕ್ಷಣಾ ಪಡೆಗಳಿಗೆ ದುರ್ಘಟನೆ ನಡೆದ ಸ್ಥಳಕ್ಕೆ ಬೇಗನೆ ತಲುಪಲು ಸಾಧ್ಯವಾಗಿಲ್ಲ.

ದುರಂತ ಸಂಭವಿಸಿದ ಬಳಿಕ ಇಡೀ ಪ್ರದೇಶ ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡಿದ್ದು ಸಂಪರ್ಕ ಜಾಲಗಳು ಕಡಿತವಾಗಿವೆ. ಸದ್ಯ ಸ್ಥಳದಲ್ಲಿ ಅಗ್ನಿಶಾಮಕ ಮತ್ತು ರಕ್ಷಣಾ ಪಡೆ ಸಿಬ್ಬಂದಿ, ಎನ್ ಡಿಆರ್ ಎಫ್, ಕಂದಾಯ ಇಲಾಖೆ ಅಧಿಕಾರಿಗಳು, ಎಸ್ಟೇಟ್ ಕಾರ್ಮಿಕರು ಮತ್ತು ಪೊಲೀಸರು ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಜಿಲ್ಲಾಧಿಕಾರಿ ಹೆಚ್ ದಿನೇಶನ್ ಮಾತನಾಡಿ, ರಕ್ಷಣಾ ಸಿಬ್ಬಂದಿಯನ್ನು ಪೆಟ್ಟುಮುಡಿಗೆ ಕಳುಹಿಸಲಾಗಿದ್ದು ಅಲ್ಲಿ ಜನರನ್ನು ಹುಡುಕುವ ಮತ್ತು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ಮುನ್ನಾರ್ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್, ಇಡುಕ್ಕಿಯ ಮುನ್ನಾರ್ ಹತ್ತಿರ ರಾಜಮಾಲಾದಲ್ಲಿ ಉಂಟಾಗಿರುವ ಭೂಕುಸಿತದಲ್ಲಿ ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡವರ ರಕ್ಷಣಾ ಕಾರ್ಯ ಸಾಗುತ್ತಿದೆ. ಪರಿಹಾರ ಕಾರ್ಯಕ್ಕೆ ಹೆಲಿಕಾಪ್ಟರ್ ಸೇವೆ ಪಡೆಯಲು ಭಾರತೀಯ ವಾಯುಪಡೆಯನ್ನು ಸಂಪರ್ಕಿಸಲಾಗಿದೆ. ಅದು ಸದ್ಯದಲ್ಲಿಯೇ ಬರುವ ನಿರೀಕ್ಷೆಯಿದೆ ಎಂದಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.