Connect with us

    BELTHANGADY

    ಹಾಸನ: ಲಾರಿಗೆ ಕಾರು ಡಿಕ್ಕಿ ಸ್ಥಳದಲ್ಲೇ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ..!

    Published

    on

    ಹಾಸನ :  ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

    ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ‌ ಸ್ಥಿತಿ ಗಂಭೀರವಾಗಿದೆ. ನಡೆದಿದೆ.ಮೃತರಲ್ಲಿ ಇಬ್ಬರನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕುತ್ರಬೆಟ್ಟು ಮನೆಯ ಗಣಪ ಗೌಡ ಎಂಬವರ ಮಕ್ಕಳಾದ ಜಯಪ್ರಕಾಶ್(25) ಯೋಗಿಶ್(23) ಎಂದು ಗುರುತ್ತಿಸಲಾಗಿದೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಕಡೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ

    ಕೆಎ-19 ಎಂಜಿ 7021 ನಂಬರಿನ ಕ್ವಿಡ್ ಕಾರಿನಲ್ಲಿ ನಾಲ್ಕೂ ಜನ ಪ್ರಯಾಣ ಮಾಡಿದ್ದಾರೆ.

    ಕೆಂಚಟ್ಟಹಳ್ಳಿ ಬಳಿ ಹಂಪ್ಸ್ ಇದ್ದ ಕಾರಣ ಲಾರಿ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಲಾರಿ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೆ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.

    ಅಪಘಾತ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending