ಪವಿತ್ರ ಮಕ್ಕಾದಲ್ಲಿ ಉಮ್ರಾ ನಿರ್ವಹಿಸಿ ಮದೀನಾಕ್ಕೆ ತೆರಳುವ ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕರ್ನಾಟಕ ಮೂಲದ ಐವರು ಮೃತಪಟ್ಟಿದ್ದಾರೆ.
ಜೆದ್ದಾ : ಪವಿತ್ರ ಮಕ್ಕಾದಲ್ಲಿ ಉಮ್ರಾ ನಿರ್ವಹಿಸಿ ಮದೀನಾಕ್ಕೆ ತೆರಳುವ ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕರ್ನಾಟಕ ಮೂಲದ ಐವರು ಮೃತಪಟ್ಟಿದ್ದಾರೆ.
ಮೃತರೆಲ್ಲರೂ ಕರ್ನಾಟಕ ಮೂಲದ ಗುಲ್ಬರ್ಗದವರಾಗಿದ್ದಾರೆ.
ಗುಲ್ಬರ್ಗ ನೂರ್ ಬಾಗ್ ನಿವಾಸಿ ಶಫೀದ್ ಹುಸೈನ್ ಸಾಬ್ ಸುಲ್ಲದ್, ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಝೈನುದ್ದೀನ್ ಸಾಹೇಬ್, ರೆಹನಾ ಬೇಗಮ್, ಬೀಬಿ ಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಮೃತಪಟ್ಟ ಐವರು ‘ಸಾಲಿಹೀನ್’ ಎಂಬ ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಕಂಪನಿಯ ಬಸ್‌ನಲ್ಲಿ ಪವಿತ್ರ ಮಕ್ಕಾ ಮತ್ತು ಮದೀನಾ ಪ್ರವಾಸ ಕೈಗೊಂಡಿದ್ದರು.
ನಿನ್ನೆ (ಮಂಗಳವಾರ) ರಾತ್ರಿ ಉಮ್ರಾ ನಿರ್ವಹಿಸಿ ಬಸ್ ಮೂಲಕ ಮದೀನಾಕ್ಕೆ ತೆರಳುತ್ತಿದ್ದರು.
ಮಕ್ಕಾದಿಂದ 250 ಕಿ.ಮೀ.ದೂರದ ಪ್ರದೇಶದಲ್ಲಿ ಬಸ್ಸಿನ ಮುಂದೆ ಸಾಗುತ್ತಿದ್ದ ಟ್ರಕ್’ಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಬಾಗದಲ್ಲಿ ಕುಳಿತಿದ್ದ ಹಲವು ಪ್ರಯಾಣಿಕರು ಮೃತರಾಗಿದ್ದಾರೆ.
ಟ್ರಕ್‌ಗೆ ಡಿಕ್ಕಿ ಹೊಡೆದ ರಬಸಕ್ಕೆ ಬಸ್ ನಜ್ಜುಗುಜ್ಜಾಗಿದ್ದು, ಗಾಯಗೊಂಡ ಹಲವರನ್ನು ಸೌದಿ ಅರೇಬಿಯಾದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.