Thursday, April 22, 2021

ಮಗಳ ಮನೆಗೆ ಮೊಮ್ಮಗಳ ಜೊತೆ ಹೊರಟ ತಾಯಿ ಸ್ಮಶಾನಕ್ಕೆ..!

ಮಗಳ ಮನೆಗೆ ಮೊಮ್ಮಗಳ ಜೊತೆ ಹೊರಟ ತಾಯಿ ಸ್ಮಶಾನಕ್ಕೆ..!

ಯಾದಗಿರಿ: ಮಗಳ ಮನೆಗೆ ಮೊಮ್ಮಗಳ ಜೊತೆ ತಾಯಿ ಹೊರಟಾಗ ಆಟೋ ಪಲ್ಟಿಯಾಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಕ್ಯಾತಪ್ಪನಳ್ಳಿ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊನ್ನೂರಿನ 55 ವರ್ಷದ ಶರಣಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ , ಮೊಮ್ಮಗಳು ಭಾಗ್ಯಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಮೃತ ಶರಣಮ್ಮ ತನ್ನ ಮಗಳ ಮನೆ ಅಚ್ಚೋಲಗೆ ಮೊಮ್ಮಗಳು ಭಾಗ್ಯ ಜೊತೆ ಆಟೋದಲ್ಲಿ ತೆರಳುತ್ತಿದ್ದರು.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ ಶರಣಮ್ಮ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, ಬಾಲಕಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಶರಣಮ್ಮನ್ನ ಪ್ರಾಣ ತಮ್ಮ ಕಣ್ಣೆದರು ಹೋಗುತ್ತಿದ್ದರು ಸ್ಥಳೀಯರು ಕಟುಕರಂತೆ ನೋಡುತ್ತಾ ನಿಂತಿದ್ದು ಜನ ಮಾತ್ರ ಸಹಾಯಕ್ಕೆ ಬರಲೇ ಇಲ್ಲ ಎಂದು ಆರೋಪಗಳು ಕೇಳಿ ಬಂದಿವೆ .

ಕೊನೆ ಉಸಿರು ಹೋಗುವ ತನಕ ಅವರಿಬ್ಬರನ್ನು ನೋಡುತ್ತಾ ಮೊಬೈಲ್ ನಲ್ಲಿ ವಿಡಿಯೋ ತೆಗೆಯುತ್ತಿದ್ದರು. . ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...