Thursday, March 23, 2023

ಬೆಳಗಾವಿಯಲ್ಲಿ ಭೀಕರ ರಸ್ತೆ ಅಘಾತ : ಆರು ಸಾವು..! 10 ಗಂಭೀರ..

ಬೆಳಗಾವಿಯಲ್ಲಿ ಭೀಕರ ರಸ್ತೆ ಅಘಾತ : ಆರು ಸಾವು..! 10 ಗಂಭೀರ..

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭೀಕರ ವಾಹನ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸವದತ್ತಿ ಹೊರವಲಯದಲ್ಲಿ ನಡೆದಿದೆ.

ಟಾಟಾ ಏಸ್ ಹಾಗೂ ಬೊಲೆರೋ ವಾಹನ ಡಿಕ್ಕಿಯಾಗಿ ಐವರು ಮಹಿಳೆಯರು ಹಾಗೂ ಓರ್ವ ಚಾಲಕ ಸೇರಿದಂತೆ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ರಾಮದುರ್ಗ ತಾಲೂಕಿನ ಚಿಂಚನೂರು ಗ್ರಾಮದವರೆಂದು ತಿಳಿದು ಬಂದಿದ್ದು, ಧಾರವಾಡದ ಮೊರಬ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ಹೋಗಿ ವಾಪಸ್ ಮರಳುವಾಗ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಎಎಸ್ ಪಿ ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ‌. ಸವದತ್ತಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...