ಪುತ್ತೂರು ಭೀಕರ ರಸ್ತೆ ಅಪಘಾತಕ್ಕೆ ಓರ್ವ ಬಲಿ – ಇಬ್ಬರು ಗಂಭೀರ..!
ಪುತ್ತೂರು: ಪುತ್ತೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆಟೋ ರಿಕ್ಷಾ ಮತ್ತು ಮಾರುತಿ ಓಮ್ನಿ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಸೂರಂಬೈಲು ಸಮೀಪ ಶನಿವಾರ ಸಂಜೆ ನಡೆದಿದೆ.
ಗಾಯಾಳುಗಳಲ್ಲಿ ಇಬ್ಬರು ಕೊಯಕೂಡೆಲ್ ನಿವಾಸಿಗಳಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.