ಪುತ್ತೂರು: ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ಎನ್ನುವುದು ಹಾಸ್ಯಾಸ್ಪದ ವಿಚಾರ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮೇಕೆದಾಟು ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸುನಿಲ್ ಕುಮಾರ್, ಸಿದ್ದರಾಮಯ್ಯ ಸರಕಾರ ಮೇಕೆದಾಟು ಬಗ್ಗೆ ಕೇವಲ ಡಿಪಿಆರ್ ಸಿದ್ಧಪಡಿಸಲು 5 ವರ್ಷ ತೆಗೆದುಕೊಂಡಿದೆ.
ತಮಿಳುನಾಡಿ ವಿರೋಧಿಸಿದ ಸಂದರ್ಭದಲ್ಲಿ ಸಿದ್ದರಾಯ್ಯ ಸರ್ಕಾರ ರಾಜ್ಯದ ಸ್ಪಷ್ಟ ನಿಲುವನ್ನು ತಿಳಿಸುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರ, ರೈತರ ನೀರಾವರಿ ಸಮಸ್ಯೆಯ ಬಗ್ಗೆ ಕಾಳಜಿಯಿಲ್ಲ.
ಕೇವಲ ಸ್ವ ಹಿತಾಸಕ್ತಿ ಮಾತ್ರ ಇದೆ. ಬಿಜೆಪಿ ಸರಕಾರ ಮೇಕೆದಾಟು ಯೋಜನೆಯ ಜಾರಿಗೆ ಬದ್ಧವಾಗಿದೆ. ಯೋಜನೆ ಜಾರಿಗೊಳಿಸಿ ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ನೀರಾವರಿ ಪೂರೈಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಮಂಗಳೂರು : 144 ವರ್ಷಗಳ ಬಳಿಕ ನಡೆಯುವ ಮಹಾ ಕುಂಭಮೇಳದಲ್ಲಿ ಅಖಿಲ ಭಾರತೀಯ ಸಂತಸಮಿತಿ ಕರ್ನಾಟಕ ಘಟಕದಿಂದ ಕಾರ್ಯಕರ್ತರು 2025 ಜನವರಿ 25 ರಿಂದ 30 ರವರೆಗೆ ಭಾಗವಹಿಸುವುದಾಗಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.
ವಿಶ್ವದ ಅತೀ ದೊಡ್ಡ ಉತ್ಸವವೇ ಮಹಾ ಕುಂಭಮೇಳ, ನಾನಾ ಯತಿ ಶ್ರೇಷ್ಠರು ಭಾಗವಹಿಸುವ ಕುಂಭಮೇಳದಲ್ಲಿ ವ್ಯತ್ಯಾಸ್ತ ಹೈದವ ಸಂಘಟನೆಗಳಿಂದ ಚರ್ಚೆ ಬೈಠಕ್ ನಡೆಯುವುದು. ಜನವರಿ 21,22 ದಿನಾಂಕದಲ್ಲಿ ಅಖಿಲ ಭಾರತೀಯ ಸಂತ ಸಮಿತಿಯ ಬೈಠಕ್ ನಡೆಯಲಿದೆ. ಅಖಿಲ ಭಾರತ ಸಂತ ಸಮಿತಿ ಹಾಗೂ ಗಂಗಾ ಮಹಾಸಭೆಯ ಸಂಯುಕ್ತತೆಯಲ್ಲಿ ವಾಸ್ತವ್ಯ ಉಪಹಾರದ ವ್ಯವಸ್ಥೆಯು ಸಂಘಟನೆಯಿಂದ ಮಾಡಲಾಗಿದೆ.
ರಾಜ್ಯಾಧ್ಯಕ್ಷರಾದ ಮಂಗಳೂರು ಓಂ ಶ್ರೀ ಮಠದ ಸ್ವಾಮಿ ಹಾಗೂ ಮಾತಾಶ್ರೀ ಓಂ ಶ್ರೀ ಶಿವ ಜ್ಞಾನಮಹಿ ಸರಸ್ವತಿ ಸಮೇತ ಮಹಾಮಂಡಲೇಶ್ವರ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ, ಸಮಿತಿ ಮುಖ್ಯ ಕಾರ್ಯದರ್ಶಿ ಕೊಡಗು ಅರಸೀಗುಪ್ಪೆ ಶ್ರೀ ಮಂಜುನಾಥ ಕ್ಷೇತ್ರದ ಸ್ವಾಮಿ ಶ್ರೀ ರಾಜೇಶ್ ನಾಥ್ ಗುರೂಜಿ, ಸಂಘಟನಾ ಕಾರ್ಯದರ್ಶಿ ಕೊಡಗು ಬೆಂಗಳೂರು ವಿರಕ್ತಮಠದ ಶ್ರೀ ನಿಶ್ಚಲ ನಿರಂಜನ ದೇಶೀ ಕೇಂದ್ರ ಸ್ವಾಮೀಜಿ, ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಅರಸೀಕೆರೆ ರುದ್ರಾಕ್ಷ ಫೌಂಡೇಶನ್ ಶ್ರೀ ಜಯಪ್ರಕಾಶ್ ಗುರೂಜಿ, ಕಾರ್ಯದರ್ಶಿಗಳಾದ ಕಡೂರು ಅಯ್ಯಪ್ಪ ಸ್ವಾಮಿ ಕ್ಷೇತ್ರದ ಶ್ರೀ ಭದ್ರಾರಾಜ್ ಸ್ವಾಮೀಜಿ, ಫೌಂಡರ್ ಶ್ರೀ ಮಹಾ ತಪಸ್ವಿ ಸೇವಾ ಪ್ರತಿಷ್ಠಾನ ಹರಿಹರ ಪರಂಪೂಜ್ಯ ಅವಧೂತ ಕವಿ ಗುರುರಾಜ ಗುರೂಜಿ ಹಾಗೂ ಸಮಿತಿಯ ಸಂಯೋಜಕ ಸಮಿತಿ ಅಧ್ಯಕ್ಷ ಅಡ್ವಕೇಟ್ ವೀರೇಶ್ ಅಜ್ಜಣ್ಣನವರ್ ಹರಿಹರ ಜೊತೆಯಲ್ಲಿ ಸ್ವಾಮೀಜಿಯವರ ಶಿಷ್ಯರು ಭಾಗವಹಿಸಲಿದ್ದಾರೆ.
ಮಂಗಳೂರು : ಮಹಾನಗರಕ್ಕೆ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಎಸ್ ಟಿಪಿಗಳು ನೀರಿನ ಮೂಲವನ್ನು ಸೇರುತ್ತಿದ್ದು, ಕೊಳಚೆ ನೀರನ್ನೇ ಜನರಿಗೆ ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಮೇಯರ್ ಅವರಿಗೆ ಈಗಾಗಲೇ ಎರಡು ಬಾರಿ ಮನವಿ ಮಾಡಿ ಸದನದ ಬಾವಿಗಿಳಿದರೂ ಪ್ರಯೋಜನವಾಗಿಲ್ಲ. ಸತ್ಯಶೋಧನಾ ಸಮಿತಿ ರಚಿಸುವುದಕ್ಕೂ ಪಾಲಿಕೆಯ ಆಡಳಿತ ಮುಂದಾಗಿಲ್ಲ. ಹೀಗಾಗಿ ನಾವೇ ಸಮಿತಿ ರಚಿಸಿ ತನಿಖೆ ಮಾಡಿದ್ದೇವೆ. ಎಲ್ಲಿ ಎಸ್‌ಟಿಪಿ ಕೊಳಚೆ ನೀರು ಸೇರುತ್ತಿದೆಯೋ ಅಲ್ಲಿ ಹೋಗಿ ಪ್ರತ್ಯಕ್ಷ ವರದಿ ತಯಾರಿಸಿ ಅದನ್ನು ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಭೇಟಿಯ ಸಂದರ್ಭದಲ್ಲಿ ನೀಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಈ ಬಗ್ಗೆ ತನಿಖೆ ಮಾಡುವಂತೆ ಪಾಲಿಕೆಯ ನೂತನ ಕಮಿಷನರ್ ಅವರಿಗೆ ಸತ್ಯಶೋಧನಾ ವರದಿ ನೀಡಿದ್ದೇವೆ. ನಾವು ದೂರು ಕೊಟ್ಟು ಸುಮ್ಮನೆ ಇರುವುದಿಲ್ಲ. ಅದು ನಿಜವೇ ಸುಳ್ಳೇ ಎಂಬ ಬಗ್ಗೆ ತನಿಖೆ ಮಾಡುತ್ತೇವೆ. ಪಚ್ಚನಾಡಿ, ಬಜಾಲ್, ಮಧ್ಯದಲ್ಲಿರುವ ಎಸ್ ಟಿಪಿಯನ್ನು ನಿರ್ವಹಣೆ ಮಾಡಲು ಎಂಆರ್ ಪಿಎಲ್ ಕಂಪೆನಿಗೆ ಒಪ್ಪಿಸಬೇಕಿದೆ. ಇದರಿಂದ ನಿರ್ವಹಣೆ ವೆಚ್ಚ ಕಡಿಮೆಯಾಗುವುದಲ್ಲದೆ ಮಂಗಳೂರಿನ ಜನರಿಗೆ ಶುದ್ಧ ಕುಡಿಯುವ ನೀರು ಸಿಗುತ್ತದೆ. ಮಧ್ಯದಲ್ಲಿರುವ ಎಸ್ ಟಿಪಿಯಲ್ಲಿ ನೀರು ಶುದ್ಧೀಕರಣಗೊಳ್ಳುತ್ತಿಲ್ಲ. ಇದರಿಂದಾಗಿ ಅಲ್ಲಿಗೆ ಸಮೀಪದ ಖಂಡಿಗೆ ಎಂಬಲ್ಲಿ ತೋಡು, ಕೆರೆಯ ನೀರು ಕಲುಷಿತಗೊಂಡಿದೆ. ಪರಿಣಾಮ ವರ್ಷಕ್ಕೊಮ್ಮೆ ನಡೆಯುವ ಖಂಡಿಗೆ ಮೀನು ಹಿಡಿಯುವ ಜಾತ್ರೆಗೆ ಕಂಟಕ ಎದುರಾಗಿದೆ.
ಕೆರೆಗೆ ಇಳಿದರೆ ಮಾರಕ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಸೃಷ್ಟಿಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ನಿಮ್ಮ ಆಡಳಿತದಲ್ಲಿ ಹೀಗಿರಲಿಲ್ವಾ ಅಂತಾ ಕೇಳ್ತಾರೆ. ಹೌದು ನಮ್ಮ ಕಾಲದಲ್ಲಿ ಕೆರೆಯ ನೀರಲ್ಲಿ ಬಟ್ಟೆ ತೊಳೆಯುತ್ತಿದ್ದರು. ಮೀನು ಹಿಡೀತಿದ್ದರು. ಈಗ ನೀರಿನ ಮೂಲಗಳಿಗೆ ಇಳಿಯುವ ಹಾಗೇ ಇಲ್ಲ. ಇದಕ್ಕೆ ಯಾರು ಹೊಣೆ? ಎಂದು ವಾಗ್ದಾಳಿ ನಡೆಸಿದರು.
ಎಸ್ ಟಿಪಿ ಚಾಲನೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬೀಗ ಜಡಿದು ಪ್ರತಿಭಟನೆ ಮಾಡುತ್ತೇವೆ. ಅಲ್ಲಿ 13 ಜನರಿಗೆ ನಿರ್ವಹಣೆಗೆ ಸಂಬಳ ನೀಡಲಾಗುತ್ತದೆ. ಆದರೆ ಯಾರೂ ಅಲ್ಲಿಲ್ಲ. ಕರೆಂಟ್ ಹೋದರೆ ಜನರೇಟರ್ ಇಲ್ಲ. ಒಂದು ಎಸ್ ಟಿಪಿಗೆ ವರ್ಷಕ್ಕೆ ಒಂದೂವರೆ ಕೋಟಿಯಂತೆ ಮೂರು ಎಸ್ ಟಿಪಿಗೆ ನಾಲ್ಕೂವರೆ ಕೋಟಿ ಹಣ ಪಡೆಯುತ್ತಾರೆ. ಇದೆಂತ ಸಾಧನೆ? ಇನ್ನಾದರೂ ಈ ಬಗ್ಗೆ ಕ್ರಮ ಜರುಗಿಸದೆ ಇದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶಿಸಿದೆ. ತತ್‌ಕ್ಷಣ ಜಾರಿಗೆ ಬರುವಂತೆ ಸಿಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಅವರನ್ನು ಹಿಂಪಡೆಯಲಾಗಿದೆ.
ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನ ಅಧಿಕಾರಿ ರವಿಚಂದ್ರ ನಾಯಕ್ ಅವರನ್ನು ನೂತನ ಆಯುಕ್ತರಾಗಿ ಸರಕಾರ ನೇಮಕ ಮಾಡಿದೆ.