LATEST NEWS
ಮೇಕೆದಾಟು ಪಾದಯಾತ್ರೆಗೆ ಸಕಲ ಸಿದ್ದತೆ: ರಾಮನಗರಕ್ಕೆ ಮಾತ್ರ ಯಾಕೆ 144 ಸೆಕ್ಷನ್ ಎಂದ ಸಿದ್ದರಾಮಯ್ಯ
ರಾಮನಗರ: ಮಹಾತ್ವಾಕಾಂಕ್ಷೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಕೈಗೊಂಡಿರುವ ಪಾದಯಾತ್ರೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸ್ವ – ಕ್ಷೇತ್ರವಾದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಸಕಲ ಸಿದ್ದತೆ ಮಾಡಿಕೊಂಡಿದ್ದು,
ಸಂಗಮದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದವರೆಗೂ ಪಾದಯಾತ್ರೆಗೆ ಸಜ್ಜುಗೊಳಿಸಲಾಗಿದೆ.
ಈಗಾಗಲೇ ರಾಮನಗರ ಜಿಲ್ಲಾಡಳಿತ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಿ ನಿಷೇಧಾಜ್ಞೆ ಜಾರಿ ಮಾಡಿದೆ.
ನಿಷೇಧಾಜ್ಞೆಗೆ ಕ್ಯಾರೇ ಎನ್ನದ ಕಾಂಗ್ರೆಸ್ ಮುಖಂಡರು ಸಂಗಮದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಿ ಪಾದಯಾತ್ರೆಗೆ ಸಜ್ಜುಗೊಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದೆ.
ಇಂದು ಕನಕಪುರದಲ್ಲಿ ಮನೆಯ ಶಕ್ತಿ ದೇವತೆಗಳಾದ ಶ್ರೀ ಕೆಂಕೇರಮ್ಮ ಹಾಗೂ ಶ್ರೀ ಕಬ್ಬಾಳಮ್ಮನವರ ಕುಟುಂಬ ಸಮೇತ ದರ್ಶನ ನಡೆದು, ಅಭಿಯಾನ ಯಶಸ್ವಿಯಾಗುವಂತೆ ಪ್ರಾರ್ಥಿಸಿದರು.
ಕೋವಿಡ್ ನಿಯಮವನ್ನ ಪಾಲಿಸಿಕೊಂಡೇ ನಾವು ಪಾದಯಾತ್ರೆ ಮಾಡುತ್ತೇವೆ. ಯಾಕೆ ರಾಮನಗರಕ್ಕೆ ಮಾತ್ರ ನಿಷೇದಾಜ್ಞೆ ಹಾಕಿದ್ದಾರೆ? ಇದರ ಅರ್ಥ ಏನು? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.
DAKSHINA KANNADA
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.
ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.
DAKSHINA KANNADA
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.
ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.