Connect with us

DAKSHINA KANNADA

ಮಳಲಿ ದರ್ಗಾ ವಿವಾದ: ಇಂದು ತಾಂಬೂಲ ಪ್ರಶ್ನೆ-ಸ್ಥಳದಲ್ಲಿ ಬಿಗಿ ಭದ್ರತೆ

Published

on

ಮಂಗಳೂರು: ನಗರದ ಮಳಲಿ ದರ್ಗಾ ವಿವಾದದ ಹಿನ್ನೆಲೆಯಲ್ಲಿ ಇಂದು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆಗೆ ಇದೀಗ ಕ್ಷಣ ಗಣನೆ ಆರಂಭವಾಗಿದೆ.

ವಿವಾದಿತ ‌ಮಳಲಿ ದರ್ಗಾದ ಅನತಿ ದೂರದಲ್ಲೇ ಇರುವ ಶ್ರೀರಾಮಾಂಜನೇಯ ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ. ಭಜನಾ ಮಂದಿರದಲ್ಲಿ ತಾಂಬೂಲ ಪ್ರಶ್ನೆಗೆ ಸಕಲ ಸಿದ್ಧತೆ ನಡೆಸಲಾಗಿದೆ.

ಕೇರಳ ಪ್ರಖ್ಯಾತ ಜ್ಯೋತಿಷರು ಜಿ.ಪಿ ಗೋಪಾಲಕೃಷ್ಣ ಪಣಿಕ್ಕರ್ ಮೂಲಕ ತಾಂಬೂಲ ಪ್ರಶ್ನೆ ನಡೆಯಲಿದ್ದು, ದರ್ಗಾ ಸುತ್ತಮುತ್ತ ದೈವಿಕ ಶಕ್ತಿ ಇದಿಯೇ ಎಂಬ ಬಗ್ಗೆ ಪ್ರಶ್ನಾ ಚಿಂತನೆ ನಡೆಯಲಿದೆ.

ವೀಳ್ಯದೆಲೆಗಳ ಲೆಕ್ಕಾಚಾರದ ಆಧಾರದಲ್ಲಿ ಗ್ರಹಗತಿಗಳ ಚಲನೆಯ ಮೇಲೆ ದೈವೀ ಶಕ್ತಿ ಪತ್ತೆಯಾಗಲಿದೆ.

ಡಿಸಿಪಿ ಹರಿರಾಂ ಶಂಕರ್‌ ನೇತೃತ್ವದಲ್ಲಿ ಬಿಗಿ ಭದ್ರತೆ

ತಾಂಬೂಲ ಪ್ರಶ್ನೆ ನಡೆಯಲಿರುವ ಹಿನ್ನೆಲೆಯಲ್ಲಿ ಭಜನಾ ಮಂದಿರದ ಸುತ್ತ‌ ಡಿ.ಸಿ.ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಇಬ್ಬರು ಎಸಿಪಿ, ಏಳು ಮಂದಿ ಇನ್ ಸ್ಪೆಕ್ಟರ್ ಗಳು, 12 ಮಂದಿ ಪಿ.ಎಸ್.ಐ, 10 ಮಂದಿ ಎ.ಎಸ್.ಐ, 120 ಸಿವಿಲ್ ಸಿಬ್ಬಂದಿ ಸೇರಿದಂತೆ 3 ಕೆ.ಎಸ್.ಆರ್.ಪಿ ತುಕಡಿ, 3 ಸಿ.ಎ.ಆರ್ ತುಕಡಿ ಸ್ಥಳದಲ್ಲಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ.‌

ವಿವಾದಿತ ದರ್ಗಾ ಸ್ಥಳ ದಲ್ಲೂ ಭಾರಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ದರ್ಗಾದ 500 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಪೊದುವಾಳ್ ಜಿ.ಪಿ ಗೋಪಾಲಕೃಷ್ಣ ಪಣಿಕ್ಕರ್ ಪ್ರತಿಕ್ರಿಯೆ
ತಾಂಬೂಲ ಪ್ರಶ್ನೆ ವಿಚಾರವಾಗಿ ಪೊದುವಾಳ್ ಜಿ.ಪಿ ಗೋಪಾಲಕೃಷ್ಣ ಪಣಿಕ್ಕರ್ ಮಾಧ್ಯಮಗಳೊಂದಿಗೆ ಮಾತನಾಡಿ, ರಾಶಿ ಇಡದೇ ಏನನ್ನು ಹೇಳಲು ಸಾಧ್ಯವಿಲ್ಲ.

ನಾನು ದೈವ ಸಾನಿಧ್ಯ ಇದೆಯೋ ಇಲ್ಲವು ಎಂದು ಹೇಳಬಲ್ಲೆ.

ದೇವಸ್ಥಾನ ಇತ್ಯಾದಿ ವಿಚಾರ ಅಷ್ಟಮಂಗಳದಲ್ಲೆ ಗೊತ್ತಾಗಬೇಕು ಎಷ್ಟು ಹೊತ್ತು ಬೇಕಾಗಬಹುದು ಎಂದು ಹೇಳುವುದು ಕಷ್ಟ ಎಂದು ಹೇಳಿಕೆ ನೀಡಿದ್ದಾರೆ.

1 Comment

1 Comment

  1. Ramesh kumar

    25/05/2022 at 4:05 PM

    Namaskara, Could you please give the address of G.P. Gopalakrishna Pannikar of Kerala ? Let me know his mobile no, place, how to access from the main railwaystation to reach his place.

    With gratitude
    Ramesh Kumar, Bangalore

Leave a Reply

Your email address will not be published. Required fields are marked *

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

DAKSHINA KANNADA

ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

Published

on

ಮಂಗಳೂರು: ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಖ್ಯಾತ ವಾಸ್ತು ತಜ್ಞಮಹೇಶ್ ಮುನಿಯಂಗಳ ಇವರ ವಾಸ್ತು ವಿನ್ಯಾಸದೊಂದಿಗೆ ಸುಮಾರು 12 ರಿಂದ 15 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಕ್ಷೇತ್ರ ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ನವೆಂಬರ್ 11ರಂದು ಜಾರಚಾವಡಿಯಲ್ಲಿ ಪ್ರಧಾನ ದೈವ ಜಾರಂದಾಯ  ಬಂಟ ಮಾಯಾಂದಾಲ್ ದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿದೆ. ನವೆಂಬರ್ 30ರಂದು
ಬೆಳಿಗ್ಗೆ 9.00 ಗಂಟೆಗೆ ಸರಳ ಜುಮಾದಿ ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ 11.00 ಗಂಟೆಗೆ ಶ್ರೀ ಜಾರ ಆದಿ ಕ್ಷೇತ್ರದ ಗಿರಿಯಲ್ಲಿ ಗ್ರಾಮ ದೈವ ಶ್ರೀ ಬಂಟ ಸರಳ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ನಿಧಿ ಕುಂಬ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ  ಭಕ್ತಾಧಿಗಳು ತನು ಮನ ಧನಗಳಿಂದ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯ ಅವರು, “ಶ್ರೀ ಆದಿ ಕ್ಷೇತ್ರ ಜಾರ ಇದು ತುಳುನಾಡಿನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಸಾನಿಧ್ಯ ಪ್ರಧಾನ ದೈವಗಳಾಗಿ ಶ್ರೀ ಉಳ್ಳಾಯ, ಶ್ರೀ ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಮಾಯಾಂದಾಲ್ ದೈವ, ಪಿಲಿ ಚಾಮುಂಡಿ, ಬಬ್ಬರ್ಯ ದೈವಗಳು ಕ್ಷೇತ್ರ ಹಾಗೂ ಗ್ರಾಮದ ಮಾಗಣೆಯ ದೈವಗಳಾಗಿವೆ. ಕ್ಷೇತ್ರದ ಆದಿ ದೈವಗಳಾಗಿ ಕಲ್ಲುರ್ಟಿ, ಪಟ್ಟದ ಅಣ್ಣಪ್ಪ ಸ್ವಾಮಿ, ಸ್ಥಳದ ಪಂಜುರ್ಲಿ, ನಾಗಬ್ರಹ್ಮ ಪ್ರಧಾನ ಸಾನಿಧ್ಯಗಳಾಗಿವೆ” ಎಂದರು. ಸುದ್ದಿಗೋಷ್ಠಿಯಲ್ಲಿ ದೈವಜ್ಞ ಶ್ರೀ ಪ್ರಕಾಶ ವಿ. ಹೊಳ್ಳ ಶಕ್ತಿನಗರ, ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ , ಕ್ಷೇತ್ರದ ಗಡಿ ಪ್ರಧಾನರಾದ ಜತ್ತಿ ಪೂಜಾರಿ ಜಾರ, ಅಧ್ಯಕ್ಷರಾದ ಉದಯಶಂಕರ ಜಾರಮನೆ, ಕಾರ್ಯದರ್ಶಿ ಎಂ. ವಿಠಲ್ ಪೂಜಾರಿ ಕುಕ್ಕುದಡಿ, ಕೋಶಾಧಿಕಾರಿ ಜೀವನ್ ದಾಸ್ ಜಾರ ಮತ್ತಿತರರು ಉಪಸ್ಥಿತರಿದ್ದರು.

Continue Reading

DAKSHINA KANNADA

Mangaluru: ಬೆಳ್ಮ ಬೋಲ್ದನ್‌ ಕುಟುಂಬಿಕರು ತರವಾಡು ಮನೆಯಲ್ಲಿ ಕೋಲೋತ್ಸವ

Published

on

ಮಂಗಳೂರು: ಕೊಣಾಜೆ ಬೆಳ್ಮದಲ್ಲಿರುವ ಬೋಲ್ದನ್‌ ಕುಟುಂಬಿಕರ ತರವಾಡು ಮನೆಯಲ್ಲಿ ಕಲ್ಲುರ್ಟಿ, ಪಂಜುರ್ಲಿ, ಗುಳಿಗ ಮೂರನೇ ವರ್ಷದ ಕೋಲೋತ್ಸವ ಭಾನುವಾರ ರಾತ್ರಿ ಸಂಭ್ರಮದಿಂದ ಜರುಗಿತು.

ಭಾನುವಾರ ಬೆಳಿಗ್ಗೆ ಪ್ರಶಾಂತ್ ಉಡುಪ ಪೌರೋಹಿತ್ಯದಲ್ಲಿ ನಾಗತಂಬಿಲ, ಗಣಹೋಮ ನಡೆದ ಬಳಿಕ ಶ್ರೀ ವೆಂಕಟ್ರಮಣ ದೇವರ ಮುಡಿಪು ಕಟ್ಟುವಿಕೆಯಲ್ಲಿ ಸರ್ವ ಕುಟುಂಬಿಕರು ಪಾಲ್ಗೊಂಡು ದೇವತಾ ಕಾರ್ಯದಲ್ಲಿ ಭಾಗವಹಿಸಿದರು. ಮಧ್ಯಾಹ್ನ ಅನ್ನಸಂಪರ್ತಣೆ ನಡೆಯಿತು.

ಅದೇ ದಿನ ರಾತ್ರಿ 7.30ಕ್ಕೆ ದೈವದ ಭಂಡಾರ ಏರಿ ಬಳಿಕ ಕಲ್ಲುರ್ಟಿ , ಪಂಜುರ್ಲಿ, ಗುಳಿಗ ಕೋಲ ಉತ್ಸವ ಜರುಗಿತು. ಮರುದಿನ ಅಗೇಲು ಸೇವೆ ನಡೆಯಿತು.

ತರವಾಡು ಮನೆಯ ಮೋಹಿಣಿ ಬೆಳ್ಮ, ಐತಪ್ಪ ಬೆಳ್ತಂಗಡಿ, ಧರ್ಣಪ್ಪ ಧರ್ಮಸ್ಥಳ, ವಿಶ್ವನಾಥ ಕಡಬ, ದಯಾನಂದ್‌ ಹುಬ್ಬಳ್ಳಿ, ದೇವದಾಸ ಬೆಳ್ಮ, ಆನಂದ ಕಡಬ, ಚಂದ್ರಶೇಖರ ಎಕ್ಕೂರು, ಹರೀಶ ವರ್ಕಾಡಿ ಮೊದಲಾದವರು ಭಾಗವಹಿಸಿದ್ದರು.

ರಾತ್ರಿ ತರವಾಡಿನ ಆಡಳಿತ ಸಮಿತಿ ಪದಾಧಿಕಾರಿಗಳ ಸಭೆ ನಡೆದು ಲೆಕ್ಕ ಪತ್ರವನ್ನು ಕಾರ್ಯದರ್ಶಿ ಆನಂದ ಕಡಬ ಮಂಡಿಸಿದರು.

ಕ್ಷೇತ್ರದ ಅಂಗಣಕ್ಕೆ ಇಂಟರ್‌ಲಾಕ್ ಅಳವಡಿಸಿದ ದಯಾನಂದ ಹುಬ್ಬಳ್ಳಿ, ತರವಾಡು ಮನೆಗೆ ಗ್ರೈಂಡರ್‌ ನೀಡಿದ ಶೋಭಾ ವಾಮಂಜೂರು, ತರವಾಡು ಮನೆಗೆ ಕೊಡುಗೆಯಾಗಿ ನೀಡಿದ ಕುರ್ಚಿಗಳಿಗೆ ಆರ್ಥಿಕ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

 

ದಿನಕರ ಕಯ್ಯಾರ, ವಿಕ್ರಾಂತ್‌ ಜಪ್ಪಿನಮೊಗರು , ಧನ್‌ರಾಜ್ ತಲಪಾಡಿ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರೂ ಉಪಸ್ಥಿತರಿದ್ದರು.

Continue Reading

LATEST NEWS

Trending