Connect with us

DAKSHINA KANNADA

Malali Masjid Row : ಮಳಲಿ ಮಸೀದಿ ವಿವಾದದ ವಿಹೆಚ್​ಪಿ ಅರ್ಜಿ ವಜಾಕ್ಕೆ ಸಲ್ಲಿಸಿದ ಅರ್ಜಿ ವಿಚಾರಣೆ ಜೂ. 6 ಕ್ಕೆ ಮುಂದೂಡಿದ ನ್ಯಾಯಾಲಯ

Published

on

ಮಳಲಿಯ ಮಸೀದಿಯ ನವೀಕರಣ ಕಾಮಗಾರಿ ವೇಳೆ ದೇಗುಲ ಶೈಲಿ ಕಟ್ಟಡ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜೂನ್ 6 ಕ್ಕೆ ಮುಂದೂಡಿದೆ.

ಮಂಗಳೂರು :  ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡುವಂತೆ ಕೋರಿ ಮಸೀದಿಯ ಪರವಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಗೊಂಡ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯವು ತೀರ್ಪನ್ನು ಜೂ.6ಕ್ಕೆ ಮುಂದೂಡಿದೆ.

ಇಂದು ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ವಾದ-ಪ್ರತಿವಾದ ನಡೆಸಿದ ನ್ಯಾಯವಾದಿಗಳು ಮಂಗಳವಾರ ನಡೆಸಿದ್ದ ವಾದಗಳಿಗೆ ಬದ್ಧರಾಗಿ ನ್ಯಾಯಾಲಯದ ಗಮನ ಸೆಳೆಯಲು ಮುಂದಾದರು.

ಮಸೀದಿಯ ಪರವಾಗಿ ವಾದಿಸಿದ ವಕೀಲರು ಎರಡು ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಮಸೀದಿಯ ಜಮೀನನ್ನು ಈಗಾಗಲೇ ವಕ್ಫ್ ಬೋರ್ಡಿಗೆ ಬಿಟ್ಟು ಕೊಟ್ಟಿರುತ್ತದೆ. ಹೀಗಾಗಿ‌ ಈ ಪ್ರಕರಣವು ಸಿವಿಲ್ ನ್ಯಾಯಾಲಯದ ಪರಿಧಿಗೆ ಬರುವುದಿಲ್ಲ.

ಇದು ವಕ್ಫ್ ನ್ಯಾಯಾಲಯದ ಅಧೀನಕ್ಕೆ ಬರುತ್ತದೆ. ಆದ್ದರಿಂದ ಈ ಪ್ರಕರಣವನ್ನು ಸಿವಿಲ್ ನ್ಯಾಯಾಲಯದಲ್ಲಿ ನಡೆಸಲು ಸಾಧ್ಯವಿಲ್ಲ. ಹೀಗಿರುವಾಗ ವಿಶ್ವ ಹಿಂದೂ ಪರಿಷತ್ ಮಾಡಿರುವ ಮನವಿ ನ್ಯಾಯಾಲಯದಲ್ಲಿ ಸ್ವೀಕಾರಾರ್ಹವಲ್ಲ.

ಅಲ್ಲದೆ 1991ರ ಪ್ರಕಾರ ಮಸೀದಿಯನ್ನು ಯಥಾಸ್ಥಿತಿಯಲ್ಲಿ ಕಾಯ್ದಿರಿಸಿಕೊಂಡು ಮಸೀದಿಯ ಪುನರ್ ನಿರ್ಮಾಣ ಕಾಮಗಾರಿಗೆ ಅನುವು ಮಾಡಿಕೊಡ ಬೇಕೆಂದು ಮಸೀದಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ‌ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ  ವಿಹೆಚ್‌ಪಿ ಪರ ವಕೀಲರಾದ ಚಿದಾನಂದ ಕೆದಿಲಾಯ, ಮಸೀದಿಯ ಕಟ್ಟಡ ಪುರಾತನವಾಗಿದ್ದು, ಈ ಬಗ್ಗೆ ನ್ಯಾಯಾಲಯವು ವಿಶೇಷ ಕಮಿಷನ್ ನೇಮಿಸಿ ಉತ್ಖನನ ಮಾಡಿ ಸತ್ಯಾಸತ್ಯತೆ ಗಳನ್ನು ತಿಳಿಯಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಬಳಿಕ ವಾದ ಮಂಡಿಸಿದ ಮಸೀದಿಯ ಪರ ವಕೀಲರು, ಪ್ರಕರಣವು ವಕ್ಫ್ ನ್ಯಾಯಾಲಯಕ್ಕೆ ಸಂಬಂಧಪಟ್ಟದ್ದು ಅಥವಾ ಸಿವಿಲ್‌‌ ನ್ಯಾಯಾಲಯದ ಪರಿಧಿಗೆ ಬರುತ್ತದೆಯೋ ಇಲ್ಲವೋ? ಎಂಬ ಬಗ್ಗೆ ಪ್ರಥಮವಾಗಿ ನ್ಯಾಯಾಲಯ ತೀರ್ಪು ನೀಡಬೇಕು ಎಂದು ಮನವಿ ಮಾಡಿದರು.

ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಪ್ರಥಮ‌ ಪ್ರಾಶಸ್ತ್ಯದಲ್ಲಿ ವಿವಾದಿತ ಸ್ಥಳವನ್ನು ನ್ಯಾಯಾಲಯದ ಕಮಿಷನ್ ಮೂಲಕ ಸಂಪೂರ್ಣ ಪರಿಶೀಲನೆಗೆ ಒಳಪಡಿಸಬೇಕೆಂದು ನ್ಯಾಯಾಧೀಶರಿಗೆ ನಿವೇದನೆ ಮಾಡಿಕೊಂಡರು.

2 ಕಡೆಯ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಪ್ರಕರಣವು ಸಿವಿಲ್ ನ್ಯಾಯಪೀಠದ ಪರಿಧಿಗೆ ಬರುತ್ತದೆಯೋ, ವಕ್ಫ್ ನ್ಯಾಯಾಲಯಕ್ಕೆ ಅಥವಾ ವಿಶ್ವ ಹಿಂದೂ ಪರಿಷತ್ ಅರ್ಜಿ ಪ್ರಥಮ ಪ್ರಾಶಸ್ತ್ಯದಲ್ಲಿ ಪುರಸ್ಕರಿಸಬೇಕೋ ಎಂಬುದರ ಕುರಿತು ಜೂನ್ 6 ರಂದು ತೀರ್ಪು ನೀಡಲಾಗುವುದು ಎಂದು ತಿಳಿಸಿತು.

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending