Friday, August 12, 2022

ಖ್ಯಾತ ಮಲಯಾಳಂ ನಟ ಶರತ್ ಚಂದ್ರನ್ ಇನ್ನಿಲ್ಲ..!

ಕೊಚ್ಚಿ : ಖ್ಯಾತ ಮಲಯಾಳಂ ನಟ ಶರತ್ ಚಂದ್ರನ್ ಸಾವನ್ನಪ್ಪಿದ್ದಾರೆ. 37 ವರ್ಷದ ಶರತ್ ‘ಅಂಗಮಾಲಿ ಡೈರೀಸ್’ ಚಿತ್ರದ ಮೂಲಕ ಜನಪ್ರಿಯತೆ ಪಡೆದಿದ್ದರು.

‘ಅಂಗಮಾಲಿ ಡೈರೀಸ್’, 2017ರಲ್ಲಿ ತೆರೆಗೆ ಬಂದಿದ್ದ ‘ಒರು ಮೆಕ್ಸಿಕನ್ ಅಪರಾಥ’, 2017ರಲ್ಲಿ ರಿಲೀಸ್ ಆಗಿದ್ದ ‘ಸಿಐಎ: ಕಾಮ್ರೇಡ್ ಇನ್ ಅಮೇರಿಕಾ’, 2021ರಲ್ಲಿ ಬಿಡುಗಡೆಯಾಗಿದ್ದ ‘ಒರು ತಾತ್ವಿಕ ಅವಲೋಕನಮ್’ ಮುಂತಾದ ಚಿತ್ರಗಳಲ್ಲಿ ಶರತ್ ಚಂದ್ರನ್ ಅಭಿನಯಿಸಿದ್ದರು.

‘ಅಂಗಮಾಲಿ ಡೈರೀಸ್’ ಚಿತ್ರದಲ್ಲಿ ಶರತ್ ಚಂದ್ರನ್ ಜೊತೆಗೆ ಆಂಥೋನಿ ವರ್ಗೀಸ್ ಕೂಡ ಅಭಿನಯಿಸಿದ್ದರು.

ಕೊಚ್ಚಿ ಮೂಲದವರಾದ ಶರತ್, ಈ ಹಿಂದೆ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡಿದ್ದರು. ಅವರು ಡಬ್ಬಿಂಗ್ ಕಲಾವಿದರಾಗಿ ಚಲನಚಿತ್ರದಲ್ಲಿಯೂ ಕೆಲಸ ಮಾಡಿದರು.

ಅನೀಸ್ಯ ಚಿತ್ರದ ಮೂಲಕ ಚಂದ್ರನ್ ಮಲಯಾಳಂ ಚಲನಚಿತ್ರೋದ್ಯಮಕ್ಕೆ ಪಾದಾರ್ಪಣೆ ಮಾಡಿದರು.

ಸೋಷಿಯಲ್ ಮೀಡಿಯಾದಲ್ಲಿ ಶರತ್ ಚಂದ್ರನ್ ಅವರ ಫೋಟೋವನ್ನು ಹಂಚಿಕೊಂಡು ಆಂಥೋನಿ ವರ್ಗೀಸ್ ಸಂತಾಪ ಸೂಚಿಸಿದ್ದಾರೆ.

ತಾರೆಯರು ಹಾಗೂ ಅಭಿಮಾನಿಗಳು ಶರತ್ ಚಂದ್ರನ್ ಸಾವಿಗೆ ಕಂಬನಿ ಮಿಡಿಯುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

ವಿಶೇಷ ವರದಿಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು...

ಸಮುದ್ರ ದಡದಲ್ಲಿ ತೇಲಿ ಬಂತು ರಾಶಿ ಮುರವ (ಗೊಬ್ರ) ಮೀನು

ಉತ್ತರ ಕನ್ನಡ: ಉತ್ತರಕನ್ನಡದ ಮಂಕಿ ಸಮುದ್ರ ದಡದಲ್ಲಿ ರಾಶಿ ಮುರವ (ಗೊಬ್ರ) ಮೀನುಗಳು ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿರುವ ದೃಶ್ಯ ಕಂಡುಬಂದಿದೆ.ಹೆಚ್ಚು ತೂಪಾನ್ ಆದಾಗ ನೀರು ಅತೀ ಹೆಚ್ಚು ಕೋಲ್ಡ್ ಆದಾಗ ಮೀನುಗಳು ಅರೆ...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...