Tuesday, October 19, 2021

ಮಾಲಿವುಡ್‌ನ ಖ್ಯಾತ ನಟ ನೆಡುಮುಡಿ ವೇಣು ನಿಧನ

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು (73) ಸೋಮವಾರ ನಿಧನ ಹೊಂದಿದ್ದಾರೆ.


ವೇಣು ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ನಟ. ಇವರು ನಾಟಕ ಮತ್ತು 500 ಕ್ಕೂ ಹೆಚ್ಚುಸಿನಿಮಾಗಳಲ್ಲಿ ನಟಿಸಿದ್ದಾರೆ.

ನಾಯಕ, ಖಳನಾಯಕ ಮತ್ತು ಪಾತ್ರ ನಟನಾಗಿ ತೆರೆಯಲ್ಲಿ ಮಿಂಚಿದ್ದ ವೇಣು, ಗಂಭೀರ ಮತ್ತು ತಮಾಷೆಯ ಪಾತ್ರಗಳಲ್ಲಿ ಸೈ ಎನಿಸಿಕೊಂಡವರು.

ತಮ್ಮ ವಿಶಿಷ್ಟ ನಟನಾ ಶೈಲಿ ಮತ್ತು ಪ್ರತಿಭೆಯಿಂದ ವೇಣು ಭಾರತೀಯ ಚಿತ್ರರಂಗದ ತಮ್ಮದೇ ಛಾಪು ಮೂಡಿಸಿದ್ದಾರೆ.

ಮೂರು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು ಆರು ಬಾರಿ ರಾಜ್ಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರಾಗಿರುವ ವೇಣು ಕೂಡ ಚಿತ್ರಕಥೆಗಳನ್ನೂ ಬರೆದಿದ್ದಾರೆ. ಪತ್ನಿ: ಟಿ.ಆರ್. ಸುಶೀಲ. ಮಕ್ಕಳು: ಉಣ್ಣಿ ಗೋಪಾಲ್ ಮತ್ತು ಕಣ್ಣನ್ ಗೋಪಾಲ್.
ವೇಣು ಮೇ 22, 1948 ರಂದು ಆಲಪ್ಪುಳ ಜಿಲ್ಲೆಯ ನೆಡುಮುಡಿಯಲ್ಲಿ ಶಿಕ್ಷಕರಾಗಿದ್ದ ಪಿ ಕೆ ಕೇಶವನ್ ಪಿಳ್ಳೈ ಮತ್ತು ಕುಂಜಿಕುಟ್ಟಿಯಮ್ಮ ದಂಪತಿಯ ಮಗನಾಗಿ ಜನಿಸಿದರು. ಕೆ. ವೇಣುಗೋಪಾಲ್ ಇವರ ಪೂರ್ಣ ಹೆಸರು.

ನೆಡುಮುಡಿ ಎನ್ ಎಸ್ ಎಸ್ ಹೈಯರ್ ಸೆಕೆಂಡರಿ ಶಾಲೆ, ಚಂಬಕ್ಕುಳಂ ಸೇಂಟ್ ಮೇರಿಸ್ ಹೈಯರ್ ಸೆಕೆಂಡರಿ ಶಾಲೆ ಮತ್ತು ಆಲಪ್ಪುಳ ಎಸ್ ಡಿ ಕಾಲೇಜಿನಲ್ಲಿ ಶಿಕ್ಷಣ ಪಡೆದ ಅವರು ಕಾಲೇಜು ದಿನಗಳಲ್ಲಿ ಸಾಂಸ್ಕೃತಿಕ ಮತ್ತು ಕಲಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

ಕೆಲವು ವರ್ಷಗಳ ಕಾಲ ಸಮಾನಾಂತರ ಕಾಲೇಜು ಶಿಕ್ಷಕರಾಗಿ ಕೆಲಸ ಮಾಡಿದ್ದರು. ಕಾಲೇಜಿನ ಸಹಪಾಠಿಯಾಗಿದ್ದ ಖ್ಯಾತ ನಿರ್ದೇಶಕ ಫಾಸಿಲ್ ಜೊತೆ ಮಿಮಿಕ್ರಿ ಮತ್ತು ನಾಟಕಗಳನ್ನು ಪ್ರದರ್ಶಿಸುವ ಮೂಲಕ ಕಲಾ ಜಗತ್ತಿಗೆ ಪ್ರವೇಶಿಸಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...