Thursday, October 21, 2021

ಮಾಲಿವುಡ್​ನ ಖ್ಯಾತ ನಟ ಅನುಮಾನಾಸ್ಪದ ಸಾವು: ಆರ್ಥಿಕ ಹೊಡೆತಕ್ಕೆ ನಲುಗಿದ ನಟನ ಬದುಕು

ತಿರುವನಂತಪುರಂ: ಮಾಲಿವುಡ್​ನ ಖ್ಯಾತ ನಟ​ ರಮೇಶ್ ವಲಿಯಶಾಳ ಅವರು ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅಸಹಜ ಸಾವು ಪ್ರಕರಣ ದಾಖಲಾಗಿದೆ.


ತಮ್ಮ ನಿವಾಸದ ಸಮೀಪವೇ ನೇಣು ಬಿಗಿದ ಸ್ಥಿತಿಯಲ್ಲಿ ರಮೇಶ್ ವಲಿಯಶಾಳ ಮೃತದೇಹ ಪತ್ತೆಯಾಗಿದ್ದು,

ಪೊಲೀಸರು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ರಮೇಶ್ ಎರಡು ದಿನಗಳ ಹಿಂದೆ ತಮ್ಮ ಹೊಸ ಪ್ರಾಜೆಕ್ಟ್​ಗಾಗಿ ಶೂಟಿಂಗ್ ಸ್ಥಳದಿಂದ ಹಿಂದಿರುಗಿದ್ದರು.

ಈಗ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳನ್ನು ಮೂಡಿಸಿದೆ.

ಅವರನ್ನು ಹತ್ತಿರದಿಂದ ಬಲ್ಲವರ ಪ್ರಕಾರ ಆರ್ಥಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಕೇರಳ ರಾಜ್ಯದ ಅತ್ಯಂತ ಜನಪ್ರಿಯ ಟಿವಿ ಧಾರಾವಾಹಿ ನಟರಲ್ಲಿ ಒಬ್ಬರಾಗಿದ್ದ ರಮೇಶ್, ಹಲವಾರು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಸುಮಾರು 22 ವರ್ಷಗಳಿಂದ ನಾಟಕ ಮತ್ತು ಧಾರಾವಾಹಿ ಕ್ಷೇತ್ರದಲ್ಲಿ ರಮೇಶ್ ತೊಡಗಿಸಿಕೊಂಡಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...