Friday, August 19, 2022

ರಾಜ್ಯದ ಪ್ರಥಮ ಮಲ್ಪೆ ಫ್ಲೋಟಿಂಗ್ ಬ್ರಿಡ್ಜ್ ಸಮುದ್ರಪಾಲು: ವೀಡಿಯೋ ವೈರಲ್‌

ಉಡುಪಿ: ರಾಜ್ಯದಲ್ಲೇ ಪ್ರಥಮ ಬಾರಿಗೆ ಮಲ್ಪೆ ಫ್ಲೋಟಿಂಗ್ ಬ್ರಿಡ್ಜ್ ಸಮುದ್ರದ ಅಲೆಗಳ ರಭಸಕ್ಕೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾಗಿದೆ.

ಮುರಿದು ಹೋಗಿರುವ ತೇಲುವ ಸೇತುವೆ ವಿಡಿಯೋ ತುಣುಕೊಂದು ಸದ್ಯ ಸಾಮಾಜಿಕ ಜಾಲದಲ್ಲಿ ವೈರಲ್ ಆಗಿದೆ.


ನಿನ್ನೆ ರಾತ್ರಿ ಸಮುದ್ರದಲ್ಲಿ ಉಂಟಾದ ಭಾರೀ ಅಲೆಗಳಿಗೆ ಫ್ಲೋಟಿಂಗ್ ಬ್ರಿಡ್ಜ್‌ಗೆ ತೀವ್ರತರದ ಹಾನಿಯಾಗಿದೆ.

ನಿನ್ನೆ ಸಂಜೆ 4 ಗಂಟೆಯಿಂದಲೇ ಸೇವೆ ಸ್ಥಗಿತಗೊಂಡಿದೆ.
ಸೇತುವೆ ಸಮುದ್ರ ಪಾಲಾಗಿರುವ ಕುರಿತು ಸ್ಪಷ್ಟನೆ ನೀಡಿರುವ ಮಲ್ಪೆ ತೂಗು ಸೇತುವೆ ನಿರ್ವಾಹಕರಾದ ಸಂದೇಶ್ ಶೆಟ್ಟಿ ‘ವಾಟರ್ ಸ್ಪೋರ್ಟ್ಸ್, ಐಲ್ಯಾಂಡ್ ಗೆ ಹೋಗುವ ಬೋಟ್ ಹಾಗೂ ಫ್ಲೋಟಿಂಗ್ ಬ್ರಿಡ್ಜ್ ನ್ನು ನಿನ್ನೆ ಸಾಯಂಕಾಲದಿಂದ ನಾಳೆಯವರೆಗೂ ಸ್ಥಗಿತಗೊಳಿಸಲಾಗಿದೆ.

ನಿನ್ನೆ ಅಲೆಗಳ ಪ್ರಕ್ಷುಬ್ಧತೆ ಹೆಚ್ಚಾಗಿ ಇದ್ದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಸೇತುವೆಯ ಸೆಂಟರ್ ಪಿನ್‌ಗಳ ಸಂಪರ್ಕ ಕಡಿತಗೊಳಿಸಿದ್ದೇವೆ.

ಇದನ್ನ ಕೆಲವರು ಬೇಕಂತಲೇ ವಿಡೀಯೋ ಮಾಡಿ ಸೇತುವೆ ಮುರಿದಿದೆ ಎಂಬ ಸುಳ್ಳು ಸುದ್ದಿಗಳನ್ನು ಮಾಡ್ತಿದ್ದಾರೆ. ಇದೆಲ್ಲಾ ಶುದ್ಧ ಸುಳ್ಳು ಎಂಬ ಪ್ರತಿಕ್ರಿಯೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಆ.22ರಂದು ನಾಡದೋಣಿ ಎಂಜಿನ್ ತಪಾಸಣೆ

ಮಂಗಳೂರು: 2022-23ನೇ ಸಾಲಿಗೆ ಮೀನುಗಾರಿಕೆ ಉದ್ದೇಶಕ್ಕಾಗಿ ಬಳಸುವ ಸೀಮೆಎಣ್ಣೆಯ ಪರವಾನಿಗೆಯನ್ನು ನವೀಕರಿಸುವ ಹಿನ್ನಲೆಯಲ್ಲಿ ನಾಡದೋಣಿ ಎಂಜಿನ್ ತಪಾಸಣೆ ಆ.22ರ ಸೋಮವಾರ ನಡೆಯಲಿದೆ.ದೋಣಿ ಮಾಲಕರು ದೋಣಿಯ ನೋಂದಣಿ ಪತ್ರದ ಪ್ರತಿ, ಆಧಾರ್ ಪ್ರತಿ ಮತ್ತು...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...