Thursday, August 11, 2022

ಮೋದಿಗೆ ಮಾವಿನ ಹಣ್ಣು ಕಳುಹಿಸಿದ ದೀದಿ

ನವದೆಹಲಿ: ಬಿಜೆಪಿ ಅದರಲ್ಲೂ ಪ್ರಧಾನಿ ನರೇಂದ್ರ ಮೋದಿಯನ್ನು ಕಂಡರೆ ಕಣ್ಣು ಕೆಂಪಗೆ ಮಾಡುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾವಿನ ಹಣ್ಣು ಕಳುಹಿಸುವ ಮೂಲಕ ರಾಜಕೀಯವೇ ಬೇರೆ ವೈಯುಕ್ತಿಕ ಸಂಬಂಧಗಳೇ ಬೇರೆ ಎಂಬ ಪಾಠ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಾವಿನ ಹಣ್ಣಿನ ಸೀಸನ್​ ಬಂತೆಂದರೆ ಸಾಕು ದೀದಿ ರಾಜಕೀಯವನ್ನು ಸ್ವಲ್ಪ ಪಕ್ಕಕ್ಕೆ ಇಡುತ್ತಾರೆ. ಪಶ್ಚಿಮ ಬಂಗಾಳದ ಜನಪ್ರಿಯ, ವಿಶಿಷ್ಟ ಮಾವಿನ ತಳಿಗಳಾದ ಹಿಮ್ಸಾಗರ್, ಲ್ಯಾಂಗ್ಡಾ ಮತ್ತು ಲಕ್ಷ್ಮಣ್​ಭಾಗ್ ಮಾವಿನ ಹಣ್ಣುಗಳನ್ನು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿ ದೆಹಲಿಯ ಹಲವು ಗಣ್ಯ ನಾಯಕರಿಗೆ ಕಳಿಸಿಕೊಡುತ್ತಾರೆ. 2011 ಅಂದರೆ ತಾನು ಮುಖ್ಯಮಂತ್ರಿಯಾದಾಗಿನಿಂದಲೂ ಈ ಸಂಪ್ರದಾಯ ರೂಢಿಸಿಕೊಂಡಿರುವ ಮಮತಾ ಬ್ಯಾನರ್ಜಿ ಕಳೆದ ವಾರ ಕೂಡ ಮಾವಿನಹಣ್ಣುಗಳ ಬಾಕ್ಸ್​​ನ್ನು ಪ್ರಧಾನಿಗೆ ಕಳುಹಿಸಿಕೊಟ್ಟಿದ್ದಾರೆ. ಜೊತೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್​, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಸಾರಿಗೆ ಸಚಿವ ನಿತಿನ್​ ಗಡ್ಕರಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ರಿಗೆ ಕಳಿಸಿಕೊಟ್ಟಿದ್ದಾರೆ. ಒಟ್ಟಾರೆ ಮಾವಿನ ಹಣ್ಣಿನ ಸಿಹಿ ರಾಜಕೀಯವನ್ನೂ ಸಿಹಿ ಮಾಡುತ್ತಾ ಎಂದು ಕಾದು ನೋಡಬೇಕಿದೆ.

LEAVE A REPLY

Please enter your comment!
Please enter your name here

Hot Topics

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...

ಮಂತ್ರಾಲಯದಲ್ಲಿ ರಾಯರಿಗೆ ಪೂಜೆ ಸಲ್ಲಿಸಿದ ಮಾಜಿ CM ಬಿ.ಎಸ್ ವೈ & ಕುಟುಂಬ

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಹಾಗೂ ಸಹೋದರ ಬಿ. ವೈ ವಿಜಯೇಂದ್ರ ಅವರು...

ಟಿ.ವಿ ನೋಡಲು ಬರುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ-ವ್ಯಕ್ತಿ ಬಂಧನ

ತೀರ್ಥಹಳ್ಳಿ: ಟಿ.ವಿ ನೋಡಲು ಬರುತ್ತಿದ್ದ ಪಕ್ಕದ ಮನೆಯ ಯುವತಿಗೆ ಲೈಂಗಿಕ ದೌರ್ಜನ್ಯ ನೀಡಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಅಡಿಯಲ್ಲಿ ಶಿವಮೊಗ್ಗದ ತೀರ್ಥ ಹಳ್ಳಿಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಮುರುಳೀಧರ್ ಭಟ್ ಬಂಧನಕ್ಕೊಳಗಾದ ವ್ಯಕ್ತಿ.ತೀರ್ಥಹಳ್ಳಿಯ ನಾಲೂರಿನಲ್ಲಿ...