BANTWAL
ನೆಲ್ಯಾಡಿ: ದನ ಹತ್ಯೆಗೈದು ತಲೆ, ಕಾಲುಗಳನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದ ವ್ಯಕ್ತಿ ಪೊಲೀಸರ ಬಲೆಗೆ….
ನೆಲ್ಯಾಡಿ: ದನವನ್ನು ಕಡಿದು ಅದರ ಮಾಂಸ ಮಾರಾಟ ಮಾಡಿ ತಲೆ ಮತ್ತು ಕಾಲುಗಳನ್ನು ಸ್ಥಳದಲ್ಲೇ ಬಿಟ್ಟುಹೋಗಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಮಿತ್ತಮಜಲು ನಿವಾಸಿ ತೋಮಸ್ ಯಾನೆ ಮನೋಜ್ ಬಂಧನಕ್ಕೊಳಗಾದ ವ್ಯಕ್ತಿ.
ಸಿರಿಬಾಗಿಲು ಗ್ರಾಮದ ದೇರಣೆ ಅರಣ್ಯ ಪ್ರದೇಶದಲ್ಲಿ ದನವೊಂದನ್ನು ಕಡಿದು ಮಾಂಸ ಮಾರಾಟ ಮಾಡಿ ಅದರ ತಲೆ, ಕಾಲುಗಳನ್ನು ಅಲ್ಲೇ ಬಿಟ್ಟುಹೋಗಲಾಗಿತ್ತು. ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಬಂಧನಕ್ಕೆ ಇದೀಗ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತ ಆರೋಪಿ ರಬ್ಬರ್ ಕಳ್ಳತನ ಹಾಗೂ ಇತರೇ ಹಲವು ಪ್ರಕರಣದ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿಯನ್ನು ಬಂಧಿಸಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಸಬ್ಇನ್ಸ್ಪೆಕ್ಟರ್ ರಾಜೇಶ್, ನೆಲ್ಯಾಡಿ ಹೊರಠಾಣೆ ಹೆಡ್ ಕಾನ್ಸ್ಸ್ಟೇಬಲ್ಗಳಾದ ಬಾಲಕೃಷ್ಣ, ಕುಶಾಲಪ್ಪ, ಪ್ರತಾಪ್ರವರು ಪಾಲ್ಗೊಂಡಿದ್ದರು.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
BANTWAL
ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು
ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.
ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್
ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!
ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.
- DAKSHINA KANNADA6 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
- DAKSHINA KANNADA6 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
- DAKSHINA KANNADA7 days ago
ಬಿಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!
- DAKSHINA KANNADA5 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!