Monday, July 4, 2022

ಪ್ರೀತಿಯ ನಾಟಕವಾಡಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಸೆಕ್ಸ್, ದೋಖಾ : ಮಹಿಳಾ ಪ್ರಾದ್ಯಾಪಕಿಯ ಪುತ್ರನ ಬಂಧನ..!

ಪ್ರೀತಿಯ ನಾಟಕವಾಡಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಸೆಕ್ಸ್, ದೋಖಾ : ಮಹಿಳಾ ಪ್ರಾದ್ಯಾಪಕಿಯ ಪುತ್ರನ ಬಂಧನ..!

ಬೆಂಗಳೂರು: ಪ್ರೀತಿಯ ನಾಟಕವಾಡಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಸೆಕ್ಸ್ ಮಾಡಿ ದೋಖಾ ಮಾಡಿದ ಮಹಿಳಾ ಪ್ರಾದ್ಯಾಪಕಿಯ ಪುತ್ರನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ತಾನು ವ್ಯಾಸಂಗ ಮಾಡುತ್ತಿದ್ದ ಕಾಲೇಜಿನ ಉಪನ್ಯಾಸಕಿಯ ಪುತ್ರ ತನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ್ದಾನೆ ಎಂದು ಸಂತ್ರಸ್ತೆ ಬೆಂಗಳೂರಿನ ವಿದ್ಯಾರಣಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನನ್ವಯ ವಿಜಯನಗರದ ಚಂದನ್‌(26) ಎಂಬುವನನ್ನು ವಿದ್ಯಾರಣಪುರ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ಹಾಗೂ ಚಂದನ್‌ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿದಾಗ ಚಂದನ್ ಮದುವೆಯಾಗಲು ನಿರಾಕರಿಸಿದ್ದ.

ಇದರಿಂದ ಮನನೊಂದ ಯುವತಿ ಪೊಲೀಸ್‌ ಠಾಣೆ ಮೆಟ್ಟಿಲೇರಿದಳು. ನಗರದ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕಿ ಪುತ್ರ ಚಂದನ್‌ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ.

ಯುವತಿಯು ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮೂರು ವರ್ಷಗಳ ಹಿಂದೆ ಶೇಷಾದ್ರಿಪುರಂನಲ್ಲಿ ಇಬ್ಬರ ಪರಿಚಯವಾಗಿ, ಇದು ಸ್ನೇಹಕ್ಕೆ ತಿರುಗಿತ್ತು.

ಯುವತಿಯ ಜತೆ ಹೆಚ್ಚು ಸಲುಗೆಯಿಂದ ಇದ್ದ ಚಂದನ್‌ ಆಕೆಯನ್ನು ಪ್ರೀತಿಸುವುದಾಗಿ ಹೇಳಿದ್ದ. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ಹಲವು ಬಾರಿ ಲೈಂಗಿಕ ಸಂಪರ್ಕ ಬೆಳೆಸಿದ್ದ.

ಮದುವೆಗೆಂದು ಸಂತ್ರಸ್ತೆಯಿಂದಲೇ ಲಕ್ಷಾಂತರ ಹಣ ಪಡೆದು, ಕೊನೆಗೆ ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದ.

ಇದರಿಂದ ಮನನೊಂದು ಯುವತಿ ವಿದ್ಯಾರಣಪುರ ಪೊಲೀಸರಿಗೆ ದೂರು ನೀಡಿದ್ದಳು.

 

LEAVE A REPLY

Please enter your comment!
Please enter your name here

Hot Topics

ಮಂಗಳೂರು: ‘ಬ್ಲಡ್ ಡೋನರ್ಸ್’ ಇದರ 350ನೇ ರಕ್ತದಾನ ಶಿಬಿರಕ್ಕೆ ಚಾಲನೆ

ಉಳ್ಳಾಲ: ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ವತಿಯಿಂದ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಮಂಗಳೂರು, ಫಾದರ್ ಮುಲ್ಲರ್ ರಕ್ತನಿಧಿ ಕೇಂದ್ರ ಮಂಗಳೂರು, ಯೆನೆಪೋಯಾ ಮೆಡಿಕಲ್ ಕಾಲೇಜು ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ...

ಉಡುಪಿಯ ಸಿನಿ ಶೆಟ್ಟಿಗೆ ಒಲಿದ ‘2022 ನೇ ಮಿಸ್ ಇಂಡಿಯಾ’ ಕಿರೀಟ

ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉಡುಪಿಯ ಮೂಲದ ಇನ್ನಂಜೆಯ ನಿವಾಸಿಯಾಗಿರುವ ಸಿನಿ ಶೆಟ್ಟಿಯವರು ಮಿಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಈ ಕಾರ್ಯಕ್ರಮವು ನಿನ್ನೆ ಸಂಜೆ ಮುಂಬೈನ...

ಮಂಗಳೂರಿನಲ್ಲಿ 518 ಅಕ್ರಮ ವಿದೇಶಿಗರು ಪೊಲೀಸರ ವಶಕ್ಕೆ

ಮಂಗಳೂರು: ಮಂಗಳೂರು ಪೊಲೀಸರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಯೂರಿರುವ ವಿದೇಶಿಗರ ಪತ್ತೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.ಸರಿಯಾದ ದಾಖಲೆಗಳಿಲ್ಲದ 518 ವಿದೇಶಿ ವಲಸಿಗರೆಂದು ಹೇಳಲಾದವರ ವಿಚಾರಣೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಅಕ್ರಮವಾಗಿ ‌ನೆಲೆಸಿರುವ ವಿದೇಶಿಯರ...