Wednesday, October 5, 2022

ಪತ್ನಿಯ ತಲೆಕಡಿದು ರುಂಡದೊಂದಿಗೆ ಪೊಲೀಸ್‌ ಸ್ಟೇಷನ್‌ಗೆ ಬಂದ ಗಂಡ..!

ಧೆಂಕನಕಲ್​: ಪತ್ನಿಯ ತಲೆಕಡಿದ ಗಂಡ, ಆಕೆಯ ರುಂಡದೊಂದಿಗೆ ಸುಮಾರು 12 ಕಿಲೋ ಮೀಟರ್ ನಡೆದುಕೊಂಡು ಪೊಲೀಸ್ ಠಾಣೆಗೆ ಬಂದ ಭಯಾನಕ ಘಟನೆ ಒಡಿಶಾದ ಧೆಂಕನಕಲ್​ ಪ್ರದೇಶದಲ್ಲಿ ನಡೆದಿದೆ.


ತುಂಡರಿಸಿದ ತಲೆಯೊಂದಿಗೆ ಸಮೀಪದ ಪೊಲೀಸ್ ಠಾಣೆಗೆ ತೆರಳುತ್ತಿರುವ ವ್ಯಕ್ತಿಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಮೃತ ಮಹಿಳೆಯನ್ನ ಶುಚಲಾ ಮಾಝಿ ಎಂದು ಗುರುತಿಸಲಾಗಿದೆ.
ಕಟ್ಟಿಕೊಂಡ ಹೆಂಡತಿ ಬೇರೊಬ್ಬನೊಂದಿಗೆ ಅಕ್ರಮ ಸಂಬಂಧ ಹೊಂದಿ ತನಗೆ ವಿಶ್ವಾಸದ್ರೋಹ ಮಾಡಿದ್ದಾಳೆಂದು ಶಂಕಿಸಿ, ಆಕೆಯ ಶಿರಚ್ಛೇದ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಆತನನ್ನ ಗುರುತಿಸಿರುವ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಆತನನ್ನ ಬಂಧನ ಮಾಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...