Thursday, September 29, 2022

ಮಂಗಳೂರಿನ ಎಮ್ಮೆಕೆರೆಯಲ್ಲಿ ಹಾಡು ಹಗಲೇ ಯುವಕನ ಬರ್ಬರ ಹತ್ಯೆ..!

ಮಂಗಳೂರು :  ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ಇಂದು ಸಂಜೆ ಸಂಭವಿಸಿದೆ.

ಕೊಲೆಯಾದ ಯುವಕನನ್ನು 26 ವರ್ಷದ ರಾಹುಲ್ ಎಂದು ಗುರುತಿಸಲಾಗಿದೆ. ರಾಹುಲ್ ರೌಡಿಶೀಟರ್ ಎನ್ನಲಾಗಿದ್ದು ಹಲವು ಪ್ರಕರಣಗಳು ಈತನ ಮೇಲಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಹಳೆ ದ್ವೇಷವೇ ಕೊಲೆ ಕಾರಣ ಎಂದು ಶಂಕಿಸಲಾಗಿದ್ದು ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್, ಡಿಪಿಪಿ ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಸಮಘಟನೆಯಲ್ಲೂ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯನಿಗೆ ಹಲ್ಲೆ ನಡೆಸಿದ್ದ.

ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics

5 ವರ್ಷ PFI ಬ್ಯಾನ್ : ಮಂಗಳೂರಿನ ಕಚೇರಿಗಳಿಗೆ ಬೀಗ ಜಡಿದು ಸೀಲ್ ಡೌನ್ ಮಾಡಿದ ಪೊಲೀಸರು..!

ಮಂಗಳೂರು : ಪಿಎಫ್‌ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್‌ಐ ಕಚೇರಿಗಳನ್ನು ಸೀಲ್ ಡೌನ್...

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...