BANTWAL
ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವಕ
ಬಂಟ್ವಾಳ ಎಪ್ರಿಲ್ 29: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಪುತ್ತೂರು ನಿವಾಸಿ ನಿರಂಜನ್ ಎಂದು ಗುರುತಿಸಲಾಗಿದ್ದು, ಈತ ಬುಧವಾರ ರಾತ್ರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ನಿನ್ನೆ ರಾತ್ರಿಯಿಂದ ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ವಾರಸುದಾರರಿಲ್ಲದ ಬೈಕ್ ಒಂದು ನಿಂತಿದ್ದು, ಇಂದು ಕೂಡ ಬೈಕ್ ಅಲ್ಲೆ ಇದ್ದ ಹಿನ್ನಲೆ ಅನುಮಾನಗೊಂಡ ಗೂಡಿನಬಳಿ ಪರಿಸರದ ಯುವಕರು ನದಿಯಲ್ಲಿ ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ.
ಬೈಕ್ನಲ್ಲಿ ದೊರೆತ ದಾಖಲೆ ಪತ್ರಗಳ ಆಧಾರದಲ್ಲಿ ಮೃತ ಯುವಕನ ಹೆಸರು, ವಿಳಾಸ ಪತ್ತೆಯಾಗಿದೆ. ಮೃತ ನಿರಂಜನ್ ಕೊಲ್ಲಿ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದು ವರ್ಷದ ಹಿಂದೆ ಊರಿಗೆ ಬಂದಿದ್ದರು. ವಿವಾಹಿತರಾಗಿರುವ ಅವರಿಗೆ ಒಂದು ಹೆಣ್ಣು ಮಗು ಇದೆ ಎಂದು ತಿಳಿದು ಬಂದಿದೆ.
ಮೃತನ ಕುಟುಂಬಿಕರಿಗೆ ಮಾಹಿತಿ ನೀಡಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳೀಯ ಈಜುಗಾರರಾದ ಹಾರಿಸ್, ಮುಹಮ್ಮದ್ ಮಮ್ಮು, ಇಬ್ರಾಹೀಂ, ಅಮ್ಮಿ, ಇಕ್ಬಾಲ್, ಶಮೀರ್ ಅವರ ತಂಡ ಮೃತದೇಹವನ್ನು ನದಿಯಲ್ಲಿ ಪತ್ತೆ ಹಚ್ಚಿದೆ.
BANTWAL
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ
BANTWAL
ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ
ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.
ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.
ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.
BANTWAL
ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!
ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ