Wednesday, June 16, 2021

ಉಡುಪಿ: ಕಪ್ಪೆ ಚಿಪ್ಪು ಹೆಕ್ಕಲು ಹೋಗಿ ವ್ಯಕ್ತಿ ನೀರು ಪಾಲು

ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಪಾಪನಾಶಿನಿ ಹೊಳೆಯಲ್ಲಿ ಕಪ್ಪೆ ಚಿಪ್ಪು ಹಿಡಿಯಲು ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಮೃತರನ್ನು 41 ವರ್ಷದ ಆಸ್ಟೀನ್ ಮಚಾದೋ ಎಂದು ಗುರುತ್ತಿಸಲಾಗಿದೆ. ನಾಟಕ, ಚಿತ್ರ ಕಲಾವಿದರಾಗಿದ್ದ ಮಚಾದೋ ಪೈಂಟಿಂಗ್ ವ್ರತ್ತಿ ಮಾಡಿಕೊಂಡಿದ್ದು, ಕಪ್ಪೆಚಿಪ್ಪು ಹಿಡಿಯಲೆಂದು ಮನೆಯಿಂದ ಉದ್ಯಾವರ ಗ್ರಾಮದ ಪಾಪನಾಶಿನಿ ಹೊಳೆಗೆ ಹೋಗಿದ್ದರು.

ತನ್ನ ಸ್ಕೂಟರನ್ನು ಹೊಳೆ ಬದಿಯಲ್ಲಿ ನಿಲ್ಲಿಸಿ ಹೊಳೆಗೆ ಇಳಿದಿದ್ದು, ವಾಪಾಸು ಮನೆಗೆ ಬಾರದೇ ಇದ್ದ ವೇಳೆ ಮನೆಯವರು ಹುಡುಕಾಟ ನಡೆಸಿದ್ದಾರೆ.

ಹೊಳೆಯ ಸುತ್ತಮುತ್ತ ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ, ಬಳಿಕ ಉದ್ಯಾವರ ಗ್ರಾಮದ ಸಂಪಿಗೆನಗರ ಬಬ್ಬರ್ಯಗುಡ್ಡೆಯ ಪಾಪನಾಶಿನಿ ಹೊಳೆಯಲ್ಲಿ ಆಸ್ಟೀನ್ ಮಚಾದೋ ಮೃತದೇಹ ಪತ್ತೆಯಾಗಿದೆ.

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಹೊರಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...