Thursday, April 22, 2021

ಸ್ನೇಹಿತರೆದುರೇ ನಾಲೆಯಲ್ಲಿ ಕೊಚ್ಚಿ ಹೋದ ಯುವಕ ..!

ಸ್ನೇಹಿತರೆದುರೇ ನಾಲೆಯಲ್ಲಿ ಕೊಚ್ಚಿ ಹೋದ ಯುವಕ ..!

ಚಿಕ್ಕಮಗಳೂರು : ಸ್ನೇಹಿತರೊಂದಿಗೆ ಸ್ನಾನಕ್ಕೆ ಹೋದ ಯುವಕ ನಾಲೆಯಲ್ಲಿ ಕೊಚ್ಚಿ ಹೋಗಿ ಸ್ನೇಹಿತರ ಕಣ್ಣೆದುರೇ ಸಾವಿಗೀಡಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹಳಿಯೂರು ಗೇಟ್ ಬಳಿ ಶುಕ್ರವಾರ ನಡೆದಿದೆ.

ಮೃತನನ್ನು 22 ವರ್ಷದ ವಿಶ್ವಾಸ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ನಾಲ್ವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಭದ್ರಾ ಮೇಲ್ದಂಡೆ ಯೋಜನೆಯ ನಾಲೆಗೆ ತೆರಳಿದ ವೇಳೆ ಈ ದುರ್ಘಟನೆ ಸಂಭವಿಸಿದೆ.

ವಿಶ್ವಾಸ್ ನೀರಿನಲ್ಲಿ ಮುಳುಗುವ ವೇಳೆ ಜೊತೆಗಿದ್ದ ಸ್ನೇಹಿತರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ.


ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನಿಗೆ ಹಗ್ಗ ಎಸೆದು ಸಹಾಯ ಮಾಡಲು ಪ್ರಯತ್ನಿಸಿದರೂ ಫಲ ನೀಡಲಿಲ್ಲ.

ನಾಲ್ವರು ಯುವಕರು ಆತನನ್ನು ಉಳಿಸಲು ಹರಸಾಹಸ ಮಾಡಿದ್ದು, ವಿಶ್ವಾಸ್ ನೀರಿನಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾರೆ.

ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ತರೀಕೆರೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...