Connect with us

DAKSHINA KANNADA

ಸಮುದ್ರಕ್ಕಿಳಿದ ನಾಲ್ಕು ಮಂದಿ ನೀರು ಪಾಲು- ಒರ್ವ ಸಾವು.!- ಮೂಲ್ಕಿ ಚಿತ್ರಾಪು ಸಮೀಪದ ಕೆರೇಬಿಯನ್ ಬೀಚ್ ನಲ್ಲಿ ಘಟನೆ..!

Published

on

ಸಮುದ್ರಕ್ಕಿಳಿದ ನಾಲ್ಕು ಮಂದಿ ನೀರು ಪಾಲು- ಒರ್ವ ಸಾವು.!- ಮೂಲ್ಕಿ ಚಿತ್ರಾಪು ಸಮೀಪದ ಕೆರೇಬಿಯನ್ ಬೀಚ್ ನಲ್ಲಿ ಘಟನೆ..!

ಮಂಗಳೂರು :2020 ವರ್ಷದ ಕೊನೆಯ ದಿನವಾದ ಇಂದು  ಈಜಾಡಲೆಂದು ಸಮುದ್ರಕ್ಕಿಳಿದ ನಾಲ್ಕು ಮಂದಿ ನೀರು ಪಾಲಾಗಿದ್ದು,  ಒರ್ವ ಮ್ರತ ಪಟ್ಟ ಘಟನೆ ಮಂಗಳೂರಿನ ಹೊರ ವಲಯದ  ಮೂಲ್ಕಿ ಚಿತ್ರಾಪು ಸಮೀಪದ ಕೆರೇಬಿಯನ್ ಬೀಚ್ ನಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಡಬ ನಿವಾಸಿ ಜಯರಾಮ್ ಎಂದು ಗುರುತಿಸಲಾಗಿದೆ. ಮೃತರು ಸಾಮಾಜಿಕ, ಧಾರ್ಮಿಕ ರಂಗದಲ್ಲಿ ಗುರುತಿಸಿಕೊಂಡಿದ್ದು, ಜೇಸಿಐ ಕಡಬ ಕದಂಬ ಘಟಕದ ಪೂರ್ವಾಧ್ಯಕ್ಷರಾಗಿದ್ದರು. ಇಂದು  ಸಂಜೆ ಈಜಾಡಲೆಂದು ಗೆಳೆಯರೊಂದಿಗೆ ಸಮುದ್ರಕ್ಕಿಳಿದಿದ್ದಾಗ ಸಮುದ್ರದ ಅಲೆಗಳ ಸೆಳೆತಕ್ಕಿ ಸಿಕ್ಕಿ  ನಾಲ್ವರು ನೀರು ಪಾಲಾಗಿದ್ದರು.

ಘಟನೆ ನಡೆದ ಕೂಡಲೇ ಸ್ಥಳೀಯ ಮಂತ್ರ ಸರ್ಪ್ ಕ್ಲಬ್ ಸದಸ್ಯರು ಮೂವರನ್ನು ಪಾರು ಮಾಡಿದ್ದಾರೆ.

ಆದರೆ ಜಯರಾಮ್ ಮಾತ್ರ ಮೃತಪಟ್ಟಿದ್ದಾರೆ. ಮೂಲ್ಕಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

BANTWAL

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

Published

on

ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್ ಇಲಾಖೆಯು ಆಧುನಿಕ ತಂತ್ರಜ್ಞಾನದೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸುತ್ತಿದೆ. ಇದಕ್ಕೆ ಊರವರ ಮತ್ತು ಮನೆಯವರ ಸಹಕಾರ ಅಗತ್ಯ. ಈಗಾಗಲೇ ಡಿವೈಎಸ್ಪಿ ನೇತೃತ್ವದ 4 ತಂಡಗಳನ್ನು ರಚಿಸಲಾಗಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಈ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಶೀಘ್ರವೇ ದರೋಡೆಕೋರರ ಪತ್ತೆ ಹಚ್ಚುವಲ್ಲಿ ಕ್ರಮಕೈಗೊಳ್ಳಲಾಗುವುದು ಎಂದರು.

ಇದಕ್ಕೂ ಮುನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಡಿವೈಎಸ್ಪಿ ವಿಜಯ ಪ್ರಸಾದ್ ಜೊತೆಗೆ ದರೋಡೆಗೊಳಗಾದ ಮನೆಯ ಮಾಲಕ ಸುಲೈಮಾನ್ ಹಾಜಿ ಹಾಗೂ ಪುತ್ರ ಇಕ್ಬಾಲ್ ಜೊತೆಗೆ ಗೌಪ್ಯ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ಎಚ್.ಇ. ನಾಗರಾಜ್, ಸಬ್ ಇನ್ಸ್ ಪೆಕ್ಟರ್ ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಅಕ್ರಮ ಮರಳುಗಾರಿಕೆ ಅಡ್ಡೆಗೆ ಅಧಿಕಾರಿಗಳ ದಾಳಿ

Published

on

ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ 9 ದೋಣಿಗಳನ್ನು ವಶಪಡಿಸಿದ್ದಾರೆ.

ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಂಬ್ಲಮೊಗರು ಸಮೀಪ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ಸ್ಥಳದಲ್ಲಿದ್ದ ಸುಮಾರು 13.5 ಲಕ್ಷ ರೂಪಾಯಿ ಮೌಲ್ಯದ 9 ಬೋಟು, 2 ಯಂತ್ರ, 3 ಗ್ಯಾಸ್ ಸಿಲಿಂಡರ್, 13 ಪ್ಲಾಸ್ಟಿಕ್‌ ಬಕೆಟ್ ಗಳನ್ನು ವಶಪಡಿಸಲಾಯಿತು.

ಇದನ್ನೂ ಓದಿ: ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್, ಸಿಬ್ಬಂದಿಗಳು ಇದ್ದರು.

Continue Reading

DAKSHINA KANNADA

ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ

Published

on

ಸುಳ್ಯ : ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾ*ಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ.

ಕಾವ್ಯಶ್ರೀ ಎಂಬುವವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಬಿಸಿ ಹಾಲಿನ ಪಾತ್ರೆಯಿಂದ ತನ್ನ 5 ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸು*ಟ್ಟು ನೋವುಂಟು ಮಾಡಿದ್ದರು.

ಇದನ್ನೂ ಓದಿ: ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ನೀರಾಟಕ್ಕಿಳಿದ ನಾಲ್ವರಲ್ಲಿ ಮೂವರು ಸಾವು, ಓರ್ವನ ರಕ್ಷಣೆ 

ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ರಶ್ಮಿ ಅವರಿಗೆ ವಿಷಯ ಗೊತ್ತಾಗಿ ಸುಳ್ಯ ಠಾಣೆಯಲ್ಲಿ ತಾಯಿ ವಿರುದ್ದ ದೂರು ದಾಖಲಿಸಿದ್ದರು.

ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಧೀಶ ಬಿ. ಮೋಹನ್ ಬಾಬು ಅವರು ಆಪಾದಿತೆಯನ್ನು ದೋಷಿಯೆಂದು ಘೋಷಿಸಿದ್ದಾರೆ. ಅಪಾದಿತೆಗೆ ಒಟ್ಟು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ತಿಂಗಳ ಸಾದಾ ಕಾರಗೃಹ ವಾಸದ ತೀರ್ಪು ನೀಡಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು ವಾದಿಸಿದ್ದರು.

Continue Reading

LATEST NEWS

Trending

Exit mobile version