Connect with us

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಅಕ್ರಮ ಪ್ರವೇಶ: ಓರ್ವ ವಶಕ್ಕೆ

Published

on

ಮಂಗಳೂರು: ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ಶಂಕಿತ ವ್ಯಕ್ತಿಯೋರ್ವನನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿ ವಶಕ್ಕೆ ಪಡೆದು ಪೊಲೀಸರಿಗೊಪ್ಪಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.

 

ಘಟನೆ ವಿವರ

ಜೂನ್ 5 ರ ರಾತ್ರಿ 11 ರ ಸುಮಾರಿಗೆ ಈ ಘಟನೆ ನಡೆದಿದ್ದು, ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ‌ ರನ್ ವೇ ಕಾಮಗಾರಿ ನಡೆಯುತ್ತಿದ್ದು ಆ ಸ್ಥಳದಲ್ಲಿ, ಅಕ್ರಮವಾಗಿ ಪ್ರವೇಶಿಸಿದ ವ್ಯಕ್ತಿ ಕಂಡುಬಂದಿದ್ದಾನೆ.  ಗಸ್ತು ತಿರುಗುತ್ತಿದ್ದ ಸಿಐಎಸ್ಎಫ್ ಸಿಬ್ಬಂದಿ ತಕ್ಷಣ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಸಿಐಎಸ್ಎಫ್ ಯುನಿಟ್ ನ ನಿರೀಕ್ಷಕ ಪ್ರಮೋದ್ ಕುಮಾರ್ ನಿಷೇಧಿತ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿರುವ ಬಗ್ಗೆ ನೀಡಿದ ದೂರಿನಂತೆ ಬಜ್ಪೆ ಠಾಣಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

‘ಸಂಬಳ ನೀಡದ್ದಕ್ಕೆ ಇಲ್ಲಿಗೆ ಬಂದೆ’

ಪಶ್ಚಿಮ ಬಂಗಾಳದ ಮುರ್ಸಿದಾಬಾದ್ ನ ಬಧುಹಾ ಗ್ರಾಮದ ನಿವಾಸಿ ರಾಕೇಶ್ ಎಂದು ಹೇಳಿಕೊಂಡಿದ್ದಾನೆ. ಈತ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ತನ್ನ ಜೊತೆ ಇದ್ದ ಲಾರಿ ಡ್ರೈವರ್ ತನಗೆ ಸಂಬಳ ನೀಡದೆ ಇಲ್ಲೇ ಸಮೀಪದಲ್ಲಿ ಬಿಟ್ಟು ಹೋಗಿದ್ದು ದಾರಿ ಕಾಣದೇ ವಿಮಾನ ನಿಲ್ದಾಣ ಎಂದು ತಿಳಿಯದೇ ಈ ಭಾಗಕ್ಕೆ ಬಂದಿರುತ್ತೇನೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ. ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending