ಗಂಗೊಳ್ಳಿ: ತೆಂಗಿನಮರ ಹತ್ತಿ ತೆಂಗಿನಕಾಯಿ ಕೊಯುತ್ತಿದ್ದಾಗ ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕುಂದಾಪುರದ ಆಲೂರು ಗ್ರಾಮದ ಮೂಡುಬೆಟ್ಟು ಕಳಿ ಎಂಬಲ್ಲಿ ನಿನ್ನೆ ನಡೆದಿದೆ.
ಮೃತ ವ್ಯಕ್ತಿಯನ್ನು ರಾಮ ಗೌಡ (45) ಎಂದು ಗುರುತಿಸಲಾಗಿದೆ.
ಅ.11ರಂದು ರಾಮ ಗೌಡ ಎಂಬುವವರು ತನ್ನ ಮನೆಯ ಸಮೀಪ ತೆಂಗಿನ ಮರವನ್ನು ಹತ್ತಿ ತೆಂಗಿನ ಕಾಯಿಯನ್ನು ಕೊಯ್ಯುವಾಗ ಆಕಸ್ಮಿಕವಾಗಿ ಕಾಲು ಜಾರಿ 25 ಅಡಿ ಮೇಲಿನಿಂದ ಕೆಳಗೆ ನೆಲದ ಮೇಲೆ ಬಿದ್ದ ಪರಿಣಾಮ ಕುತ್ತಿಗೆಗೆ ತೀವ್ರ ಜಖಂ ಗೊಂಡಿದ್ದು,
ತಕ್ಷಣವೇ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸುತ್ತಾರೆ.
ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಆಯುಷ್ಮಾನ್ ಬೆಡ್ ಖಾಲಿ ಇಲ್ಲದ ಕಾರಣ ಅಲ್ಲಿಂದ ಮತ್ತೆ ಸುರತ್ಕಲ್ ಮುಕ್ಕ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಚಿಕಿತ್ಸೆ ನೀಡಿ ಒಳರೋಗಿಯಾಗಿ ದಾಖಲಿಸಿಕೊಂಡಿರುತ್ತಾರೆ.
ಆದರೆ ನಿನ್ನೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.