BELTHANGADY
ಬೆಳ್ತಂಗಡಿ: ನೀರು ಸೇದುತ್ತಿದ್ದಾಗ ಫಿಟ್ಸ್ ಬಂದು ಬಾವಿಗೆ ಬಿದ್ದ ವ್ಯಕ್ತಿ ದಾರುಣ ಅಂತ್ಯ..
ಬೆಳ್ತಂಗಡಿ: ನೀರು ಸೇದುವ ವೇಳೆ ವ್ಯಕ್ತಿಯೊಬ್ಬರು ಫಿಟ್ಸ್ ಖಾಯಿಲೆ ಬಂದು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮಂಜುಬೆಟ್ಟು ಎಂಬಲ್ಲಿ ನಡೆದಿದೆ.
ಇಲ್ಲಿನ ನೇರೋಳ್ದ ಪಲ್ಕೆ ನಿವಾಸಿ ಬಾಬು (33) ಎಂಬವರು ಆಕಸ್ಮಿವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ದುರ್ದೈವಿ.
ಮೃತ ಬಾಬು ಅವರು ಕುವೆಟ್ಟು ಗ್ರಾಮದ ಮಂಜುಬೆಟ್ಟು ಎಂಬಲ್ಲಿರುವ ತನ್ನ ದೊಡ್ಡಮ್ಮನ ಮನೆಗೆ ಹೋಗಿದ್ದರು.
ಈ ವೇಳೆ ದೊಡ್ಡಮ್ಮನ ಮನೆಯಲ್ಲಿ ನೀರು ಸೇದುವ ಸಂದರ್ಭ ಫಿಟ್ಸ್ ಕಾಯಿಲೆ ಬಂದು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ