Connect with us

LATEST NEWS

ಎಫ್‌ಡಿ ಮಂಗಮಾಯ: ಬಡ್ಡಿ ಸಹಿತ ಹಣ ಹಿಂತಿರುಗಿಸಿ ಎಂದರೂ ಹಣ ನೀಡದ ಬ್ಯಾಂಕ್‌

Published

on

ಉಡುಪಿ: ಸೈಬರ್ ಅಪರಾಧಗಳು, ದಂಧೆಗಳು ಹೆಚ್ಚುತ್ತಲೇ ಇವೆ. ಎಲ್ಲೋ ಕುಳಿತು ಬ್ಯಾಂಕ್ ನಿಂದ ಹಣ ವಿತ್ ಡ್ರಾ ಮಾಡುವುದೂ ಅಲ್ಲಲ್ಲಿ ನಡೆಯುತ್ತಿದೆ.

ಆದರೆ ಇದೊಂದು ಹೊಸ ಪ್ರಕರಣ. ವ್ಯಕ್ತಿಯೊಬ್ಬರ ಫಿಕ್ಸ್ ಡ್ ಡಿಪಾಸಿಟನ್ನೇ (ಎಫ್‌ಡಿ) ಅನಾಮತ್ತಾಗಿ ಲಪಟಾಯಿಸಲಾಗಿದೆ.

ಈ ಪ್ರಕರಣದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ನ ಬೇಜವಾಬ್ದಾರಿ ಮತ್ತು ಸೇವಾ ನ್ಯೂನತೆಯೂ ಸಾಬೀತಾಗಿದ್ದು ಗ್ರಾಹಕರ ನ್ಯಾಯಾಲಯ ಗ್ರಾಹಕನಿಗೆ ಪೂರ್ತಿ ಹಣ ಪಾವತಿಸುವಂತೆ ತೀರ್ಪನ್ನೂ ನೀಡಿದೆ.
ಹರೀಶ ಗುಡಿಗಾರ್‌ ಉಡುಪಿ ಜಿಲ್ಲೆಯ ಉಪ್ಪೂರಿನವರು. ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದಾಗ ಮಲ್ಲೇಶ್ವರಂನ ರಾಷ್ಟ್ರೀಕೃತ ಬ್ಯಾಂಕಿನ ಸೇವಿಂಗ್ಸ್ ಬ್ಯಾಂಕ್ ಖಾತೆ ಹೊಂದಿದ್ದರು.

ಬೆಂಗಳೂರು ತೊರೆದ ಬಳಿಕ, ಉಡುಪಿಯ ಸಂತೆಕಟ್ಟೆಯ ಬ್ರಾಂಚಿಗೆ ಅಕೌಂಟ್ ವರ್ಗಾವವಣೆ ಮಾಡಿದ್ದರು. 5 ಲಕ್ಷ ರೂ.ಫಿಕ್ಸ್ ಡ್ ಡಿಪಾಸಿಟ್ ಇಟ್ಟರು.

ಕೆಲ ದಿನಗಳ ಬಳಿಕ ಮೊಬೈಲ್ ಗೆ ಮೆಸೇಜ್ ಬರತೊಡಗಿದವು. ನೋಡಿದರೆ ಹರೀಶ್ ಅವರ ಫಿಕ್ಸ್ ಡ್ ಡೆಪಾಸಿಟ್ ನಲ್ಲಿದ್ದ ಹಣವೇ ಮಾಯವಾಗಿತ್ತು.
ಇಂತಹ ಸಂದರ್ಭಗಳಲ್ಲಿ ಬ್ಯಾಂಕ್ ನವರು ಗ್ರಾಹಕರ ನೆರವಿಗೆ ಬರಬೇಕು. ದುರದೃಷ್ಟವಶಾತ್ ಹರೀಶ್ ಅವರ ಪ್ರಕರಣದಲ್ಲಿ ಹೀಗಾಗಲಿಲ್ಲ.

ಬ್ಯಾಂಕ್ ನವರು ನೆರವಿಗೆ ಬರಲೇ ಇಲ್ಲ. ಹರೀಶ್ ತಮ್ಮ ಐದು ಲಕ್ಷ ಕ್ಕೂ ಹೆಚ್ಚಿನ ಹಣ ಕಳೆದುಕೊಂಡು ಹೈರಾಣಾದರು. ಈ ಮಧ್ಯೆ ಪೊಲೀಸ್ ದೂರು ಕೊಟ್ಟರು.

ಬ್ಯಾಂಕ್ ಮ್ಯಾನೇಜರ್ ಗೆ ದುಂಬಾಲು ಬಿದ್ದರು. ಆದರೆ ಬ್ಯಾಂಕಿನಿಂದಲೂ ಸಮರ್ಪಕ ಉತ್ತರ ಬಾರದೇ ಇದ್ದ ಕಾರಣ, ಅನಿವಾರ್ಯವಾಗಿ ಗ್ರಾಹಕ ನ್ಯಾಯಾಲಯದ ಕದ ತಟ್ಟಿದರು.

ಸಮಗ್ರ ತನಿಖೆ ನಂತರ ಹರೀಶ್ ಕಳೆದುಕೊಂಡ ಹಣವನ್ನು ಬಡ್ಡಿ ಸಮೇತ ನೀಡಬೇಕು ಎಂದು ಇದೀಗ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದೆ.

ಆದರೆ ಇನ್ನೂ ಆಶ್ಚರ್ಯದ ಸಂಗತಿ ಎಂದರೆ ಹರಿಶ್ ಅವರು ಕಳೆದುಕೊಂಡ ಹಣವನ್ನು ಬಡ್ಡಿ ಸಮೇತ ನೀಡಬೇಕು ಎಂದು ಕೋರ್ಟ್ ತೀರ್ಪು ನೀಡಿದ್ದರೂ ಇದುವರೆಗೂ ಬ್ಯಾಂಕ್ ನವರು ಹಣವನ್ನೇ ನೀಡಲಿಲ್ಲ.

ಹೀಗಾಗಿ ನ್ಯಾಯಕ್ಕಾಗಿ ಹರೀಶ್ ಮತ್ತೊಮ್ಮೆ ರವೀಂದ್ರನಾಥ್ ಶಾನುಭಾಗ್ ಮೊರೆ ಹೋಗಿದ್ದಾರೆ. ಮುಂದೇನಾಗುತ್ತೋ ಕಾದು ನೋಡಬೇಕಿದೆ.

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending