Wednesday, February 1, 2023

ಮುಲ್ಕಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿ ನಾಪತ್ತೆ

ಮುಲ್ಕಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ನಿಮಗೆ ಏನೂ ತೊಂದರೆ ಮಾಡುವುದಿಲ್ಲ. ಎಲ್ಲಿಯಾದರೂ ಹೋಗಿ ದುಡಿದು ತಿನ್ನುತ್ತೇನೆ ಎಂದು ಹೇಳಿ ಹೊರಟವರು ನಾಪತ್ತೆಯಾದ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಪೆಡ್ರಿಕ್ ರೇಗೋ (69) ಬೆಳಿಗ್ಗೆ 10.30 ಕ್ಕೆ ಮನೆಗೆ ಬಂದವರು ಹೆಂಡತಿ ಜೊತೆ ‘ಇನ್ನು ನಿಮಗೆ ಏನೂ ತೊಂದರೆ ನೀಡುವುದಿಲ್ಲ, ಎಲ್ಲಿಯಾದರೂ ಹೋಗಿ ದುಡಿದು ತಿನ್ನುತ್ತೇನೆ ‘ ಎಂದು ಹೇಳಿ 11.30 ಗಂಟೆಗೆ ಮನೆಯಿಂದ ಹೊರಟು ಹೋದವರು ಹಿಂತಿರುಗದೇ ಕಾಣೆಯಾಗಿದ್ದಾರೆ.

ಇವರು ಬಿಳಿ ಮೈಬಣ್ಣ ಹೊಂದಿದ್ದು, ಆಕಾಶ ನೀಲಿ ಬಣ್ಣದ ಚೌಕಳಿ ಇರುವ ಉದ್ದ ತೋಳಿನ ಅಂಗಿ ಮತ್ತು ಕಪ್ಪು ಬಣ್ಣದ ಫ್ಯಾಂಟನ್ನು ಧರಿಸಿದ್ದಾರೆ.

ಇವರು ಇಂಗ್ಲೀಷ್, ಹಿಂದಿ, ಕನ್ನಡ, ಕೊಂಕಣಿ, ತಮಿಳು ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಈ ವ್ಯಕ್ತಿಯ ಬಗ್ಗೆ ಏನಾದರೂ ಮಾಹಿತಿ ತಿಳಿದುಬಂದಲ್ಲಿ ಮುಲ್ಕಿ ಪೊಲೀಸ್ ಠಾಣೆ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 0824-2290533 ನಂಬರಿಗೆ ಕರೆ ಮಾಡಿ ತಿಳಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

Hot Topics

ರಾಜ್ಯದಲ್ಲಿ ಚುನಾವಣಾ ಕಾವು :ಪಶ್ಚಿಮ ವಲಯ ವ್ಯಾಪ್ತಿಯ ಎಸ್ಸೈಗಳ ವರ್ಗಾವಣೆ..!

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ ಎಸ್ಸೈಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ...

ಉಡುಪಿ: ನಾಗಬನದಲ್ಲಿನ ಶ್ರೀಗಂಧ ಮರ ಕಳವು- ಆರೋಪಿ ಬಂಧನ

ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿ ಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆಯವರು  ವಶಕ್ಕೆ ಪಡೆದುಕೊಂಡಿದ್ದಾರೆ.ಉಡುಪಿ: ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್...

ಶಿಷ್ಯೆಯ ಮೇಲೆ ಅತ್ಯಾಚಾರ ಪ್ರಕರಣ: ಆಸಾರಾಂ ಬಾಪುಗೆ 2ನೇ ಪ್ರಕರಣದಲ್ಲೂ ಜೀವಾವಧಿ ಶಿಕ್ಷೆ..

2013ರಲ್ಲಿ ತನ್ನ ಶಿಷ್ಯೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಗುಜರಾತ್‌ನ ಗಾಂಧಿನಗರದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.ಅಹಮದಾಬಾದ್:‌ 2013ರಲ್ಲಿ ತನ್ನ...