Sunday, May 16, 2021

ಕ್ಷಲ್ಲಕ ಜಗಳ ಕೊಲೆಯಲ್ಲಿ ಅಂತ್ಯ :ಹೊನ್ನಾವರದ ಚಂದಾವರದಲ್ಲಿ ವ್ಯಕ್ತಿಯ ಕೊಲೆ..!

ಹೊನ್ನಾವರ : ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವಿನ ವಾಗ್ವಾದ ಜಗಳಕ್ಕೆ ತಿರುಗಿ ವ್ಯಕ್ತಿಯೊಬ್ಬ ಎದುರಿದ್ದವನ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಭೀಕರ ಘಟನೆಗೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರ ಸಾಕ್ಷಿಯಾಗಿದೆ.

ಕೊಲೆಯಾದವನನ್ನು ಅಬು ತಲೀಬ್ ಎಂದು ಗುರುತಿಸಲಾಗಿದ್ದು ಸಲೀನ್ ಕೋಟೆಬಾಗಿಲ್ ಎಂಬಾತ ಚಾಕು ಇರಿದ ದುಷ್ಕರ್ಮಿಯಾಗಿದ್ದಾನೆ.

ಇಬ್ಬರ ನಡುವೆಯೂ ಕೆಲ ಹೊತ್ತು ವಾಗ್ವಾದ ನಡೆದಿದ್ದು ಸ್ಥಳಿಯರು ಇಬ್ಬರನ್ನೂ ಸಮಾಧಾನಿಸುವ ಪ್ರಯತ್ನದಲ್ಲಿದ್ದರೂ ಕೈಯಲ್ಲಿ ಚಾಕು ಹಿಡಿದಿದ್ದ ಸಲೀನ್ ನೋಡ ನೋಡುತ್ತಲೇ ಎದುರಿದ್ದವನ ಎದೆಗೆ ಬಲವಾಗಿ ಚಾಕು ಇರಿದು ಕೊಲೆಗೈದಿದ್ದಾನೆ.

ವಿಷಯ ತಿಳಿಯುತ್ತಲೇ ಹೊನ್ನಾವರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಕೊರೊನಾ ಲಾಕ್‌ಡೌನ್ ಕಾರಣಕ್ಕೆ ಮನೆಯಲ್ಲಿ ಕುಳಿತು ಜೀವ ಉಳಿಸಿಕೊಳ್ಳಲು ಎಲ್ಲರೂ ಹೋರಾಡುತ್ತಿರುವಾಗ ನೋಡ ನೋಡುತ್ತಲೇ ಜೀವ ಒಂದನ್ನು ತೆಗೆದ ಘಟನೆ ತಾಲೂಕಿನಲ್ಲಿ ಆತಂಕಕ್ಕೆ ಕಾರಣವಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...