BANTWAL
ಬಂಟ್ವಾಳ ಹೈವೇಯಲ್ಲಿ ನಿಂತ ಮಳೆ ನೀರಿನಲ್ಲಿ ಈಜಿ ಹೊರಳಾಡಿದ ವ್ಯಕ್ತಿ…!
ಬಂಟ್ವಾಳ: ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೋರ್ವ ಹೊಂಡದಲ್ಲಿ ತುಂಬಿಕೊಂಡಿರುವ ಮಳೆ ನೀರಿನಲ್ಲಿ ಈಜಾಟ ನಡೆಸುತ್ತಿರುವ ದೃಶ್ಯ ಮಂಗಳೂರು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ಅಡ್ಡಹೊಳೆ ಚತುಷ್ಪಥ ರಸ್ತೆಯಲ್ಲಿ ಕಂಡುಬಂದಿದೆ.
ಇಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸ ನಡೆಯುತ್ತಿರುವುದರಿಂದ ಹೊಂಡಗಳಲ್ಲಿ ಮಳೆ ನೀರು ನಿಂತಿದೆ.
ಬಿಸಿ ರೋಡಿನಿಂದ ಮಾಣಿವರೆಗೆ ಅಸಮರ್ಪಕ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದರೆ, ಇನ್ನೊಂದೆಡೆ ಪ್ರಯಾಣಿಕರ ವಾಹನಗಳು ಹೊಂಡದಲ್ಲಿ ಸಿಲುಕಿ ಜಖಂಗೊಳ್ಳುತ್ತಿವೆ.
ಜೊತೆಗೆ ಇಲ್ಲಿನ ಕಲ್ಲಡ್ಕ ಪೇಟೆಯಲ್ಲೂ ವಾಹನದಟ್ಟಣೆ ಉಂಟಾಗುತ್ತಿದ್ದು,ಇಲ್ಲಿ ಬೃಹತ್ ಫ್ಲೈಓವರ್ ನಿರ್ಮಾಣಕ್ಕೆ ಅಗೆಯಲಾದ ಹೊಂಡ ಮತ್ತಷ್ಟು ಅಗಲವಾಗಿದೆ.
ಕಲ್ಲಡ್ಕದ ಹೈವೇ ಕಾಮಗಾರಿ ಬಳಿಯಲ್ಲಿ ಮುಂಜಾಗೃತಾ ಕ್ರಮವಾಗಿ ಗುಂಡಿಯ ಸುತ್ತ ಪ್ಲಾಸ್ಟಿಕ್ ಟೇಪ್ ಅನ್ನು ಕಟ್ಟಲಾಗಿದ್ದರೂ ಅದರ ಪಕ್ಕದ ಹೊಂಡದಲ್ಲಿ ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೊಬ್ಬ ಈಜಾಟ ನಡೆಸಿದ್ದಾನೆ.
ಜೊತೆಗೆ ಸ್ನಾನ ಮಾಡುವಂತೆ ಹೊರಳಾಡಿದ್ದಾನೆ. ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲಿನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.