ಬೆಂಗಳೂರು: ಹಫ್ತಾ ಕೊಡಲಿಲ್ಲ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬ ಮೀನು ವ್ಯಾಪಾರಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಾಣಸವಾಡಿ ಸಮೀಪದ ಜೈಭಾರತ್ ನಗರದಲ್ಲಿ ನಡೆದಿದೆ.
ಘಟನೆಯ ದೃಶ್ಯಗಳು ಅಂಗಡಿಯಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ.
ಈ ಸಂಬಂಧ ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣವನ್ನು ದಾಖಲಿಸಿಕೊಂಡಿರುವ ಬಾಣಸವಾಡಿ ಪೊಲೀಸ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಉಡುಪಿಯ ಬೈಂದೂರಿನ ಯುವಕರ ಬೇಕರಿಗೆ ನುಗ್ಗಿ ಪುಡಿ ರೌಡಿಗಳು ದಾಂಧಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗಳು ಬಂಧನವಾಗಿರುವ ಬೆನ್ನಲ್ಲೇ, ನಗರದ ಬಾಣಸವಾಡಿಯಲ್ಲಿ ಮೀನು ವ್ಯಾಪಾರಿಯ ಮೇಲೆ ಹಲ್ಲೆ ಯತ್ನ ನಡೆದಿರುವುದು ಸಾರ್ವಜನಿಕರಲ್ಲಿ, ಆತಂಕ ಮೂಡುವಂತೆ ಮಾಡಿದೆ.