ಮಂಗಳೂರು : ಯುನೈಟೆಡ್ ಅರಬ್ ಎಮಿರೇಟ್ಸ್ ಸರಕಾರದ ಅಧಿಕಾರಿಯಂತೆ ಸೋಗು ಹಾಕಿ ರಾಷ್ಟ್ರ ರಾಜಧಾನಿಯ ಪಂಚತಾರಾ ಹೋಟೆಲ್ ನಲ್ಲಿ 23 ಲಕ್ಷ ರೂ.ಗೂ ಹೆಚ್ಚು ಮೊತ್ತದ ಬಾಕಿ ಬಿಲ್ ಪಾವತಿಸದೆ ಪರಾರಿಯಾಗಿದ್ದ ವ್ಯಕ್ತಿಯನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಮೂಲದ ಮುಹಮದ್ ಶರೀಫ್ (41) ಬಂಧಿತ ಆರೋಪಿಯಾಗಿದ್ದಾನೆ.
ಶರೀಫ್ ವ್ಯಕ್ತಿ ನಕಲಿ ವ್ಯಾಪಾರ ಕಾರ್ಡ್ ಅನ್ನು ಪ್ರಸ್ತುತಪಡಿಸಿ ಕಳೆದ ವರ್ಷ ಸುಮಾರು ಮೂರು ತಿಂಗಳ ಕಾಲ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಶರೀಫ್ ಹೊಟೇಲ್‌ನ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದು, ಬಾಕಿ ಬಿಲ್‌ಗಳನ್ನು ಪಾವತಿಸದೆ ಹೋಟೆಲ್‌ಗೆ 23,46,413 ರೂ. ಮೌಲ್ಯದ ಅಪಾರ ನಷ್ಟ ಉಂಟಾಗಿದೆ.
ಘಟನೆಯ ನಂತರಹೋಟೆಲ್‌ನ ಜನರಲ್ ಮ್ಯಾನೇಜರ್ ಅನುಪಮ್ ದಾಸ್ ಗುಪ್ತಾ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಜನವರಿ 14 ರಂದು ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಆರೋಪಿ ಮಹಮ್ಮದ್ ಶರೀಫ್ ನನ್ನು ಜನವರಿ 19 ರಂದು ಮಂಗಳೂರಿನಲ್ಲಿ ಬಂಧಿಸಿದ ದೆಹಲಿ ಪೊಲೀಸರು ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ.