Connect with us

LATEST NEWS

ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಗ್ರೂಪಿಸಂ: 26 ಸಿಬ್ಬಂದಿ ಎತ್ತಂಗಡಿ-ಹೊಸ ಸಿಬ್ಬಂದಿ ನೇಮಕ

Published

on

ಮಂಗಳೂರು: ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅಶಿಸ್ತು, ಗುಂಪುಗಾರಿಕೆ, ಭಿನ್ನಾಭಿಪ್ರಾಯ ಹಿನ್ನೆಲೆ ಒಟ್ಟು 32 ಸಿಬ್ಬಂದಿಯನ್ನು ವಿವಿಧ ಠಾಣೆಗೆ ಟ್ರಾನ್ಸ್‌ಫರ್‌ ಮಾಡಲಾಗಿದೆ.


ಅಧಿಕಾರಿಗಳ ಮಧ್ಯೆ ಗುಂಪುಗಾರಿಕೆ, ಠಾಣೆಯ ಮಾಹಿತಿಯನ್ನು ಹೊರಗೆ ಹಂಚುವುದು, ಶಿಸ್ತು ಇಲ್ಲದಿರುವ ಕಾರಣ 26 ಸಿಬ್ಬಂದಿ ವರ್ಗಾವಣೆ ಮಾಡಿದ್ದಾರೆ.

ಮದ್ಯಪಾನ ಪ್ರಕರಣದಲ್ಲಿ 6 ಜನ ಅಮಾನತು ಆಗಿದ್ದಾರೆ. ಉಳಿದ ಮಹಿಳಾ ಪೊಲೀಸ್‌ ಠಾಣೆಗೆ ಸಂಪೂರ್ಣ ಹೊಸ ಸಿಬ್ಬಂದಿ ನೇಮಕ ಮಾಡಿದ್ದಾರೆ.

ಇತ್ತೀಚೆಗೆ ಮಹಿಳಾ ಠಾಣೆಯ ಇನ್ಸ್‌ಪೆಕ್ಟರ್‌ ಅವರಿಗೆ ಅಪಘಾತವಾದ ಕಾರಣ ವಿಶ್ರಾಂತಿ ನಿಡಲಾಗಿದೆ. ಇದೀಗ ಆ ಠಾಣೆಗೆ ಸಿಸಿಆರ್‌ಬಿ ಇನ್ಸ್‌ಪೆಕ್ಟರ್‌ ಅವರನ್ನು ಠಾಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಜೊತೆಗೆ ಹೊಸ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.

LATEST NEWS

ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

Published

on

ಮಂಗಳೂರು : ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ ಆದ ನಂದಿನಿ ಜಾಗತಿಕ ಬ್ರಾಂಡ್ ಆಗಿ ಲಗ್ಗೆ ಇಟ್ಟಿದೆ. ವಿಶ್ವಕಪ್ ಟಿ-ಟ್ವೆಂಟಿ ಪಂದ್ಯಕೂಟದಲ್ಲಿ ನಂದಿನಿ ಹೆಸರು ರಾರಾಜಿಸಲಿದೆ. ಹೌದು, ನಂದಿನಿ ಸ್ಕಾಟ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಕೃಷಿಕರ ಶ್ರಮವನ್ನು ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ವಿಶ್ವಕ್ಕೆ ಸಾರುವ ಯತ್ನದಲ್ಲಿದೆ.


ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟೂರ್ನಿಯಲ್ಲಿ ನಂದಿನಿ :

ಜೂನ್ ೧ ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟೂರ್ನಿ ಅಮೆರಿಕದಲ್ಲಿ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದು ಪ್ರದರ್ಶಿಸಲಾಗುತ್ತಿದೆ. ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕೆಎಂಎಫ್‌ನ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದ್ದಾರೆ.


ಸಿಎಂ ಟ್ವೀಟ್ :

ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ ಟಿ೨೦ ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.

ಇದನ್ನೂ ಓದಿ : ಅಂಜಲಿ ಹಂ*ತಕನ ಬಂಧನ; ರೈಲಿನಲ್ಲಿ ಪ್ರಯಾಣಿಸುತ್ತಿದ್ದವನ ಪೊಲೀಸರು ಬಂಧಿಸಿದ್ದು ಹೇಗೆ?!

ರಾಜ್ಯದ ಜನರ ಮನೆ-ಮನ ಗೆದ್ದಿರುವ ನಂದಿನಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಂದಿನಿ ಉತ್ಪನ್ನಗಳು ಕ್ರಿಕೆಟ್ ಆಟಗಾರರ ಹಾಗೂ ಕ್ರಿಕೆಟ್ ಪ್ರೇಮಿಗಳ ಮನ ಗೆಲ್ಲುವುದಂತು ನಿಜ ಸಂಗತಿ ಎಂದು ಬರೆದುಕೊಂಡಿದ್ದಾರೆ.

Continue Reading

LATEST NEWS

ಕೋವ್ಯಾಕ್ಸಿನಲ್ಲೂ ಇದೆ ಅಡ್ಡ ಪರಿಣಾಮ…ವರದಿಯಿಂದ ಬಯಲಾಯ್ತು ಸತ್ಯ..!

Published

on

ಮಂಗಳೂರು / ನವದೆಹಲಿ : ಸದ್ಯ ಕೊರೋನಾ ಲಸಿಕೆ ಪಡೆದವರಲ್ಲಿ ಆತಂಕ ಶುರುವಾಗಿದೆ. ಕೊರೋನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮ ಬೀರಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಇದರ ಬೆನ್ನಲ್ಲೇ ಕೋವ್ಯಾಕ್ಸಿನ್‌ ಕೂಡಾ ಅಡ್ಡ ಪರಿಣಾಮ ಬೀರಿದೆ ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. ಕೋವಿಶೀಲ್ಡ್‌ ಪಡೆದವರಲ್ಲಿ ಅಡ್ಡ ಪರಿಣಾಮ ಆಗಿದೆ ಅಂತ ಆಸ್ಟ್ರಾಜೆನೆಕಾ ಕಂಪೆನಿ ಒಪ್ಪಿಕೊಂಡಿತ್ತು. ಇದೀಗ ಭಾರತ್ ಬಯೋಟೆಕ್ ಕಂಪೆನಿ ಅಭಿವೃದ್ದಿ ಪಡಿಸಿರುವ ಕೋವ್ಯಾಕ್ಸಿನ್ ಕೂಡಾ ಅಡ್ಡ ಪರಿಣಾಮ ಬೀರುತ್ತದೆ ಎಂದು ವರದಿಯೊಂದು ಹೊರಬಿದ್ದಿದೆ. ಈ ಲಸಿಕೆ ಪಡೆದ ಒಂದು ವರ್ಷದ ಬಳಿಕ ಹಲವರಲ್ಲಿ ಅಡ್ಡ ಪರಿಣಾಮ ಕಾಣಿಸಿಕೊಂಡ ಬಗ್ಗೆ ವರದಿಯಲ್ಲಿ ಹೇಳಲಾಗಿದೆ.


ಹದಿ ಹರೆಯದ ಯುವಕ – ಯುವತಿಯರಲ್ಲಿ ಅಡ್ಡ ಪರಿಣಾಮ :

ಬನಾರಸ್ ಹಿಂದೂ ವಿಶ್ವ ವಿದ್ಯಾಲಯ ನಡೆಸಿದ ಈ ಅದ್ಯಯನ ಪ್ರಕಾರ ಕೋವ್ಯಾಕ್ಸಿನ್‌ ತೆಗೆದುಕೊಂಡ ಹದಿ ಹರೆಯದ ಯುವಕ – ಯುವತಿಯರಲ್ಲಿ ಅಡ್ಡ ಪರಿಣಾಮ ಕಾಣಿಸಿಕೊಂಡಿದೆ. ಸುಮಾರು 1024 ಯವ ಜನತೆಯನ್ನು ಇದರ ಅಧ್ಯಯನಕ್ಕೆ ಒಳಪಡಿಸಿದಾಗ ಈ ಆಘಾತಕಾರಿ ವರದಿ ಲಭ್ಯವಾಗಿದೆ. ಈ ವರದಿ ಪ್ರಕಾರ ಶೇಕಡಾ 48 ಜನರಿಗೆ ಶ್ವಾಸನಾಳದ ಸೋಂಕು ಪತ್ತೆಯಾಗಿದೆ ಎಂದು ಹೇಳಲಾಗಿದೆ.

ಶೇಕಡಾ 10.5 ಜನರಲ್ಲಿ ಸಾಮಾನ್ಯ ಅಸ್ವಸ್ಥತೆ, 10.2 ಶೇಖಡಾ ಜನರಲ್ಲಿ ನರಮಂಡಲದ ಸಮಸ್ಯೆ, 4.7% ಜನರಲ್ಲಿ ನರ ಸಂಬಂಧಿ ಸಮಸ್ಯೆ ಹಾಗೂ 8.9% ಜನರಲ್ಲಿ ಸಾಮಾನ್ಯ ಸಮಸ್ಯೆಗಳು ಕಾಣಿಸಿದೆ. ಇದಲ್ಲದೆ, ಚರ್ಮ ರೋಗ, ಸ್ನಾಯಗಳಿಗೆ, ನರಗಳಿಗೆ ಮತ್ತು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಂಡಿದೆ ಎಂದು ವರದಿ ಹೇಳಿದೆ.

ಯುವತಿಯರಲ್ಲಿ ಇದರ ಪರಿಣಾಮ ಹೆಚ್ಚಾಗಿ ಕಂಡು ಬಂದಿದ್ದು, ಶೇಕಡಾ 4.6% ಯುವತಿಯರಲ್ಲಿ ಮುಟ್ಟಿನ ಸಮಸ್ಯೆ ಕಂಡು ಬಂದಿದೆ. ಇನ್ನು ಯುವತಿಯರಲ್ಲಿ ಕಣ್ಣಿನ ಸಮಸ್ಯೆ, ಹಾಗೂ ಹೈಪೋ ಥೈರಾಯಿಡ್ ಕಾಣಸಲು ಈ ಕೋವಾಕ್ಸಿನ್ ಕಾರಣವಾಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ : ರಾಖಿ ಸಾವಂತ್ ಗೆ ಕ್ಯಾನ್ಸರ್!? ಮಾಜಿ ಪತಿ ಹೇಳಿದ್ದೇನು?

ಆದ್ರೆ, ಈ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಬೇಕಾಗಿದ್ದು, ಸದ್ಯಕ್ಕೆ ಕೋವ್ಯಾಕ್ಸಿನ್ ಪಡೆದು ಒಂದು ವರ್ಷ ಆಗಿದ್ದವರನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಹೀಗಾಗಿ ಇನ್ನಷ್ಟು ಅಧ್ಯಯನದ ಮೂಲಕ ಇದರಿಂದ ಆಗಿರುವ ಅಡ್ಡ ಪರಿಣಾಮವನ್ನು ಅಧ್ಯಯನ ಮಾಡಬೇಕಿದೆ.

Continue Reading

LATEST NEWS

ಅಂಜಲಿ ಹಂ*ತಕನ ಬಂಧನ; ರೈಲಿನಲ್ಲಿ ಪ್ರಯಾಣಿಸುತ್ತಿದ್ದವನ ಪೊಲೀಸರು ಬಂಧಿಸಿದ್ದು ಹೇಗೆ?

Published

on

ಹುಬ್ಬಳ್ಳಿ : ಅಂಜಲಿ ಅಂಬಿಗೇರ್ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಗಿರೀಶ್ ಯಾನೆ ವಿಶ್ವನಾಥ್ ಸಾವಂತ್ ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಹುಬ್ಬಳ್ಳಿ – ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು ಗಿರೀಶ್ ಯಾನೆ ವಿಶ್ವನಾಥ್ ಸಾವಂತ್ ಹ*ತ್ಯೆ ಮಾಡಿದ್ದ.

ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಬೆಳ್ಳಂಬೆಳಗ್ಗೆ ಆಕೆಯ ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಹ*ತ್ಯೆ ಮಾಡಿದ್ದ. ಆ ಬಳಿಕ ಪರಾರಿಯಾಗಿದ್ದ. ಹುಬ್ಬಳ್ಳಿ ಪೊಲೀಸರು ಆರೋಪಿ ವಿಶ್ವನಾಥ್ ಸಾವಂತ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಇದೀಗ ದಾವಣಗೆರೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಸಿಕ್ಕಿ ಬಿದ್ದಿದ್ದು ಹೇಗೆ?

ಭೀಕರವಾಗಿ ಯುವತಿಯ ಹ*ತ್ಯೆ ಮಾಡಿದ ಪೊಲೀಸರು ವಿಶ್ವನಾಥ್ ಸಾವಂತ್ ಕೊಲೆ ಮಾಡುವುದಕ್ಕೆ ಮುನ್ನ ಮೊಬೈಲ್ ನಲ್ಲಿ ಸಂವಾದ ನಡೆಸುತ್ತಿದ್ದ ಮೂವರನ್ನು ಕರೆದು ತೀವ್ರ ವಿಚಾರಣೆ ನಡೆಸಿದ್ದರು. ಅದರ ಸುಳಿವಿನ ಆಧಾರದಲ್ಲಿ ಇದೀಗ ವಿಶ್ವನಾಥ್ ನನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ : ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

ಅಂಜಲಿಯನ್ನು ಹ*ತ್ಯೆಗೈದ ಬಳಿಕ ವಿಶ್ವ ಬೆಂಗಳೂರು ಮೂಲಕ ರೈಲಿನಲ್ಲಿ ಗೋವಾ, ಮಹಾರಾಷ್ಟ್ರ ಕಡೆ ಹೋಗಿ ತಲೆಮರೆಸಿಕೊಳ್ಳಬೇಕು ಅಂದುಕೊಂಡಿದ್ದ. ರೈಲಿನಲ್ಲಿ ಪ್ರಯಾಣಿಸುತ್ತಿರುವ ಮಾಹಿತಿ ಸಿಕ್ಕ ಹುಬ್ಬಳ್ಳಿ ಪೊಲೀಸರು ದಾವಣಗೆರೆಯಲ್ಲಿ ಅವನನ್ನು ಬಂಧಿಸಲು ಸಕಲ ಸಿದ್ಧತೆ ನಡೆಸಿದ್ದರು. ಆತನ ಬಂಧನಕ್ಕೆ ಯತ್ನಿಸುವ ವೇಳೆ ರೈಲಿನಿಂದ ಜಿಗಿದು ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ರೈಲಿನಿಂದ ಬಿದ್ದ ರಭಸಕ್ಕೆ ಆತನ ಮುಖ ಮತ್ತು ತಲೆಗೆ ಗಂಭೀ*ರ ಗಾ*ಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Continue Reading

LATEST NEWS

Trending