Connect with us

LATEST NEWS

ಮಂಡ್ಯ : ಜೊತೆಯಾಗಿ ಸಪ್ತಪದಿ ತುಳಿದ ಪತ್ನಿಯನ್ನು ತಿವಿದು ಹತ್ಯೆ ಮಾಡಿ ಪರಾರಿಯಾದ ಪತಿ..!

Published

on

ಜೊತೆಯಾಗಿ ಸಪ್ತಪದಿ ತುಳಿದ ಪತ್ನಿಯನ್ನು ಪತಿಯೇ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.

ಮಂಡ್ಯ : ಜೊತೆಯಾಗಿ ಸಪ್ತಪದಿ ತುಳಿದ ಪತ್ನಿಯನ್ನು ಪತಿಯೇ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.

ಮಧುಶ್ರೀ (25) ಮೃತ ಮಹಿಳೆಯಾಗಿದ್ದು ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿ ಪತಿ ಮಂಜುನಾಥ್ ಈ ಕೃತ್ಯ ಎಸಗಿ ಬಳಿಕ ಮಗನನ್ನು ಕರೆದುಕೊಂಡು ಪರಾರಿಯಾಗಿದ್ದಾನೆನ್ನಲಾಗಿದೆ.

ಕರಡಹಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಧುಶ್ರೀ ಮದುವೆ ಐದು ವರ್ಷಗಳ ಹಿಂದೆ ನಡೆದಿತ್ತು,

ಇವರಿಗೆ ನಾಲ್ಕು ವರ್ಷದ ಮಗನಿದ್ದು, ಪತಿ ಮಂಜುನಾಥ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.

ನಾಗಮಂಗಲ ಪಟ್ಟಣದ ಟಿ.ಬಿ ಬಡಾವಣೆಯಲ್ಲಿ ಬಾಡಿಗೆ ಮನೆ ಪಡೆದು ವಾಸವಿದ್ದರು, ಪತಿ ವಾರಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದರು.

ಇತ್ತೀಚಿಗೆ ಪತ್ನಿಯ ಮೇಲೆ ಸಂಶಯ ವ್ಯಕ್ತಪಡಿಸಿದ್ದರಿಂದ ಆಗಾಗ್ಗೆ ಜಗಳ ನಡೆಯುತ್ತಿತ್ತು.

ಸ್ವಾತಂತ್ರ್ಯೋತ್ಸವ ದಿನವಾದ ಮಂಗಳವಾರ ಮಧ್ಯಾಹ್ನ ಬೆಂಗಳೂರಿನಿಂದ ಮಂಜುನಾಥ್ ಮನೆಗೆ ಬಂದಿದ್ದು ಈ ವೇಳೆ ದಂಪತಿಗಳ ನಡುವೆ ಜಗಳ ನಡೆದಿದೆ.

ಪತ್ನಿಯ ಹೊಟ್ಟೆ ಭಾಗಕ್ಕೆ ಬಲವಾದ ಆಯುಧದಿಂದ ಇರಿದು ಹತ್ಯೆ ಮಾಡಿ, ಮಗ ಮನ್ವಿತ್ ನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಇಂದು ಬೆಳ್ಳಗ್ಗೆ ಮಧು ಎಂಬಾತ ಮನೆ ಬಳಿ ಹೋದಾಗ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ.

ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ನಿರಂಜನ್, ಅಶೋಕ್ ಕೃತ್ಯ ನಡೆದ ಮನೆಗೆ ಭೇಟಿ ನೀಡಿ ಪರಿಶೀಲಿಸಿ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

LATEST NEWS

Trending