Connect with us

    BANTWAL

    ಮಂಗಳೂರು : ಅಪರಾಧ ಹಿನ್ನಲೆಯುಳ್ಳ 11 ಮಂದಿಗೆ 6 ತಿಂಗಳ ಕಾಲ ದ.ಕ.ಜಿಲ್ಲೆಯಿಂದ ಗಡಿಪಾರು..!

    Published

    on

    ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಗಮನ ಹರಿಸಿರುವ ದ.ಕ ಜಿಲ್ಲಾಧಿಕಾರಿ ರವಿ ಕುಮಾರ್ ಅಪರಾಧ ಹಿನ್ನೆಲೆಯುಳ್ಳ ಹನ್ನೊಂದು ಮಂದಿಯನ್ನು 6 ತಿಂಗಳ ಕಾಲ ದ.ಕ.ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

    ಮಂಗಳೂರು; ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಗಮನ ಹರಿಸಿರುವ ದ.ಕ ಜಿಲ್ಲಾಧಿಕಾರಿ ರವಿ ಕುಮಾರ್ ಅಪರಾಧ ಹಿನ್ನೆಲೆಯುಳ್ಳ ಹನ್ನೊಂದು ಮಂದಿಯನ್ನು 6 ತಿಂಗಳ ಕಾಲ ದ.ಕ.ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

    ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ತನಿಖೆ ನಡೆಸಿರುವ ಜಿಲ್ಲಾಧಿಕಾರಿ, ಅಪರಾಧ ಪ್ರವೃತ್ತಿಯುಳ್ಳ, ಸಮಾಜದ ಸ್ವಾ‌ಸ್ಥ್ಯಕ್ಕೆ ಗಂಡಾಂತರಕಾರಿಯಾಗಿರುವ ಆರೋಪದಲ್ಲಿ ಇವರನ್ನು ಗಡಿಪಾರು ಮಾಡಿದ್ದಾರೆ.

    ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಜಯರಾಜ್ ರೈ ಯಾನೆ ಜಯರಾಜ ಶೆಟ್ಟಿ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಇಬ್ರಾಹಿಂ ಯಾನೆ ಇಬ್ಬಿ , ಹಕೀಂ ಕೂರ್ನಡ್ಕ ಯಾನೆ ಅಬ್ದುಲ್, ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಅಬೂಬಕ್ಕರ್ ಸಿದ್ದೀಕ್ ಯಾನೆ ಜೆಸಿಬಿ ಸಿದ್ದೀಕ್ ಯಾನೆ ಸಿದ್ದೀಕ್ 34ನೆಕ್ಕಿಲಾಡಿ, ಉಬೈದ್ ಬಿ.ಎಸ್.ಯಾನೆ ಉಬೈದ್ ಕುಪ್ಪೆಟ್ಟಿ, , ತಸ್ಲೀಂ ಯಾನೆ ತಸಲೀಂ ತಣ್ಣೀರುಪಂಥ, ಬೆಳ್ಳಾರೆ ಠಾಣಾ ವ್ಯಾಪ್ತಿಯ ರೋಷನ್, ಪ್ರಸಾದ್ ಇಡ್ಯಾಡಿ ಸವಣೂರು, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನಜೀರ್ ಕುಣಿಗಲ್, ಇಬ್ರಾಹಿಂ ಖಲೀಲ್, ಬಾಳ್ತಿಲ ಗ್ರಾಮ ಹಾಗೂ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕಿರಣ್ ಕುಮಾರ್ ಡಿ.ಯಾನೆ ಕಿರಣ್ ಇವರನ್ನು ಮಾರ್ಚ್ 6ರಿಂದ ಸೆಪ್ಟೆಂಬರ್ 6ರ ತನಕ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending