Connect with us

DAKSHINA KANNADA

ಡ್ರಗ್ ಮಾಫಿಯಾ ಬಳಿಕ ಮಂಗಳೂರಿನಲ್ಲಿ ರಾಗಿಂಗ್ ಪಿಡುಗು : ವಳಚ್ಚಿಲ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳ ಬಂಧನ..!

Published

on

ಡ್ರಗ್ ಮಾಫಿಯಾ ಬಳಿಕ ಮಂಗಳೂರಿನಲ್ಲಿ ರಾಗಿಂಗ್ ಪಿಡುಗು : ವಳಚ್ಚಿಲ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳ ಬಂಧನ..!

Mangalore: 9 students of Valachil College arrested For Ragging..!

ಮಂಗಳೂರು : ಕರಾವಳಿ ನಗರಿ ಎಜ್ಯುಕೇಷನ್ ಹಬ್ ಎಂದೇ ಖ್ಯಾತಿ ಪಡೆದ ಮಂಗಳೂರು ಡ್ರಗ್ ಮಾಫಿಯಾದ ಬಳಿಕ ರಾಗಿಂಗ್ ಎನ್ನುವ ಮಹಾ ಪಿಡುಗಿಗೆ ಇದೀಗ ಸುದ್ದಿಯಾಗುತ್ತಿದೆ.

ಈ ಸಂಬಂಧ ಮಂಗಳೂರು ನಗರದ ಹೊರ ವಲಯದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನ ಒಂಭತ್ತು ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿ ಪ್ರಕರಣ ದಾಖಲು ಮಾಡಿದ್ದಾರೆ.

ಬಂಧಿತರು ಕೇರಳ ಮೂಲದವರಾಗಿದ್ದು ಕ್ಯಾಲಿಕಟ್, ಕಣ್ಣೂರು, ಕಾಸರಗೋಡು ಮತ್ತು ಮಲಪುರಂ ಜಿಲ್ಲೆಯವರಾಗಿದ್ದಾರೆ.

ರಾಗಿಂಗ್ ಒಳಗಾದ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಫಾರ್ಮಸಿಯ 2 ನೇ ಮತ್ತು ಮೂರನೇ ವರ್ಷದ  ವಿದ್ಯಾರ್ಥಿಗಳಾಗಿದ್ದಾರೆ.ಜಿಷ್ಣು, ಶೀಕಂಠ, ಅಶ್ವಥ್, ಸಾಯಿನಾಥ್, ಅಭಿನವ್ ರಾಜೀವ್, ರಾಹುಲ್, ಜಿಶು,ಮುಕ್ತಾರ್ ಅಲಿ,ಮೊಹಮ್ಮದ್ ರಝೀಂ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ.

ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಕೂಡ ಉಡಾಫೆಯಿಂದ ವರ್ತಿಸಿದೆ. ಇಂತಹ ಸೂಕ್ಷ್ಮಾ ವಿಷಯಗಳ ಬಗ್ಗೆ  ಕಾಲೇಜು ಆಡಳಿತ ಮಂಡಳಿಗಳು ಜವಾಬ್ದಾರಿಯಿಂದ ವರ್ತಿಸಬೇಕು ಮತ್ತು ವಿದ್ಯಾರ್ಥಿಗಳು ರಾಗಿಂಗ್ , ಅಮಲು ಪದಾರ್ಥಗಳಂತಹ ದುಷ್ಚಟಗಳಿಗೆ ಬಲಿಯಾಗಬೇಡಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಮನವಿ ಮಾಡಿದ್ದಾರೆ.

ಇಲ್ಲವಾದಲ್ಲಿ ಇಂತಹುದಕ್ಕೆ ಕಡಿವಾಣ ಹಾಕಲು ಪೊಲೀಸ್ ಕ್ರಮಗಳು ಅನಿವಾರ್ಯವಾಗಿದ್ದು ಇದರಿಂದ ವಿದ್ಯಾರ್ಥಿಗಳ ಬಂಧನದೊಂದಿಗೆ ಮುಂದಿನ ಭವಿಷ್ಯ ಕೂಡ ಮಾರಕವಾಗಲಿದೆ ಎಂದು ಎಚ್ಚರಿಸಿದ್ದಾರೆ.

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Published

on

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

Trending