Connect with us

DAKSHINA KANNADA

ಮಂಗಳೂರು : ಮೂರು ಮಕ್ಕಳ ತಂದೆಜೊತೆ 19ರ ಯುವತಿ ಪರಾರಿ !!

Published

on

ಮಂಗಳೂರು: ನರ್ಸಿಂಗ್ ಕಲಿಯುತ್ತಿರುವ 19ರ ಹರೆಯದ ವಿದ್ಯಾರ್ಥಿನಿಯೊಬ್ಬಳು ಹೆಂಡತಿ ಮತ್ತು ಮೂವರು ಮಕ್ಕಳಿರುವ ನಾಟೆಕಲ್ಲಿನ ವಿವಾಹಿತನ ಜೊತೆ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದ್ದು, ಸ್ಥಳೀಯರು ಇದರ ಬಗ್ಗೆ ಆಶ್ವರ್ಯ ವ್ಯಕ್ತಪಡಿಸಿದ್ದಾರೆ.

ಈಗಿನ ಕಾಲದಲ್ಲಿ ಪ್ರೀತಿ- ಪ್ರೇಮ ಎಲ್ಲವೂ ಒಂದು ಅರ್ಥವಿಲ್ಲದ ಬಂಧವಾಗಿಬಿಟ್ಟಿದೆ. ಯಾವುದೋ ಆಮಿಷಕ್ಕೋ, ಆಕರ್ಷಣೆಗೋ ಬಲಿಯಾಗಿ ಹೆಣ್ಮಕ್ಕಳು ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಸಣ್ಣ ಪ್ರಾಯದ ತರುಣಿಯರು ಮುದುಕನನ್ನು ವಿವಾಹವಾಗೋದು, ಆಂಟಿಯರು ಶಾಲೆ ಕಲಿಯುವ ಬಾಲಕರೊಂದಿಗೆ ಓಡಿ ಹೋಗುವುದು ಇಂತಹ ಚಿತ್ರವಿಚಿತ್ರ ಸನ್ನಿವೇಶಗಳನ್ನು ಸಮಾಜದಲ್ಲಿ ನೋಡುತ್ತಲೇ ಇರುತ್ತೇವೆ. ಕಾ*ಮದಾಹಕ್ಕೋ, ಹಣದ ಆಸೆಗೋ ಇಂತಹ ನಿರ್ಧಾರಗಳನ್ನು ತೆಗೆದುಕೊಂಡು ತಮ್ಮ ಭವಿಷ್ಯವನ್ನು ತಾವೇ ನರಕಕ್ಕೆ ದೂಡಿಕೊಳ್ಳುತ್ತಿದ್ದಾರೆ.

ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರಿಗೆ ಪರಾರಿಯಾದ ಜೋಡಿ ಯುವಕನ ಸಂಬಂಧಿಕರ ಮನೆಯಲ್ಲಿರುವುದನ್ನು ಪತ್ತೆಹಚ್ಚಿದ್ದಾರೆ. ಇಬ್ಬರನ್ನೂ ಠಾಣೆಗೆ ಕರೆತಂದು ವಿಚಾರಿಸಿದಾಗ ಅಲ್ಲಿ ಯುವತಿ ಈತನೊಂದಿಗೇ ಹೋಗುವುದಾಗಿ ಪಟ್ಟು ಹಿಡಿದಿದ್ದಾಳೆ. ಅದಲ್ಲದೆ ಆಕೆಯ ಹೆತ್ತವರನ್ನು ಠಾಣೆಗೆ ಕರೆಸಿ ಮಾತನಾಡಿಸಿದಾಗ ಕೂಡಾ ಆಕೆ ಅದೇ ನಿರ್ಧಾರವನ್ನು ವ್ಯಕ್ತಪಡಿಸಿದ್ದಾಳೆ. ಆಕೆಯ ಪ್ರಿಯತಮನನ್ನು ವಿಚಾರಿಸಿದಾಗ ಕೂಡಾ ತಾನು ಪತ್ನಿಯ ಒಪ್ಪಿಗೆಯಿಂದ ಯುವತಿಯನ್ನು ಮದ್ವೆಯಾಗುತ್ತೇನೆ ಎಂದು ಹೇಳಿದ್ದಾನೆ.

ಇನ್ನು ಯುವತಿ ಆಕೆಯ ಪ್ರಿಯಕರನೊಂದಿಗೆ ತೆರಳಲು ‘ನಮ್ಮದೇನೂ ಅಭ್ಯಂತರವಿಲ್ಲ’ ಎಂದು ಕುಟುಂಬದವರು ಪೊಲೀಸರಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಆದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟಾರೆಯಾಗಿ ಈ ವಿಚಿತ್ರ ಘಟನೆ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ‌.

DAKSHINA KANNADA

ಅಯ್ಯಪ್ಪ ಸ್ವಾಮಿ ಮಹಿಮೆ ; ಮಾಲೆ ಹಾಕುತ್ತಿದ್ದಂತೆ ಮಾತನಾಡೇ ಬಿಟ್ಟ ಮೂಕ

Published

on

ಪುತ್ತೂರು : ಮಾತು ಬರದ ಬಾಲಕನೊಬ್ಬ ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಮಾತನಾಡಲು ಶುರು ಮಾಡಿದ ಘಟನೆ ಪುತ್ತೂರು ತಾಲೂಕಿನ ಸಾಮೆತ್ತಡ್ಕದಲ್ಲಿ ನಡೆದಿದೆ. ಇದು ಅಯ್ಯಪ್ಪ ಸ್ವಾಮಿಯ ಮಹಿಮೆ ಎಂದು ಅಲ್ಲಿನ ಜನರು ಪರಿಗಣಿಸಿದ್ದು, ಸ್ವಾಮಿಯನ್ನು ನಂಬಿ ಹೋದವರಿಗೆ ಆತ ಖಂಡಿತ ಒಲಿಯುತ್ತಾನೆ ಎನ್ನುತ್ತಾರೆ.

ಪುತ್ತೂರಿನ ಸಾಮೆತ್ತಡ್ಕ ನಿವಾಸಿ ಪ್ರಸನ್ನ ಇದೀಗ ಮಾತನಾಡುವ ಮೂಲಕ ಅಯ್ಯಪ್ಪನ ಪವಾಡಕ್ಕೆ ಸಾಕ್ಷಿಯಾಗಿದ್ದಾರೆ. ಪ್ರಸನ್ನ ಇದೀಗ ಮಾತನಾಡುವ ಮೂಲಕ ಅಯ್ಯಪ್ಪ ಮಾಲಾಧಾರಿಗಳಿಗೆ ಅಚ್ಚರಿ ತಂದಿದ್ದಾನೆ. ಒಂದು ಶಬ್ದವನ್ನೂ ಸರಿಯಾಗಿ ಮಾತನಾಡದ ಪುತ್ತೂರು ನಿವಾಸಿ ಪ್ರಸನ್ನ ಎನ್ನುವ ಈ ಬಾಲಕ ಕಳೆದ ವರ್ಷ ಕರುಣಾಮಯಿ ಅಯ್ಯಪ್ಪ ಭಕ್ತವೃಂದ ಪುತ್ತೂರು ಇವರ ತಂಡದಲ್ಲಿ ಅಯ್ಯಪ್ಪ ಮಾಲೆ ಹಾಕಿ ನಲವತ್ತೆಂಟು ದಿನಗಳ ಕಾಲ ಕಠಿಣ ವೃತಾಚರಣೆ ನಡೆಸಿ ಶಬರಿಮಲೆ ಏರಿದ್ದರು. ಸುಮಾರು 48 ಮೈಲು ದುರ್ಗಮ ಕಾಡಿನ ಹಾದಿಯಲ್ಲಿ ಸಾಗಿ ಸ್ವಾಮಿ ದರ್ಶನವನ್ನು ಪಡೆದು ಬಂದ ಬಳಿಕ ಮಾತನಾಡಲು ಶುರು ಮಾಡಿದ್ದಾನೆ. ಇದು ಅಯ್ಯಪ್ಪನ ಪವಾಡವೆಂದು ಸ್ಥಳೀಯರು ಹೇಳುತ್ತಿದ್ದಾರೆ.

ಒಂದು ಶಬ್ದ ಮಾತನಾಡಲೂ ಒಂದು ವರ್ಷಗಳ ಹಿಂದೆ ಚಡಪಡಿಸುತ್ತಿದ್ದ ಬಾಲಕ ಪ್ರಸ್ತುತ ಅಯ್ಯಪ್ಪ ಸ್ವಾಮಿಯ ಶರಣು ಕರೆಯುತ್ತಾನೆ. ಮಾತು ಬಾಯಿಯಿಂದ ಬರುತ್ತಿದ್ದು, ಎಂಟು ಶರಣನ್ನು ಪ್ರಸನ್ನ ಯಾವುದೇ ತೊಂದರೆಯಿಲ್ಲದೆ ಕರೆಯುತ್ತಾರೆ. ಬಳಿಕದ ಶಬ್ದಗಳಲ್ಲಿ ಅಷ್ಟು ಸ್ಪಷ್ಟವಾಗಿಲ್ಲದಿದ್ದರೂ, ಅರ್ಥವಾಗುವಷ್ಟಿದೆ. ಈ ಬಾರಿ ಮತ್ತೆ ಅಯ್ಯಪ್ಪ ಮಾಲೆ ಧರಿಸಿ ಮಲೆ ಏರಲು ಸಿದ್ಧತೆ ನಡೆಸಿದ್ದಾನೆ. ಈ ಬಾರಿ ಮಲೆ ಏರಿದರೆ ಪ್ರಸನ್ನ ಇನ್ನಷ್ಟು ಸ್ಪಷ್ಟವಾಗಿ ಮಾತನಾಡುವ ಸಾಧ್ಯತೆಯಿದೆ ಎನ್ನುವ ನಿರೀಕ್ಷೆಯಲ್ಲಿ ಹಿರಿಯ ಸ್ವಾಮಿಗಳಲ್ಲಿದೆ. ಮೊದಲ ಬಾರಿಗೆ ಮಾಲೆ ಧರಿಸಲು ಬಂದಾಗ ಕೇಳಲು ಮತ್ತು ಮಾತನಾಡಲು ಆಗದ ಸ್ಥಿತಿಯಲ್ಲಿದ್ದ ಪ್ರಸನ್ನನಿಗೆ ಇದೀಗ ಒಂದು ಕಿವಿ ಕೇಳಿಸುತ್ತಿದೆ, ಮಾತನಾಡಲು ಶಬ್ದಗಳು ಹೊರಡುತ್ತಿದೆ.

ಪುತ್ತೂರಿನ ಮಹಾಲಿಂಗೇಶ್ವರ ಐಟಿಐನಲ್ಲಿ ಎರಡನೇ ವರ್ಷದ ಸಿವಿಲ್ ಡಿಪ್ಲೊಮಾ ಮಾಡುತ್ತಿರುವ ಪ್ರಸನ್ನ, ವರ್ಷದ ಹಿಂದೆ ತನಕ ಒಂದು ಶಬ್ದವನ್ನೂ ಮಾತನಾಡಲಾರದ ಸ್ಥಿತಿಯಲ್ಲಿದ್ದ. ಇದೀಗ ಈತನ ಸ್ವಭಾವದಲ್ಲಾದ ಬದಲಾವಣೆ ಆತನ ಮೇಲೆ ಅಯ್ಯಪ್ಪ ಸ್ವಾಮಿ ದಯೆ ತೋರಿದ್ದಾನೆ ಅನ್ನೋದು ಹಿರಿಯ ಅಯ್ಯಪ್ಪ ಮಾಲಾಧಾರಿಗಳ ಅಭಿಪ್ರಾಯವಾಗಿದೆ‌. ಮೊದಲ ಬಾರಿಗೆ ಮಾಲೆ‌ ಹಾಕಲು ಬಂದ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದ ಪ್ರಸನ್ನ ಬಾಯಲ್ಲಿ ಮಾತನಾಡಲಾರಂಭಿಸಿರುವುದು ಗುರು ಸ್ವಾಮಿಗಳಿಗೆ ಸಂತಸ‌ ತಂದಿದೆ. ಇಂತಹ‌ ಹಲವು ಉದಾಹರಣೆಗಳನ್ನು ಹಿರಿಯ ಅಯ್ಯಪ್ಪ ಮಾಲಾಧಾರಿಗಳು ಉದಾಹರಣೆಯ ಸಹಿತ ನೀಡುತ್ತಾರೆ. ಈ ಸಾಲಿಗೆ ಪ್ರಸನ್ನ ಕೂಡಾ ಸೇರಿದ್ದು, ಅಯ್ಯಪ್ಪನ ಮಹಿಮೆಯಿಂದ ಎಲ್ಲವೂ ಸಾಧ್ಯ ಎನ್ನುವುದು ಮತ್ತೊಮ್ಮೆ ಜಗಜ್ಜಾಹೀರಾಗಿದೆ.

 

ಇದನ್ನೂ ನೋಡಿ : 

Continue Reading

Ancient Mangaluru

ಅತ್ಯಾ*ಚಾರದ ಕುರಿತು ಜಾಗೃತಿ ಮೂಡಿಸಲು ಹೊರಟ್ಟಿದವರಿಗೆ ಟ್ರಕ್ ಡಿಕ್ಕಿ; ಇಬ್ಬರ ಸಾವು, ಮೂವರಿಗೆ ಗಾಯ

Published

on

ಮಂಗಳೂರು: ಸಮಾಜದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅತ್ಯಾಚಾರಗಳನ್ನು ಕಂಡು ಮನನೊಂದ ಮಂಗಳೂರಿನ ಸಮಾಜ ಸೇವಕರ ತಂಡವೊಂದು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ದೇಶದಾದ್ಯಂತ ಜಾಗೃತಿ ಮೂಡಿಸಲು ಮಂಗಳೂರಿನಿಂದ ದಿಲ್ಲಿಗೆ ಜಾಥ ಹಮ್ಮಿಕೊಂಡು ತೆರಳುತ್ತಿದ್ದರು.

ಆದರೆ ವಿಧಿಯಾಟವೆಂಬಂತೆ ತಂಡದ ಸದಸ್ಯರಿಗೆ ಸೂರತ್‌ ಬಳಿ ಟ್ರಕ್ ಡಿ*ಕ್ಕಿ ಹೊಡೆದಿದ್ದು, ಇಬ್ಬರು ಸಾ*ವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ. ಗುಜರಾತ್ ನ ಸೂರತ್ ನ 200 ಕಿ.ಮಿ. ದೂರದಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ: 57 ಗಂಟೆಗಳ ಶ್ರಮ ವ್ಯರ್ಥ: ಕೊಳವೆಬಾವಿಯಲ್ಲಿ ಸಿಲುಕಿದ್ದ 5 ವರ್ಷದ ಬಾಲಕ ಮೃ*ತ್ಯು ! 

ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್, ಪ್ರವೀಣ್ ಸಾವನ್ನಪ್ಪಿದ್ದಾರೆ. ಅತ್ಯಾಚಾರಿಗಳಿಗೆ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಮೂಸಾ ಶರೀಫ್, ನೌಫಲ್ ಅಬ್ಬಾಸ್, ಹಂಝ, ಪ್ರವೀಣ್, ಲಿಂಗೇಗೌಡ ಕಾಲ್ನಡಿಗೆ ಜಾಥಾ ಕೈಗೊಂಡಿದ್ದರು.

ರಸ್ತೆ ಬದಿ ಕಾರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಟ್ರಕ್ ಡಿ*ಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅ*ಪಘಾತ ನಡೆಸಿ ಚಾಲಕ ಪರಾರಿಯಾಗಿದ್ದಾನೆ.

ಇನ್ನು ಮೃತ ಮೂಸಾ ಶರೀಫ್ ಕೆ ಆರ್‌ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಸಾಮಾಜಿಕ ಹೋರಾಟಗಾರರಾಗಿದ್ದ ಮೂಸಾ ಶರೀಫ್ ಕರ್ನಾಟಕ ಸಾರಥಿಗಳ ಟ್ರೇಡ್ ಯೂನಿಯನ್ ಮುಖಂಡರಾಗಿದ್ದರು.

 

Continue Reading

DAKSHINA KANNADA

ಉಳ್ಳಾಲ: ರುದ್ರಪಾದೆ ಬಳಿ ಸೊತ್ತುಗಳನ್ನಿಟ್ಟು ಸಮುದ್ರಕ್ಕೆ ಹಾ*ರಿ ಆ*ತ್ಮಹ*ತ್ಯೆ

Published

on

ಉಳ್ಳಾಲ: ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇಗುಲ ಸಮೀಪದ ಕಡಲ ತೀರದಲ್ಲಿರುವ ರುದ್ರಪಾದೆ ಬಳಿಯಿಂದ ನಾ*ಪತ್ತೆಯಾಗಿದ್ದ ಮಂಗಳೂರಿನ ಪಡೀಲು ,ವೀರನಗರ ನಿವಾಸಿ ಉದಯ್ ಕುಮಾರ್ (46) ಮೃ*ತದೇ*ಹ ಅಲಿಮಕಲ್ಲು ಎಂಬಲ್ಲಿ ನಿನ್ನೆ (ಡಿ.11) ಸಂಜೆ ಹೊತ್ತಿಗೆ ಪತ್ತೆಯಾಗಿದೆ.

ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿರುವ ಅವರು ಮಧ್ಯಾಹ್ನ ಸೋಮೇಶ್ವರ ಸಮುದ್ರ ತೀರಕ್ಕೆ ಬಂದವರು ದ್ವಿಚಕ್ರ ವಾಹನ ಸಹಿತ ತನ್ನ ಬಳಿಯಿದ್ದ ಸೊತ್ತುಗಳನ್ನೆಲ್ಲಾ ಮೇಲಿಟ್ಟು ಸಮುದ್ರಕ್ಕೆ ಹಾರಿದ್ದಾರೆ. ಸಮುದ್ರ ತೀರದಲ್ಲಿದ್ದ ಯುವಕನೋರ್ವ ಸೊತ್ತುಗಳನ್ನು ಕಂಡು ಸಮೀಪದ ಅಂಗಡಿಯವರಲ್ಲಿ ನೀಡಿದ್ದಾರೆ.

 

ಇದನ್ನೂ ಒದಿ : 57 ಗಂಟೆಗಳ ಶ್ರಮ ವ್ಯರ್ಥ: ಕೊಳವೆಬಾವಿಯಲ್ಲಿ ಸಿಲುಕಿದ್ದ 5 ವರ್ಷದ ಬಾಲಕ ಮೃ*ತ್ಯು !

 

ಉಳ್ಳಾಲ ಪೊಲೀಸರಿಗೆ ನೀಡಿದ ಮಾಹಿತಿ ನಂತರ, ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಸಮುದ್ರದಲ್ಲಿ ಉದಯ್ ಗಾಗಿ ಟಯರ್ ಟ್ಯೂಬ್ ಬಳಸಿ ಶೋಧ ನಡೆಸಿದ್ದಾರೆ. ಸಂಜೆ ವೇಳೆ ಮೃ*ತದೇಹ ಪತ್ತೆಯಾಗಿದ್ದು, ಮೃ*ತರು ತಂದೆ, ತಾಯಿ, ಪತ್ನಿ, ಒರ್ವ ಪುತ್ರನನ್ನು ಅಗಲಿದ್ದಾರೆ. ಪೋಲೀಸರು ಪ್ರಕರಣ ದಾಖಲಿಸಿಕೊಂಡು , ಆ*ತ್ಮಹ*ತ್ಯೆಗೆ ಕಾರಣವೇನೆಂದು ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

Trending

Exit mobile version