ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.
ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.
ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು ಬಳಿಕ ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿದೆ,
ಮಾಹಿತಿ ಪಡೆದ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿ ಶಾಮಕ ದಳದ ಅದಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.ಬೆಂಕಿ ಹತ್ತಲು ನಿಖರ ಕಾರಣಗಳು ತಿಳಿದು ಬಂದಿಲ್ಲ.