DAKSHINA KANNADA
ಮಂಗಳೂರು : ಬ್ಯಾಡ್ಮಿಂಟನ್ ಕೋರ್ಟ್‌ನಲ್ಲೇ ಕು*ಸಿದುಬಿದ್ದು ವಿದ್ಯಾರ್ಥಿ ಸಾ*ವು
Published
2 hours agoon
ಮಂಗಳೂರು: ಫ್ರೆಂಡ್ಸ್ ಜೊತೆ ಆಡುತ್ತಿದ್ದ ವೇಳೆ ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾ*ವನ್ನಪ್ಪಿದ ಘಟನೆ ಮಂಗಳೂರಿನ ಫಳ್ನೀರ್‌ನಲ್ಲಿ ನಿನ್ನೆ (ಜ.15) ನಡೆದಿದೆ.
ಮೂಲತಃ ಅಡ್ಡೂರಿನ ನಿವಾಸಿಯಾಗಿದ್ದು, ಪ್ರಸ್ತುತ ಅತ್ತಾವರ ಐವರಿ ಟವರ್‌ನಲ್ಲಿ ವಾಸವಿದ್ದ ಶಹೀಮ್ (20) ಮೃ*ತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಇಸನದನೂ ಓದಿ : ಬಾಲಿವುಡ್ ನಟ ಸುದೀಪ್ ಪಾಂಡೆ ವಿಧಿವಶ
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪಡೆಯುತ್ತಿದ್ದ ಶಹೀಮ್ ಗೆಳೆಯರೊಂದಿಗೆ ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಏಕಾಏಕಿ ಕೋರ್ಟ್‌ನಲ್ಲೇ ಕು*ಸಿದು ಬಿ*ದ್ದಿದ್ದಾನೆ. ತಕ್ಷಣವೇ ಅವನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃ*ತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
DAKSHINA KANNADA
ತುಳು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟ ‘ಗೋಲ್ಡನ್ ಮೂವೀಸ್’; ಕುದ್ರೋಳಿ ಕ್ಷೇತ್ರದಲ್ಲಿ ‘ಪ್ರೊಡಕ್ಷನ್ ನಂ 1’ಗೆ ಅದ್ದೂರಿ ಚಾಲನೆ
Published
14 minutes agoon
16/01/2025By
NEWS DESK4ಮಂಗಳೂರು : ಚಂದನವನದಲ್ಲಿ ಸಿನಿಮಾ ನಿರ್ಮಾಣ ಮಾಡಿ ಗೆದ್ದಿರುವ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಕೋಸ್ಟಲ್‌ವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅವರ ಗೋಲ್ಡನ್ ಮೂವೀಸ್ ಸಂಸ್ಥೆ ತುಳು ಸಿನೆಮಾ ಇಂಡಸ್ಟ್ರಿಗೆ ಕಾಲಿಟ್ಟಿದೆ. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಈ ಪ್ರೊಡಕ್ಷನ್‌ನ ಮೊದಲ ತುಳು ಸಿನಿಮಾ ಪ್ರೊಡಕ್ಷನ್ ನಂ 1ಗೆ ಮುಹೂರ್ತ ನೆರವೇರಿಸಲಾಗಿದೆ.
ಉದ್ಯಮಿ ಎಂ ಆರ್ ಜಿ ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಅವರು ಮೊದಲ ಕ್ಲ್ಯಾಪ್ ಮಾಡಿದ್ದು, ಕುದ್ರೋಳಿ ಕ್ಷೇತ್ರದ ನವ ನಿರ್ಮಾಣದ ರೂವಾರಿ ಜನಾರ್ದನ ಪೂಜಾರಿ ಅವರ ಆಶೀರ್ವಾದೊಂದಿಗೆ ನಟ ಗಣೇಶ್ ಕ್ಯಾಮೆರಾ ರೋಲ್ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಉದ್ಯಮಿ ರೋಹನ್ ಮೊಂತೆರೋ, ಲೀಲಾಕ್ಷ ಕರ್ಕೇರ , ತುಳು ಸಿನೆಮಾದ ಕಲಾವಿದರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಶುಭ ಹಾರೈಸಿದ್ದಾರೆ.
ಗಣೇಶ್ ಹೇಳಿದ್ದೇನು?
ಈ ಬಗ್ಗೆ ಮಾಹಿತಿ ನೀಡಿದ ನಟ ಗಣೇಶ್ , ನಾಲ್ಕು ವರ್ಷದ ಹಿಂದೆ ಮಂಗಳೂರಿಗೆ ಬಂದಾಗ ತುಳು ಸಿನೆಮಾ ಮಾಡಬೇಕು ಅಂತ ಯೋಚನೆ ಬಂದಿತ್ತು. ಉತ್ತಮ ಕಥೆಗಾಗಿ ಕಾಯುತ್ತಿದ್ದು, ಈಗ ಅಂತಹ ಒಂದು ಉತ್ತಮ ಕಥೆ ಸಿಕ್ಕಿದೆ. ಹೀಗಾಗಿ ಶಿಲ್ಪಾ ಈ ಸಿನೆಮಾ ಮಾಡಲು ಮುಂದಾಗಿದ್ದಾಳೆ. ನನ್ನ ನಂಟು ತುಳುನಾಡಿನ ಜೊತೆ ಜಾಸ್ತಿ ಇದ್ದ ಕಾರಣ ಅವಕಾಶ ಸಿಕ್ಕರೆ ಈ ಸಿನೆಮಾದಲ್ಲಿ ಹಾಡಿನ ಸೀನ್‌ನಲ್ಲಾದ್ರೂ ಕಾಣಸಿಕೊಳ್ಳುವುದಾಗಿ ಹೇಳಿದ್ದಾರೆ.
ಪ್ರೊಡಕ್ಷನ್ ನಂಬರ್ 1 ಸಿನಿಮಾ ತುಳುನಾಡಿನ ಸೊಗಡಿನೊಂದಿಗೆ ಸುಂದರ ಸಾಂಸಾರಿಕ ಕಥೆಯನ್ನು ಹೊಂದಿರುವ ಸಿನೆಮಾವಾಗಿದ್ದು, ನಾಯಕ ನಟನಾಗಿ ನಿತ್ಯ ಪ್ರಕಾಶ್ ಬಂಟ್ವಾಳ ಅವರು ಮೊದಲ ಬಾರಿಗೆ ಸಿನೆಮಾಗೆ ಎಂಟ್ರಿ ಕೊಟ್ಟಿದ್ದು, ಅಮೃತಾ ನಾಯಕ್ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ : ಅಂದಿನ ಖ್ಯಾತ ಮಾಡಲ್ ಇಂದಿನ ಸನ್ಯಾಸಿನಿ ; ಯಾರು ಈ ಸುಂದರ ಸಾಧ್ವಿ ?
ಇನ್ನು ತುಳು ರಂಗಭೂಮಿ ಹಾಗೂ ತುಳು ಚಿತ್ರರಂಗದ ಪ್ರಮುಖ ಕಲಾವಿದರು ಈ ಸಿನೆಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಮಂಗಳೂರು : ಕರಾವಳಿ ಉತ್ಸವ ವಸ್ತುಪ್ರದರ್ಶನ ವೇದಿಕೆಯಲ್ಲಿ ಇಂದು (ಜ.16) ಸಂಜೆ 6 ಗಂಟೆಯಿಂದ ಸ್ಟಾರ್ ಸಿಂಗರ್ಸ್,ಮಂಗಳೂರು ತುಳು ಚಲನಚಿತ್ರ ಕಲಾವಿದರಿಂದ ‘ಸಂಗೀತ ರಸಮಂಜರಿ’ ಕಾರ್ಯಕ್ರಮ ನೆರವೇರಲಿದೆ.
ಮುಖ್ಯಮಂತ್ರಿ ಪ್ರವಾಸ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ನಾಳೆ ಬೆಳಗ್ಗೆ 11:30 – ಮಂಗಳೂರು ವಿಮಾನ ನಿಲ್ದಾಣ ಆಗಂಇಸಲಿದ್ದಾರೆ. ನಂತರ ಮೇರಿಹಿಲ್ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡ ಶಿಲಾನ್ಯಾಸ ಭೇಟಿ ನೀಡಲಿದ್ದು, ಮಧ್ಯಾಹ್ನ 12:15 – ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ – ಕರ್ನಾಟಕ ಸುವರ್ಣ ಸಂಭ್ರಮ 50 ಉದ್ಘಾಟನೆ ಮಾಡಲಿದ್ದಾರೆ.
ಇದನ್ನೂ ಓದಿ : ನಾಗಾಸಾಧುಗಳ ಬಗ್ಗೆ ನಿಮಗೆ ಗೊತ್ತಿಲ್ಲದ ಸತ್ಯಾಂಶಗಳು : ಭಾಗ – 2
ಸಂಜೆ 5 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟನೆ ಮಾಡಿ, ರಾತ್ರಿ 8 ಗಂಟೆಗೆ ವಿಮಾನದ ಮೂಲಕ ಮುಖ್ಯಮಂತ್ರಿಗಳು ಬೆಂಗಳೂರಿಗೆ ಹಿಂದಿರುಗಲಿದ್ದಾರೆ.
DAKSHINA KANNADA
ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಆಮಿಷ; ಇಬ್ಬರು ಆರೋಪಿಗಳ ಸೆರೆ
Published
3 hours agoon
16/01/2025By
NEWS DESK3ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಬರುತ್ತದೆ ಎಂಬ ಆಮಿಷ ಒಡ್ಡಿ ಸೈಬರ್ ಮೂಲಕ ವಂಚಿಸಿದ ಪ್ರಕರಣವೊಂದನ್ನು ಮಂಗಳೂರು ಸೆನ್ ಕ್ರೈಮ್ ಪೊಲೀಸರು ಬೇಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳದ ಕಣ್ಣೂರಿನ ಪತಾಯಕುನ್ನು ಉಮ್ಮರ್ ವಲಿಯ ಪರಂಬತ್ (41) ಮತ್ತು ರಿಯಾಝ್ ಎಂ.ವಿ. (45) ಬಂಧಿತ ಆರೋಪಿಗಳು ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಪಡೆಯ ಬಹುದು ಎಂಬ ವಾಟ್ಸ್‌ಆ್ಯಪ್ ಸಂದೇಶವನ್ನು ಗಮನಿಸಿದ ಮಂಗಳೂರಿನ ವ್ಯಕ್ತಿಯೊಬ್ಬರು ಹಂತ ಹಂತವಾಗಿ 77,96,322.08 ರೂ.ವನ್ನು ಪಾವತಿಸಿದ್ದರು.
ಆದರೆ ಆರೋಪಿಗಳು ಲಾಭಾಂಶ ನೀಡದೆ ವಂಚಿಸಿದ್ದರು. ಈ ಬಗ್ಗೆ ಹಣ ಕಳೆದುಕೊಂಡ ವ್ಯಕ್ತಿ ಮಂಗಳೂರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರಿಗೆ ಕಾರು ಢಿಕ್ಕಿ; ಸವಾರ ದುರ್ಮರಣ
ವ್ಯಕ್ತಿಯಿಂದ ಪಾವತಿಯಾಗಿದ್ದ ಹಣದ ವಿವರಕ್ಕೆ ಸಂಬಂಧಿಸಿ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಗೆ 26,27,114.4 ರೂಪಾಯಿ ವರ್ಗಾವಣೆಯಾಗಿರುವುದು ಹಾಗೂ ಬಳಿಕ ಈ ಖಾತೆಯಿಂದ ಉಮರ್ ವಲಿಯ ಪರಂಬತ್ ಎಂಬಾತನ ಬ್ಯಾಂಕ್ ಖಾತೆಗೆ 6 ಲಕ್ಷ ರೂ. ಪಾವತಿಯಾಗಿರುವುದು ಕಂಡು ಬಂತು.
ತನಿಖೆ ಕೈಗೊಂಡಾಗ ರಿಯಾಝ್ ಎಂ.ವಿ. ಎಂಬಾತನು ಹಣವನ್ನು ವರ್ಗಾವಣೆ ಮಾಡಿಸಿದ್ದ. ಹೀಗೆ ಈ ಪ್ರಕರಣದಲ್ಲಿ ಭಾಗಿಯಾದ ಕೇರಳ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸೆನ್ ಪೊಲೀಸ್ ಠಾಣಾಧಿಕಾರಿಯೂ ಆಗಿರುವ ಎಸಿಪಿ ರವೀಶ್ ನಾಯಕ್, ಇನ್ಸ್ ಪೆಕ್ಟರ್ ಸತೀಶ್ ಎಂ.ಪಿ., ಸಬ್ ಇನ್ಸ್ ಪೆಕ್ಟರ್ ಗುರಪ್ಪಕಾಂತಿ ನೇತೃತ್ವದ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು
LATEST NEWS
ಕಿಂಡರ್ ಜಾಯ್ ಪ್ರಿಯರೇ ಎಚ್ಚರ! ಇಷ್ಟದ ಚಾಕಲೇಟ್ನಲ್ಲಿ ಬ್ಯಾಕ್ಟೀರಿಯಾ ಪತ್ತೆ
ಬಾಹ್ಯಾಕಾಶ ಇತಿಹಾಸದಲ್ಲಿ ಸಾಧನೆ ಮೆರೆದ ಭಾರತ; ಸ್ಪೇಡೆಕ್ಸ್ ಕಾರ್ಯಾಚರಣೆ ಯಶಸ್ವಿ
ಹಸುವಿನ ಬಾಲಕ್ಕೆ ಮ*ಚ್ಚಿನಿಂದ ಹ*ಲ್ಲೆ; ದುರುಳರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯ
ತಿರುಪತಿಯಲ್ಲಿ ಮತ್ತೊಂದು ದುರಂ*ತ; ಜಾರಿ ಬಿದ್ದು ಬಾಲಕ ಸಾ*ವು
ಮಂಗಳೂರು : ಬ್ಯಾಡ್ಮಿಂಟನ್ ಕೋರ್ಟ್‌ನಲ್ಲೇ ಕು*ಸಿದುಬಿದ್ದು ವಿದ್ಯಾರ್ಥಿ ಸಾ*ವು
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಮಾ*ರಣಾಂತಿಕ ಹ*ಲ್ಲೆ
Trending
- BIG BOSS5 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS6 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS3 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS2 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?