Thursday, February 9, 2023

ಏರ್‌ಪೋರ್ಟ್‌ಗೆ ಹುಸಿ ಬಾಂಬ್‌ ಕರೆ ಮಾಡಿದ್ದ ಆರೋಪಿ ಕೊನೆಗೂ ಸಿಕ್ಕಿಬಿದ್ದ

ಮಂಗಳೂರು ಅಗಸ್ಟ್ 19 :ಮಂಗಳೂರು ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ಬಂಧಿತನನ್ನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಸಂದರ್ಭ ಮಂಗಳೂರು ಏರ್ ಪೋರ್ಟ್ ಗೆ ಕರೆ ಮಾಡಿದ ವ್ಯಕ್ತಿ ವಿಮಾನ ನಿಲ್ದಾಣದೊಳಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಕೂಡಲೇ ಸಿಐಎಸ್ ಎಫ್ ಸಿಬ್ಬಂದಿ ಸೇರಿ ಪೊಲೀಸರಿಂದ ಸಂಪೂರ್ಣ ಏರ್ ಪೋರ್ಟ್ ತಪಾಸಣೆ ಮಾಡಿದ ನಂತರ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿದೆ.


ಈ ಘಟನೆ ಕುರಿತಂತೆ ಎರ್ ಪೋರ್ಟ್ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಅಧಿಕಾರಿಗಳು ಮಾಹಿತಿ ಕಲೆ ಹಾಕಿ ಕೆಲವೇ ಗಂಟೆಗಳಲ್ಲಿ ಅರೋಪಿಯನ್ನು ಬಂಧಿಸಿದ್ಧಾರೆ. ಬಂಧಿತನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದ್ದು ಮಂಗಳೂರು ಸಿಸಿಬಿ ತಂಡ ಮುದ್ರಾಡಿಯ ಮನೆಯಿಂದ ಆರೋಪಿ ವಸಂತನನ್ನು ವಶಕ್ಕೆ ಪಡೆದಿದ್ದಾರೆ ವಸಂತ ಹೋಟೆಲ್‌ ನಲ್ಲಿ ಕೆಲಸಕ್ಕಿದ್ದು ಮಾನಸಿಕ ಅಸ್ವಸ್ಥನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...