Monday, July 4, 2022

ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು ಪ್ರಸ್ತಾಪಕ್ಕೆ ಸಂಸದ ಕಟೀಲ್ ಸ್ಪಂದನೆ..

ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯರ ಹೆಸರು ಪ್ರಸ್ತಾಪಕ್ಕೆ ಸಂಸದ ಕಟೀಲ್ ಸ್ಪಂದನೆ..

ಮಂಗಳೂರು :  ಮಂಗಳೂರಿನ ಸರ್ಕಿಟ್ ಹೌಸ್ ನಲ್ಲಿ ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಪೀಠಾದಿ ಪತಿಗಳಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾರ್ಗದರ್ಶನ ದಲ್ಲಿ ಕಂಕನಾಡಿ ಗರೋಡಿ ಕ್ಷೇತ್ರದ ಅದ್ಯಕ್ಷರಾದ ಶ್ರೀ ಜಿತ್ತರಂಜನ್ ರವರ ನೇತ್ರತ್ವದಲ್ಲಿ ಬಿಲ್ಲವ ಮುಖಂಡರ ನಿಯೋಗವು ಸಂಸದ ಬಿಜೆಪಿ ರಾಜ್ಯಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರನ್ನು ಭೇಟಿ ಮಾಡಿ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿತ್ತು,

ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ರವರು ಮಂಗಳೂರು ಅಂತರಾಷ್ಟ್ರೀಯ ವಿಮಾಣ ನಿಲ್ದಾನಕ್ಕೆ ಕೋಟಿ ಚೆನ್ನಯರ ಹೆಸರನ್ನು ಇಡುವ ಬಗ್ಗೆ ಈಗಾಗಲೇ ಜಿಲ್ಲೆಯಲ್ಲಿ ಬಹಳಷ್ಟು ಚರ್ಚೆಗಳು ನಡೆಯತ್ತಿದ್ದು ಬೇರೆ ಹೆಸರುಗಳ ಬಗ್ಗೆಯು ಪ್ರಸ್ತಾಪ ಕೆಲವರು ಮಾಡಿದ್ದಾರೆ.

ನಾನು ಕೋಟಿ ಚೆನ್ನಯ್ಯ ಬಗ್ಗೆ ಅಪಾರ ಭಕ್ತಿಯುಳ್ಳವನಾಗಿದ್ದು, ಈ ಪ್ರಕೃಯೇ ಸರಕಾರದ ಕಾನೂನು ನಿಯಾಮವಳಿಗಳ ಚೌಕಟ್ಟಿನಲ್ಲಿ ನಡೆಯಬೇಕಾಗಿರುವುದರಿಂದ ಮತ್ತು ಜಿಲ್ಲೆಯ ಎಲ್ಲಾ ಜನರ ವಿಶ್ವಾಸಗಳಿಸುವುದರ ಜೊತೆಗೆ ನಿರ್ಣಯ ಕೈಗೊಳ್ಳಬೇಕಾಗಿರುವುದರಿಂದ ಪೂಜ್ಯ ಕನ್ಯಾಡಿ ಶ್ರೀಗಳ ಮಾರ್ಗದರ್ಶನ ಮತ್ತು ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಒಳಗೊಂಡಂತೆ ಜಿಲ್ಲೆಯ ಎಲ್ಲ ಶಾಸಕರ ಅಭಿಪ್ರಾಯಗಳೊಂದಿಗೆ ಕೋಟಿ-ಚೆನ್ನಯರ ಹೆಸರನ್ನು ಇಡುವ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು,

ಈ ಬಗ್ಗೆ ಯಾವುದೇ ಗೊಂದಲ ಮಾಡದೆ ಎಲ್ಲಾ ಸಮುದಾಯಗಳು ಒಂದು ದಿಕ್ಕಿನಲ್ಲಿ ಹೋಗುವ ಅವಶ್ಯಕತೆ ಇದೆ. ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ,ಮಾಜಿ ಶಾಸಕ ರುಕ್ಮಯ ಪೂಜಾರಿ, ಕಿಯೋನೆಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ , ಮೂಡ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ , ಬಂಟ್ವಾಳ ಬಿಲ್ಲವ ಸಂಘದ ಸೇಸಪ್ಪ ಕೋಟ್ಯಾನ್, ಆತ್ಮ ಶಕ್ತಿ ಬ್ಯಾಂಕಿನ ಚಿತ್ರಂಜನ್ ಬೋಲಾರ್. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಈಶ್ವರ್ ಕಟೀಲ್. ಬಿರುವೆರ್ ಕುಡ್ಲ ದ ಅಧ್ಯಕ್ಷರಾದ ಉದಯಕುಮಾರ್. ಅಖಿಲ ಭಾರತ ಬಿಲ್ಲವ ಸಂಘದ ಜಗದೀಪ್ ಸುವರ್ಣ, ಬಿಜೆಪಿ ಜಿಲ್ಲಾ ವಕ್ತಾರ ರಾಧಾಕೃಷ್ಣ ,ಬಂಟ್ವಾಳ ಬಿಲ್ಲವ ಸಂಘದ ನಾರಾಯಣ ಪೂಜಾರಿ. ನಾರಾಯಣ ಗುರು ಅಧ್ಯಯನಪೀಠದ ಸತೀಶ್ ಕರ್ಕೇರ. ಬೆಳ್ತಂಗಡಿ ಸಂಪತ್ ಸುವರ್ಣ. ಓಬಿಸಿ ಮೋರ್ಚಾ ಅಧ್ಯಕ್ಷರಾದ ಆರ್ ಸಿ ನಾರಾಯಣ. ರಾಜ್ಯ ಯುವ ಮೋರ್ಚಾದ ಶ್ವೇತ ಪೂಜಾರಿ. ಕನ್ಯಾಡಿ ಕ್ಷೇತ್ರದ ಸಂಚಾಲಕ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ. ಉದ್ಯಮಿ ಮನೋಜ್ ಸರಿಪಲ್ಲ. ಭುವನೇಶ್ ಬಂಟ್ವಾಳ ,ಕಾರ್ಪೆಟ್ ಗಳಾದ ಕಿರಣ್ ಕುಮಾರ್, ಸಂದೀಪ್ ಗರೋಡಿ ,ವಸಂತ ಪೂಜಾರಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪುರುಷ ಎನ್ ಸಾಲ್ಯಾನ್ ,ಸೋಮಪ್ಪ ಕೋಟ್ಯಾನ್ ತುಂಬೆ. ಗಣೇಶ್ ಸುವರ್ಣ. ಶ್ರೀಮತಿ ಜಯಶ್ರೀ ಕರ್ಕೇರ ಗೋಪಾಲಕೃಷ್ಣ ಬಂಟ್ವಾಳ ,ರಮೇಶ್ ತುಂಬೆ ಮುಂತಾದವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

Hot Topics

ಉಡುಪಿಯ ಸಿನಿ ಶೆಟ್ಟಿಗೆ ಒಲಿದ ‘2022 ನೇ ಮಿಸ್ ಇಂಡಿಯಾ’ ಕಿರೀಟ

ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉಡುಪಿಯ ಮೂಲದ ಇನ್ನಂಜೆಯ ನಿವಾಸಿಯಾಗಿರುವ ಸಿನಿ ಶೆಟ್ಟಿಯವರು ಮಿಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಈ ಕಾರ್ಯಕ್ರಮವು ನಿನ್ನೆ ಸಂಜೆ ಮುಂಬೈನ...

‘ಕುಡ್ಲ ನಾದುಂಡುಯೇ’: ಮಂಗಳೂರಿನಲ್ಲಿ ಮುಗಿಯುತ್ತಿಲ್ಲ ಪೌರಕಾರ್ಮಿಕರ ಧರಣಿ

ಮಂಗಳೂರು: ರಾಜ್ಯದಾದ್ಯಂತ ಪೌರ ಕಾರ್ಮಿಕರ ಮುಷ್ಕರ ನಾಲ್ಕನೇ ದಿನದತ್ತ ಸಾಗಿದ ಹಿನ್ನೆಲೆ  ಮಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡದೆ ಗಬ್ಬುನಾತ ಹೊಡೆಯುತ್ತಿದೆ.ಧಾರಾಕಾರವಾಗಿ ಮಳೆಯೂ ಸುರಿಯುತ್ತಿರುವುದರಿಂದ ತ್ಯಾಜ್ಯಗಳು ಚರಂಡಿಯಲ್ಲಿ, ನೀರಿನಲ್ಲಿ ತೇಲುತ್ತಿದೆ. ದ್ರವ ತ್ಯಾಜ್ಯಗಳು ಜನರ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು-ಓರ್ವನ ರಕ್ಷಣೆ

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...