DAKSHINA KANNADA
41 ಗಂಟೆಗಳಲ್ಲಿ 2,700ಕಿ.ಮೀ. ಡ್ರೈವ್ ಮಾಡಿ ಅಸ್ವಸ್ಥ ಕಾರ್ಮಿಕನ ಜೀವ ಉಳಿಸಿದ ಮೂಡುಬಿದ್ರೆ ಆಂಬ್ಯುಲೆನ್ಸ್ ಚಾಲಕ ಅಶ್ವತ್.!
ಮಂಗಳೂರು: ಅಪಘಾತದಲ್ಲಿ ಕೋಮಾದಲ್ಲಿದ್ದ ಕಾರ್ಮಿಕನನ್ನು ಆಂಬ್ಯುಲೆನ್ಸ್ನಲ್ಲಿ ಆಮ್ಲಜನಕದ ಜಾಡಿ ಇರಿಸಿಕೊಂಡು ಸುಮಾರು 2,700 ಕಿ.ಮೀ. ದೂರದಲ್ಲಿರುವ ಉತ್ತರ ಪ್ರದೇಶದ ಮೊರಾದಾಬಾದ್ಗೆ ಕೇವಲ 41 ಗಂಟೆಗಳಲ್ಲಿ ಕರೆದೊಯ್ದು ಸಾಹಸ ಮೆರೆದ ಆಂಬ್ಯುಲೆನ್ಸ್ನ ಚಾಲಕನಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.
ಉತ್ತರ ಪ್ರದೇಶದ ಕಾರ್ಮಿಕ ಮಹಾಂದಿ ಹಸ್ಸನ್ ಮೂಡುಬಿದಿರೆ ಮಾಸ್ತಿಕಟ್ಟೆಯಲ್ಲಿ ಅಡಕೆ ದಾಸ್ತಾನು ಕೇಂದ್ರದಲ್ಲಿ ಕಾರ್ಮಿಕ ಕೆಲಸದ ಸಂದರ್ಭ ಆಕಸ್ಮಾತ್ ಕೆಳಗೆ ಬಿದ್ದು ಆಸ್ಪತ್ರೆ ಸೇರಿ ಕೋಮಾಕ್ಕೆ ಜಾರಿದ್ದರು. ಒಡನಾಡಿಗಳ ಸಲಹೆಯ ಮೇರೆಗೆ ಆತನನ್ನು ಸ್ವಂತ ಊರಿಗೆ ಕಳುಹಿಸಲು ಯಜಮಾನರು ವಿಮಾನದ ಟಿಕೆಟ್ ತೆಗೆಸಿಕೊಟ್ಟರು.
ವೆದ್ಯರಿಲ್ಲದೆ, ದಾದಿಯರಿಲ್ಲದೆ ರೋಗಿಯನ್ನು ಒಯ್ಯಲಾಗದು ಎಂದು ವಿಮಾನಯಾನ ಸಂಸ್ಥೆ ನಿರಾಕರಿಸಿದ್ದರು. ಬೇರೆ ವಿಧಿ ಇಲ್ಲದೆ ಆಂಬ್ಯುಲೆನ್ಸ್ ಮಾಲೀಕ, ಮೂಡುಬಿದಿರೆಯ ಅನಿಲ್ ಮೆಂಡೋನ್ಸಾ ಅವರಲ್ಲಿ ಕೇಳಿ ಕೊಳ್ಳಲಾಯಿತು.
ವೆದ್ಯರಿಲ್ಲ. ದಾದಿಯೂ ಇಲ್ಲ. ರೋಗಿಯ ಕಡೆಯವರ ಹೊಣೆಗಾರಿಕೆಯಲ್ಲಿ ಆಸ್ಪತ್ರೆಯವರು ನೀಡಿದ ಬಿಡುಗಡೆ ಪತ್ರ, ಆಮ್ಲಜನಕದ ಜಾಡಿ, ಪೊಲೀಸ್ ಠಾಣೆಯಿಂದ ಪಡೆದ ಪತ್ರ ಜತೆಗಿರಿಸಿಕೊಂಡ ಅನಿಲ್ ಮೆಂಡೋನ್ಸಾ ಅವರು ಅಶ್ವತ್ಥ್ ಎಂಬ ಇನ್ನೊಬ್ಬ ಚಾಲಕನನ್ನು ಕರೆದುಕೊಂಡು ಸೆ. 10ರ ಸಂಜೆ ಮೂಡುಬಿದಿರೆಯಿಂದ ಹೊರಟರು.
ಡೀಸೆಲ್ ತುಂಬಿಸುವಲ್ಲಿ ಹೊರತುಪಡಿಸಿ ಎಲ್ಲೂ ವಾಹನ ನಿಲ್ಲಲಿಲ್ಲ. ಹಸ್ಸನ್ನ ಗೆಳೆಯರಲ್ಲಿ ಓರ್ವ ವಾಹನ ಚಾಲನೆ ಬಲ್ಲವನಾಗಿದ್ದರಿಂದಲೂ ಅನುಕೂಲವಾಯಿತು.
ವಾಹನ ಹೊಸದಿಲ್ಲಿ ತಲುಪುವಾಗ ಇನ್ನೂ 160 ಕಿ.ಮೀ. ದೂರದ ಮೊರಾದಾಬಾದ್ಗೆ ಹೋಗಬೇಕಾಗಿದೆ ಎಂದು ಹಸ್ಸನ್ ಒಡನಾಡಿಗಳು ತಿಳಿಸಿದರು.
ಮೊರಾದಾಬಾದ್ನ ಶ್ರೇಯಾ ನ್ಯೂರೋ ಕೇಂದ್ರ ತಲುಪುವಾಗ ಸೆ.12ರ ಬೆಳಗ್ಗೆ 10.30. ಆಂಬ್ಯುಲೆನ್ಸ್ನಲ್ಲಿ ವೈದ್ಯರಾಗಲೀ ದಾದಿಯರಾಗಲೀ ಇಲ್ಲದೆಯೇ ಬಂದಿರುವುದನ್ನು ನೋಡಿದ ಅಲ್ಲಿನ ವೈದ್ಯರು ದಂಗಾಗಿದ್ದರಂತೆ..!
ಅನಿಲ್ ಮೆಂಡೋನ್ಸಾ ಸೇಫಾಗಿ ಮೂಡುಬಿದಿರೆಗೆ ವಾಪಸಾಗಿದ್ದು ಪ್ರಯಾಣದ ಎಲ್ಲ ವೆಚ್ಚವನ್ನೂ ಹಸ್ಸನ್ ಯಜಮಾನರು ನೋಡಿಕೊಂಡಿದ್ದಾರೆ. ಅತ್ತ ಹಸ್ಸನ್ ಚೇತರಿಸಿಕೊಳ್ಳುತ್ತಿರುವ ಸಮಾಧಾನಕರ ಮಾಹಿತಿ ಲಭಿಸಿದೆ.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM5 days ago
ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?