Home ಪ್ರಮುಖ ಸುದ್ದಿ ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ.

ಕಳೆದ ಸೆಪ್ಟಂಬರ್ ನಲ್ಲಿ ಆದೇಶ ಪಾಲಿಸುವಂತೆ ಮಂಗಳೂರು ನಗರದ ಅಪಾರ್ಟ್ ಮೆಂಟ್, ಹಾಸ್ಟೆಲ್, ಶಿಕ್ಷಣ ಸಂಸ್ಥೆ, ಹೊಟೇಲ್, ಕೈಗಾರಿಕೆಗಳು ಹಾಗು ಇನ್ನಿತರ ವ್ಯಾಪಾರ ಮಳಿಗೆಗಳಿಗೆ ನೊಟೀಸ್ ನೀಡಲಾಗಿತ್ತು. ಆದರೆ ನಿಯಮವನ್ನು ಪಾಲಿಸದ ನಗರದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ದಂಡವನ್ನ ವಿಧಿಸಿದ್ದಾರೆ.

ಒಟ್ಟು ಹತ್ತು ಅಪಾರ್ಟ್ ಮೆಂಟ್ ಗಳಿಗೆ 1,45,000 ರೂಪಾಯಿ ದಂಡ ವಿಧಿಸಿದ್ದಾರೆ. ಅಲ್ಲದೇ ಮುಂದೆಯೂ ತ್ಯಾಜ್ಯ ಸಂಸ್ಕರಣಾ ಘಟಕ ಅಳವಡಿಸಿಕೊಳ್ಳದ ಸಂಸ್ಥೆಯ ವಿರುದ್ಧ ಕ್ರಮ ಮುಂದುವರಿಯುವುದಾಗಿ ಆಯುಕ್ತರು ತಿಳಿಸಿದ್ದಾರೆ..

ವಿಡಿಯೋಗಾಗಿ

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...