Connect with us

DAKSHINA KANNADA

ಮಂಗಳೂರಲ್ಲಿ ಹಾರ್ಟ್ ಅಟ್ಯಾಕ್ ಗೆ ಪೊಲೀಸ್ ಅಧಿಕಾರಿ ಬಲಿ..!

Published

on

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಬೆರಳಚ್ಚು ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಯೋರ್ವರು ಹೃದಯಘಾತದಿಂದ ಇಂದು ನಿಧನರಾಗಿದ್ದಾರೆ.

ಜಿಲ್ಲೆಯ ಬೆರಳು ಮುದ್ರೆ ಘಟಕದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ 37 ವರ್ಷದ ತಿಪ್ಪಣ್ಣ ನಾಗವ್ವ ಮಾದರ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.

ಇಂದು ಸಂಜೆ ವೇಳೆ ಪಾಂಡೇಶ್ವರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್. ಪಿ. ಕಛೇರಿಯಲ್ಲಿರುವ ಬೆರಳು ಮುದ್ರೆ ಘಟಕದ ಕಚೇರಿಗೆ ನಡೆದುಕೊಂಡು ಬರುತ್ತಿರುವಾಗ ಎ.ಬಿ . ಶೆಟ್ಟಿ ಸರ್ಕಲ್ ಬಳಿ ಅಸ್ವಸ್ತಗೊಂಡು ಕುಸಿದು ಬಿದ್ದವರನ್ನು ಸಿ. ಎ. ಆರ್. ಸಿಬ್ಬಂದಿ ಎ.ಹಚ್.ಸಿ.ರಮೇಶ್ ಉಪಚರಿಸಿ ಎಂ. ವಿ. ಶೆಟ್ಟಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ.

ಕೂಡಲೇ ಅಂಬುಲೇನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆ ಬಗ್ಗೆ ಕೆ. ಎಂ.ಸಿ. ಜ್ಯೋತಿ ಆಸ್ಪತ್ರೆಗೆ ದಾಖಲಿದಾಗ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.

2011 ರಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಇಲಾಖೆಗೆ ಸೇರ್ಪಡೆಗೊಂಡಿದ್ದ ತಿಪ್ಪಣ್ಣ ನಾಗವ್ವ ಮಾದರ ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಮುಂಬಡ್ತಿಗೊಂಡು, ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಆರು ತಿಂಗಳುಗಳಿಂದ ಎ.ಎಸ್.ಐ. ಕರ್ತವ್ಯ ನಿರ್ವಹಿಸುತ್ತಿದ್ದರು.

ಇವರು ಪತ್ನಿ ದೀಪಾ ತಿಪ್ಪಣ್ಣ ಮಾದರ್ ಮತ್ತು ಮಕ್ಕಳಾದ ಹಾಗೂ ಎಂಬ ಮೂರು ಮಕ್ಕಳನ್ನು ಅಗಲಿದ್ದಾರೆ.ಪೊಲೀಸ್ ಇಲಾಖೆ ಅಧಿಕಾರಿಯ ನಿಧನಕ್ಕೆ ಕಂಬನಿ ಮಿಡಿದೆ.

DAKSHINA KANNADA

ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ

Published

on

ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್‌ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್‌ಗಳನ್ನು ತೆರೆದಿದೆ.

ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್‌ಗಳನ್ನು ತೆರೆಯಲಾಗಿದೆ.

ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್‌ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್‌ಗಳು ನೇರವಾಗಿ ಪ್ಲಾಟ್‌ಫಾರ್ಮ್‌ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.

ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

Continue Reading

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್‌

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

Published

on

ಮಂಗಳೂರು ( ರಾಜಸ್ಥಾನ ) :  ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.

ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.

ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.

Continue Reading

LATEST NEWS

Trending